ಬೆಂಗಳೂರು,ಜ.27-
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಅಕ್ರಮ ನಿವೇಶನ ಹಂಚಿಕೆ ಆರೋಪ ಹಠಾತ್ ತೀವ್ರ ಸ್ವರೂಪ ಪಡೆದುಕೊಂಡಿದೆ
ಹಗರಣ ಆರೋಪ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ (ಇಡಿ) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಮತ್ತು ನಗರಾಭಿವೃದ್ಧಿ ಮಂತ್ರಿ ಭೈರತಿ ಸುರೇಶ್ ಅವರಿಗೆ ನೋಟಿಸ್ ನೀಡಿದೆ.
ಆರೋಪ ಸಂಬಂಧ ಇಂದು ಇಲ್ಲವೇ ನಾಳೆ ವಿಚಾರಣೆಗೆ ಹಾಜರಾಗುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಮತ್ತು ಭೈರತಿ ಸುರೇಶ್ ಅವರಿಗೆ ಇಡಿ ಅಧಿಕಾರಿಗಳು ನೀಡಿರುವ ನೋಟೀಸ್ ನಲ್ಲಿ ತಿಳಿಸಿದ್ದಾರೆ.
ಇಡಿ ಅಧಿಕಾರಿಗಳು ನೀಡಿರುವ ನೋಟಿಸ್ ಸಿಗುತ್ತಿದ್ದಂತೆ ಪಾರ್ವತಿ ಸಿದ್ದರಾಮಯ್ಯ ಮತ್ತು ಭೈರತಿ ಸುರೇಶ್ ಧಾರವಾಡ ಏಕಸದಸ್ಯ ಪೀಠದಲ್ಲಿ ಕಾರ್ಯ ನಿರ್ವಹಿಸುತ್ತಿರುವ ನ್ಯಾಯಮೂರ್ತಿ ನಾಗಪ್ರಸನ್ನ ಅವರ ಪೀಠದ ಮುಂದೆ ಎರಡು ಪ್ರತ್ಯೇಕ ಅರ್ಜಿ ಸಲ್ಲಿಸಿದ್ದಾರೆ.
ಈ ಸಂಬಂಧ ತುರ್ತು ವಿಚಾರಣೆ ನಡೆಸುವಂತೆ ಹಿರಿಯ ವಕೀಲ ವಿಕ್ರಮ್ ಹುಯಿಲಗೋಳ್ ಪೀಠಕ್ಕೆ ಮನವಿ ಮಾಡಿದರು.
ದಿನದ ಕಲಾಪದ ಕೊನೆಯಲ್ಲಿ ವಿಚಾರಣೆ ನಡೆಸುವುದಾಗಿ ನ್ಯಾ.ಎಂ.ನಾಗಪ್ರಸನ್ನ ಒಪ್ಪಿಗೆ ಸೂಚಿಸಿದರು.
300 ಕೋಟಿ ಸ್ಥಿರಾಸ್ತಿ:
ಹಗರಣಕ್ಕೆ ಸಂಬಂಧಿಸಿದಂತೆ ಇಡಿ ಈಗಾಗಲೇ ಸುಮಾರು 300 ಕೋಟಿ ರೂ. ಮೌಲ್ಯದ 142 ಸ್ಥಿರಾಸ್ತಿ ಮುಟ್ಟುಗೋಲು ಹಾಕಿಕೊಂಡಿದೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ ರಿಯಲ್ ಎಸ್ಟೇಟ್ ಉದ್ಯಮಿಗಳು, ಏಜೆಂಟ್ಗಳು ಸೇರಿದಂತೆ ವಿವಿಧ ವ್ಯಕ್ತಿಗಳ ಹೆಸರಿನಲ್ಲಿದ್ದ ಪ್ರಾಪರ್ಟಿ, ನಿವೇಶನ, ಜಮೀನು ಸೇರಿದಂತೆ ಇನ್ನಿತರ ಆಸ್ತಿ ಒಳಗೊಂಡಂತೆ ಅಂದಾಜು 300 ಕೋಟಿ ರೂ. ಮೌಲ್ಯದ 142 ಸ್ಥಿರ ಆಸ್ತಿಗಳನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿತ್ತು.
ಜಯರಾಮ್, ರಾಕೇಶ್ ಪಾಪಣ್ಣ ರಿಯಲ್ ಎಸ್ಟೇಟ್ ಉದ್ಯಮಿಗಳಾಗಿದ್ದು, ಮಂಜುನಾಥ್ ಹಾಗೂ ತೇಜಸ್ ಎಂದುವವರಿಗೆ ಸೇರಿದ ಆಸ್ತಿ ಜಪ್ತಿ ಮಾಡಲಾಗಿತ್ತು. ಈ ಹಿಂದೆ ಮುಡಾ ಆಯುಕ್ತರಾಗಿದ್ದ ನಟೇಶ್ ಮತ್ತು ದಿನೇಶ್ ಆಸ್ತಿ ಕೂಡ ಜಪ್ತಿ ಮಾಡಿದ್ದು, ಮತ್ತಷ್ಟು ಹೆಸರುಗಳು ಇಡಿ ಪಟ್ಟಿಯಲ್ಲಿರುವ ಇರುವ ಸಾಧ್ಯತೆ ಇದೆ.
Previous Articleಗುರುರಾಯರ ಹೆಸರಲ್ಲೂ ವಂಚನೆ
Next Article ಮಕ್ಕಳ ಮಾರಾಟ ಜಾಲ ಹೇಗೆ ಕೆಲಸ ಮಾಡುತ್ತೆ ಗೊತ್ತಾ