ಬೆಂಗಳೂರು,ಮಾ.12-
ಕೊಲ್ಲಿ ರಾಷ್ಟ್ರಗಳಿಂದ ಅಕ್ರಮವಾಗಿ ಚಿನ್ನ ಸಾಗಾಣಿಕೆ ಆರೋಪದಲ್ಲಿ ಬಂಧಿತರಾಗಿರುವ ಮಾಣಿಕ್ಯ ನಟಿ ರನ್ಯಾ ತನಗಿರುವ ವಿಶೇಷ ಸೌಲಭ್ಯಗಳಿಂದಾಗಿ ಚಿನ್ನ ಸಾಗಿಸುವ ಕೊರಿಯರ್ ಆಗಿ ಕೆಲಸ ಮಾಡುತ್ತಿದ್ದ ಅಂಶ ಬೆಳಕಿಗೆ ಬಂದಿದೆ.
ದುಬೈನಲ್ಲಿ ಚಿನ್ನ ಸಂಗ್ರಹಿಸುವ ಕುರಿತು ನಟಿ ರನ್ಯಾ ರಾವ್ ಗೆ ಸ್ನೇಹಿತ ಹಾಗೂ ಹೋಟೆಲ್ ಉದ್ಯಮಿ ಪುತ್ರ ತರುಣ್ ರಾಜ್ ಮಾಹಿತಿ ನೀಡಿ ಅಲ್ಲಿಂದ ಬೆಂಗಳೂರಿಗೆ ಹೇಗೆ ಸಾಗಿಸಬೇಕು ಎಂಬ ನೀಲನಕ್ಷೆಯನ್ನು ರವಾನಿಸುತ್ತಿರುವುದು ಡಿಆರ್ ಐ ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ.
ಬಂಧಿತ ತರುಣ್‌ನನ್ನು ಡಿಆರ್‌ಐ ಅಧಿಕಾರಿಗಳು ತೀವ್ರ ವಿಚಾರಣೆ ನಡೆಸಿ ಹಲವು ಮಾಹಿತಿಯನ್ನು ಕಲೆ ಹಾಕ ತೊಡಗಿದ್ದಾರೆ.
ದುಬೈ ಪಯಣದಲ್ಲಿ ಗೆಳತಿ ಜತೆ ನಿರಂತರವಾಗಿ ಆತ ಸಂಪರ್ಕದಲ್ಲಿದ್ದು ಸೂಚನೆ ಕೊಡುತ್ತಿದ್ದ.ತನ್ನ ಗೆಳೆಯನ ಸೂಚನೆ ಅನುಸಾರ ರನ್ಯಾ ನಡೆದುಕೊಳ್ಳುತ್ತಿದ್ದರು. ಹೀಗಾಗಿ ವಿದೇಶದಿಂದ ಚಿನ್ನ ಸಾಗಿಸುವ ಜಾಲದ ಕೊರಿಯರ್ ಆಗಿ ರನ್ಯಾ ಬಳಕೆಯಾಗಿರಬಹುದು ಎಂದು ತಿಳಿದು ಬಂದಿದೆ.
ಈಗಾಗಲೇ ತಮ್ಮ ವಶದ…