ಬೆಂಗಳೂರು,ಜ.13:
ಲೋಕೋಪಯೋಗಿ, ನೀರಾವರಿ, ನಗರಾಭಿವೃದ್ಧಿ ಸಿ
ಸೇರಿದಂತೆ ರಾಜ್ಯದ ವಿವಿಧ ಇಲಾಖೆಗಳ ಕಾಮಗಾರಿ ಪೂರ್ಣಗೊಳಿಸಿರುವ ಗುತ್ತಿಗೆದಾರರು ತಮ್ಮ ಬಾಕಿ ಬಿಲ್ ಪಾವತಿಗೆ ಆಗ್ರಹಿಸಿ ಉಪಮುಖ್ಯಮಂತ್ರಿ ಸೇರಿದಂತೆ ಸರ್ಕಾರದ ಹಲವು ಮಂತ್ರಿಗಳಿಗೆ ಪತ್ರ ಬರೆದಿದ್ದಾರೆ.
ರಾಜ್ಯಾದ್ಯಂತ ಸರ್ಕಾರದ ಕಾಮಗಾರಿ ಪೂರ್ಣಗೊಳಿಸಿರುವ ಗುತ್ತಿಗೆದಾರರಿಗೆ ಸುಮಾರು 30 ಸಾವಿರ ಕೋಟಿ ಬಿಲ್ ಬಾಕಿ ನೀಡಬೇಕಾಗಿದೆ ಈ ಬಗ್ಗೆ ತಕ್ಷಣವೇ ಸಭೆ ಕರೆದು ಪಾವತಿ ಮಾಡಲು ಕ್ರಮ ಕೈಗೊಳ್ಳಬೇಕು ಇಲ್ಲವಾದರೆ ಮುಂದಿನ ಹೋರಾಟದ ರೂಪುರೇಷೆ ಪ್ರಕಟಿಸಲಾಗುವುದು ಎಂದು ಹೇಳಿದ್ದಾರೆ.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ, ವಸತಿ ಸಚಿವ ಜಮೀರ್ ಅಹ್ಮದ್ ಖಾನ್, ಸಣ್ಣ ನೀರಾವರಿ ಸಚಿವ ಎನ್. ಎಸ್. ಬೋಸರಾಜು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್, ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಸಿ. ಮಹದೇವಪ್ಪ, ಪೌರಾಡಳಿತ ಖಾತೆ ಸಚಿವ ರಹೀಂ ಖಾನ್ ಅವರಿಗೆ ಜನವರಿ 9 ರಂದು ಪತ್ರ ಬರೆಯಲಾಗಿದೆ.
ರಾಜ್ಯ ಗುತ್ತಿಗೆದಾರ ಸಂಘದ ಹಂಗಾಮಿ ಅಧ್ಯಕ್ಷ ಜಗನ್ನಾಥ್ ಬಿ. ಶೇಗಜಿ ಹಾಗೂ ಪ್ರಧಾನ ಕಾರ್ಯದರ್ಶಿ ಜಿ.ಎಂ. ರವೀಂದ್ರ ಪತ್ರ ಬರೆದಿದ್ದು ಈ ಪತ್ರ ತಲುಪಿದ ಏಳು ದಿನಗಳಲ್ಲಿ ಸಭೆ ಕರೆದು ಗುತ್ತಿಗೆದಾರಿಗೆ ನ್ಯಾಯ ಒದಗಿಸಬೇಕು. ಇಲ್ಲದಿದ್ದರೆ ಈ ವಿಷಯವನ್ನು ಮುಖ್ಯಮಂತ್ರಿಯವರ ಗಮನಕ್ಕೆ ತಂದು, ಮುಂದಿನ ಹೋರಾಟ ಆರಂಭಿಸಲಾಗುತ್ತದೆ’ ಎಂದು ಎಚ್ಚರಿಸಿದ್ದಾರೆ.