ಬೆಂಗಳೂರು,ಏ.4-
ವಿವಾದಾತ್ಮಕ ವಕ್ಫ್ (ತಿದ್ದುಪಡಿ) ಮಸೂದೆಯು ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಅಂಗೀಕಾರಗೊಂಡ ಬೆನ್ನಲ್ಲೇ ಸಮಾಜ ವಿರೋಧಿ ಶಕ್ತಿಗಳಿಂದ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ಉಂಟಾಗಲಿದೆ ಎಂದು ಕೇಂದ್ರ ಗುಪ್ತದಳ ಎಚ್ಚರಿಸಿದೆ.
ಕರ್ನಾಟಕವೂ ಸೇರಿದಂತೆ ದೇಶದ ಹಲವೆಡೆ ವಿಚ್ಛಿದ್ರಕಾರಕ ಶಕ್ತಿಗಳು ಕಾನೂನು ಸುವ್ಯವಸ್ಥೆಗೆ ಭಂಗ ತರುವ ರೀತಿಯಲ್ಲಿ ಸಂಚು ರೂಪಿಸಿವೆ. ಇದರಿಂದ ಜನಸಾಮಾನ್ಯರ ದಿನದಿತ್ಯದ ಬದುಕಿನ ಮೇಲೆ ದುಷ್ಪರಿಣಾಮ ಉಂಟಾಗುವ ಸಾಧ್ಯತೆಯಿದ್ದು ವ್ಯಾಪಕ ಮುಂಜಾಗ್ರತೆ ವಹಿಸುವಂತೆ ಸೂಚಿಸಿದೆ.
ಕೇಂದ್ರ ಗುಪ್ತದಳ ಎಚ್ಚರಿಕೆ ಸಂದೇಶ ರವಾನಿಸಿದ ಬೆನ್ನಲ್ಲೇ ರಾಜ್ಯದ ಹಲವು ಸೂಕ್ಷ್ಮ ಪ್ರದೇಶಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.
ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಪ್ರದೇಶಗಳಲ್ಲಿ ಭದ್ರತೆಯನ್ನು ಬಿಗಿಗೊಳಿಸಿ ನಿಗಾ ವಹಿಸುವಂತೆ ಗೃಹ ಇಲಾಖೆ ರಾಜ್ಯದ ಎಲ್ಲಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಿದೆ.
ಅತ್ಯಂತ ಜನದಟ್ಟಣೆಯ ಪ್ರದೇಶಗಳಾದ ಬಸ್ ನಿಲ್ದಾಣ ರೈಲು ನಿಲ್ದಾಣ ಮತ್ತು ಪ್ರವಾಸಿ ತಾಣಗಳಲ್ಲಿ ಹೆಚ್ಚಿನ ಪೊಲೀಸ್ ಭದ್ರತೆಯನ್ನು ಮಾಡಲಾಗಿದೆ ಅನುಮಾನಾಸ್ಪದ ವ್ಯಕ್ತಿಗಳು ಮತ್ತು ಅನುಮಾನ ವಸ್ತುಗಳ ಬಗ್ಗೆ ತಕ್ಷಣವೇ ಸಮೀಪದ ಠಾಣೆಗಳಿಗೆ ಮಾಹಿತಿ ನೀಡಿ ಎಂದು ಸಾರ್ವಜನಿಕರಲ್ಲಿ ಪೊಲೀಸರು ಮನವಿ ಮಾಡಿದ್ದಾರೆ.
ರಾಜರ ಎಲ್ಲ ಧಾರ್ಮಿಕ ಕ್ಷೇತ್ರಗಳ ಸುತ್ತಮುತ್ತಲೂ ಪೊಲೀಸ್ ನಿಗಾ ಹೆಚ್ಚಿಸಲಾಗಿದೆ
Previous Articleಹನಿ ಟ್ರ್ಯಾಪ್ ನಲ್ಲಿ 69 ರ ವೃದ್ಧ
Next Article ಮೂರು ತಿಂಗಳಲ್ಲಿ 50 ಕಿಲೋ ಚಿನ್ನ ತಂದ ನಟಿ ರನ್ಯಾ