ಧಾರವಾಡ : ಧಾರವಾಡ ಜಿಲ್ಲೆಯಲ್ಲಿ ನಿನ್ನೆಯಿಂದ ಅತಿಯಾದ ಮಳೆ ಆಗುತ್ತಿರುವುದರಿಂದ ಕರ್ನಾಟಕ ವಿಶ್ವವಿದ್ಯಾಲಯದ ಎಲ್ಲ ಸ್ನಾತಕೋತ್ತರ ವಿಭಾಗಗಳ ಹಾಗು ಅಧೀನ ಕಾಲೇಜುಗಳ ತರಗತಿಗಳಿಗೆ ಇಂದು ಮೇ .20 ರಂದು ಒಂದು ದಿನದ ರಜೆ ಘೋಷಿಸಿ ಕುಲಸಚಿವ ಯಶಪಾಲ ಕ್ಷೀರಸಾಗರ ಆದೇಶಿಸಿದ್ದಾರೆ. ಹವಾಮಾನ ಇಲಾಖೆ ಮಳೆ ಮುಂದುವರಿಯುವ ಮುನ್ಸೂಚನೆ ನೀಡಿದ್ದು , ಇದೇ ರೀತಿಯಲ್ಲಿ ಮಳೆ ಮುಂದುವರೆದರೆ ಪರಿಶೀಲಿಸಿ ಕ್ರಮವಹಿಸಲಾಗುವುದು. ವಿದ್ಯಾರ್ಥಿಗಳಿಗೆ ತೊಂದರೆ ಆಗಬಾರದೆಂದು ಇಂದು ಒಂದು ದಿನ ಮಾತ್ರ ಕವಿವಿಯ ಎಲ್ಲ ವರ್ಗದ ತರಗತಿಗಳಿಗೆ ರಜೆ ನೀಡಲಾಗಿದೆ ಮತ್ತು ಎಲ್ಲ ಶಿಕ್ಷಕ ಹಾಗು ಶಿಕ್ಷಕೇತರ ಸಿಬ್ಬಂದಿ ಎಂದಿನಂತೆ ಕಚೇರಿ ಕರ್ತವ್ಯಕ್ಕೆ ಹಾಜರಾಗಬೇಕೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.