ಚಾಂಪಿಯನ್ಸ್ ಟ್ರೋಫಿಗಾಗಿ ಬಿಸಿಸಿಐ 15 ಸದಸ್ಯರ ಟೀಮ್ ಇಂಡಿಯಾವನ್ನು ಈ ವಾರ ಘೋಷಿಸಲಿದೆ. ಈ ತಂಡದ ನಾಯಕರಾಗಿ ರೋಹಿತ್ ಶರ್ಮಾ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಕಳೆದ ಬಾರಿಯ ಏಕದಿನ ವಿಶ್ವಕಪ್ನಲ್ಲಿ ಕಣಕ್ಕಿಳಿದ ಆಟಗಾರರನ್ನೇ ಚಾಂಪಿಯನ್ಸ್ ಟ್ರೋಫಿಗೆ ಪರಿಗಣಿಸುವ ಸಾಧ್ಯತೆ ಹೆಚ್ಚಿದೆ. ಅದರಂತೆ ಚಾಂಪಿಯನ್ಸ್ ಟ್ರೋಫಿಗಾಗಿ ಭಾರತ ಸಂಭಾವ್ಯ ತಂಡ ಈ ಕೆಳಗಿನಂತಿದೆ…ಬಹುನಿರೀಕ್ಷಿತ ಚಾಂಪಿಯನ್ಸ್ ಟ್ರೋಫಿಗೆ ದಿನಗಣನೆ ಶುರುವಾಗಿದೆ. ಫೆಬ್ರವರಿ 19 ರಿಂದ ಆರಂಭವಾಗಲಿರುವ ಈ ಟೂರ್ನಿಯಲ್ಲಿ 8 ತಂಡಗಳು ಕಣಕ್ಕಿಳಿಯಲಿವೆ. ಈ ತಂಡಗಳನ್ನು ಘೋಷಿಸಲು ಜನವರಿ 12ರವರೆಗೆ ಗಡುವು ವಿಧಿಸಲಾಗಿದ್ದು, ಹೀಗಾಗಿ ಈ ವಾರದೊಳಗೆ ಎಲ್ಲಾ ತಂಡಗಳು ಪ್ರಕಟಗೊಳ್ಳಲಿದೆ. ಇತ್ತ ಈ ಬಾರಿಯ ಟೂರ್ನಿಯಲ್ಲಿ ಭಾರತ ತಂಡವನ್ನು ಪ್ರತಿನಿಧಿಸುವವರು ಯಾರು ಕುತೂಹಲ ಎಲ್ಲರಲ್ಲಿ ಮನೆ ಮಾಡಿದೆ.ಅದರಲ್ಲೂ ಕಳೆದ ಬಾರಿ ಏಕದಿನ ವಿಶ್ವಕಪ್ನಲ್ಲಿ ಕಣಕ್ಕಿಳಿದಿದ್ದ ಆಟಗಾರರನ್ನು ಚಾಂಪಿಯನ್ಸ್ ಟ್ರೋಫಿಗೆ ಆಯ್ಕೆ ಮಾಡುವುದು ಖಚಿತ. ಏಕೆಂದರೆ ಈ ಬಾರಿಯ ಚಾಂಪಿಯನ್ಸ್ ಟ್ರೋಫಿ ಏಕದಿನ ಮಾದರಿಯಲ್ಲಿ ನಡೆಯಲಿದೆ. ಹೀಗಾಗಿ ಏಕದಿನ ವಿಶ್ವಕಪ್ನಲ್ಲಿ ಅದ್ಭುತ ಪ್ರದರ್ಶನ ನೀಡಿದ ಆಟಗಾರರನ್ನೇ ಚಾಂಪಿಯನ್ಸ್ ಟ್ರೋಫಿಗೂ ಪರಿಗಣಿಸಲಿದ್ದಾರೆ. ಅದರಂತೆ ಟೀಮ್ ಇಂಡಿಯಾದ ಸಂಭಾವ್ಯ ಬಳಗ ಈ ಕೆಳಗಿನಂತಿರಲಿದೆ….ಬ್ಯಾಟರ್ಗಳು: ರೋಹಿತ್ ಶರ್ಮಾ, ಶುಭ್ಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ರಿಷಭ್ ಪಂತ್ (ವಿಕೆಟ್ ಕೀಪರ್).ಆಲ್ರೌಂಡರ್ಗಳು: ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್. ಇವರ ಜೊತೆ ಪರಿಪೂರ್ಣ ಸ್ಪಿನ್ನರ್ ಆಗಿ ಕುಲ್ದೀಪ್ ಯಾದವ್ ಕಾಣಿಸಿಕೊಳ್ಳಲಿದ್ದಾರೆ.ವೇಗದ ಬೌಲರ್ಗಳು: ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್ ಮತ್ತು ಮೊಹಮ್ಮದ್ ಶಮಿ. ಇವರೊಂದಿಗೆ ಹೆಚ್ಚುವರಿ ಬೌಲರ್ಗಳನ್ನು ಮೀಸಲು ಪಟ್ಟಿಯಲ್ಲಿ ಆಯ್ಕೆ ಮಾಡಬಹುದು.
Entre agora e aproveite o pacote de boas-vindas mais falado do momento – Pagamentos e Saques na Mostbet , Mostbet – o cassino online que faz acontecer de verdade .
1 ಟಿಪ್ಪಣಿ
Entre agora e aproveite o pacote de boas-vindas mais falado do momento – Pagamentos e Saques na Mostbet , Mostbet – o cassino online que faz acontecer de verdade .