ಬೆಂಗಳೂರು,ಏ.29-
ಡ್ರೋನ್ ತಂತ್ರಜ್ಞಾನ ದತ್ತಾಂಶ ಕಳವು ಪ್ರಕರಣದ ಕುರಿತಂತೆ ಮರು ತನಿಖೆಗೆ ಆದೇಶಿಸಿರುವ ಹೈಕೋರ್ಟ್, ಡಿಜಿಪಿ ಪ್ರಣಬ್ ಮೊಹಂತಿ ನೇತೃತ್ವದಲ್ಲಿ ವಿಶೇಷ ತನಿಖಾ ದಳ ರಚನೆಗೆ ಆದೇಶಿಸಿದೆ.
ಅಲ್ಲದೆ, ಇತ್ತೀಚಿನ ದಿನಗಳಲ್ಲಿ ಸೈಬರ್ ಅಪರಾದ ಪ್ರಕರಣಗಳು ದೇಶದೆಲ್ಲೆಡೆ ಹೆಚ್ಚುತ್ತಿರುವುದರಿಂದ ಸೈಬರ್ ಅಪರಾಧ ತನಿಖಾ ಬ್ಯುರೋ ಸ್ಥಾಪನೆ ಮಾಡುವುದು ಒಳ್ಳೆಯದು ಎಂದು ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದೆ.
ತನ್ನ ಕಂಪನಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಿಬ್ಬಂದಿಯಿಂದ ದತ್ತಾಂಶ ಕಳುವಾಗಿದ್ದು, ತನಿಖೆಗೆ ವಿಶೇಷ ತನಿಖಾ ದಳ ರಚನೆ ಮಾಡುವಂತೆ ಕೋರಿ ನ್ಯೂಸ್ಪೇಸ್ ರಿಸರ್ಚ್ ಅಂಡ್ ಟೆಕ್ನಾಲಜೀಸ್ ಪ್ರವೈಟ್ ಲಿಮಿಟೆಡ್ ಅರ್ಜಿ ಸಲ್ಲಿಸಿತ್ತು.
ಅರ್ಜಿಯ ವಿಚಾರಣೆ ನಡೆಸಿರುವ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕ ಸದಸ್ಯ ಪೀಠ, ಡ್ರೋನ್ ತಂತ್ರಜ್ಞಾನ ದತ್ತಾಂಶ ಕಳವು ಪ್ರಕರಣದ ಬಗ್ಗೆ ಮರು ತನಿಖೆಗೆ ಡಿಜಿಪಿ ಪ್ರಣಬ್ ಮೊಹಂತಿ ನೇತೃತ್ವದಲ್ಲಿ ತಂಡ ರಚಿಸಲು ಸೂಚನೆ ನೀಡಿದೆ
ಈ ತಂಡದಲ್ಲಿ ಐಪಿಎಸ್ ಅಧಿಕಾರಿ ಭೂಷಣ್ ಗುಲಾಬ್ ರಾವ್ ಬೊರಸೆ ಮತ್ತು ನಿಷಾ ಜೇಮ್ಸ್ ಇರಬೇಕು ಎಂದು ಸಲಹೆ ಮಾಡಿದೆ.
ಅಲ್ಲದೆ, ಎಸ್ಐಟಿ ಮೂರು ತಿಂಗಳಲ್ಲಿ ತನಿಖೆ ನಡೆಸಿ ವರದಿಯನ್ನು ಸಲ್ಲಿಸಬೇಕು. ಅದಕ್ಕಾಗಿ ಈ ಆದೇಶದ ಪ್ರತಿಯನ್ನು ರಿಜಿಸ್ಟ್ರಾರ್ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಗೃಹ ಕಾರ್ಯದರ್ಶಿ ಮುಂದಿಡಬೇಕು ಎಂದು ನ್ಯಾಯಾಲಯ ಆದೇಶದಲ್ಲಿ ತಿಳಿಸಿದ್ದು, ಮುಂದಿನ ವಿಚಾರಣೆಯನ್ನು ಜೂನ್ 2ಕ್ಕೆ ಮುಂದೂಡಿದೆ.
Previous Articleಮರ್ಯಾದೆ ಗೇಡು ಹತ್ಯೆ ಪತ್ತೆ
Next Article ವಿ.ಸಿ.ನಾಲೆಯಲ್ಲಿ ಸಿಕ್ಕ ಕಾರು ಬೆಚ್ಚಿ ಬೀಳಿಸಿತು