ಬೆಂಗಳೂರು,ಮೇ.21:
ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಅವರ ನಿವೃತ್ತಿಯಿಂದ ತೆರವಾದ
ಹುದ್ದೆಗೆ ಪ್ರಭಾರಿಯಾಗಿ ಸಿಐಡಿ ಡಿಜಿಪಿ ಡಾ.ಎಂ.ಎ.ಸಲೀಂ ಅವರನ್ನ ನೇಮಕ ಮಾಡಲಾಗಿದೆ.
ಸಿಐಡಿ ಡಿಜಿಪಿ ಡಾ.ಎಂ.ಎ.ಸಲೀಂ ಅವರನ್ನು
ಕೆಲ ದಿನಗಳ ಮಟ್ಟಿಗೆ ಪ್ರಭಾರಿ ಡಿಜಿ-ಐಜಿಪಿಯಾಗಿ ಸಲೀಂ ಅವರನ್ನು ನೇಮಿಸಿ ತದನಂತರ ಕೇಂದ್ರ ಲೋಕಸೇವಾ ಆಯೋಗದ ಸಮ್ಮತಿ ಬಳಿಕ ಅವರನ್ನು ಕಾಯಂಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ಗೊತ್ತಾಗಿದೆ
ಸೇವಾ ಹಿರಿತನ ಆಧಾರದ ಮೇರೆಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕರ ಹುದ್ದೆಗೆ ಅಗ್ನಿಶಾಮಕ ದಳದ ಡಿಜಿಪಿ ಪ್ರಶಾಂತ್ ಕುಮಾರ್ ಠಾಕೂರ್, ಸಿಐಡಿ ಡಿಜಿಪಿ ಸಲೀಂ, ಸೈಬರ್ ವಿಭಾಗದ ಡಿಜಿಪಿ ಪ್ರಣವ್ ಮೊಹಂತಿ ಸೇರಿ ಏಳು ಮಂದಿ ಹಿರಿಯ ಐಪಿಎಸ್ ಅಧಿಕಾರಿಗಳಿದ್ದಾರೆ.
ಆದರೆ ಹಿರಿತನದ ಮಾನದಂಡದಲ್ಲಿ ಡಿಜಿ-ಐಪಿಪಿ ಹುದ್ದೆಗೆ ಸಲೀಂ ಅವರನ್ನು ನೇಮಕ ಮಾಡಲಾಗಿದೆ. ಇದನ್ನು ಪ್ರಶ್ನಿಸಿ ಪ್ರಶಾಂತ್ ಕುಮಾರ್ ಠಾಕೂರ್, ಕೋರ್ಟ್ ಮೊರೆ ಹೋಗಬಹುದು ಎಂಬ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸಲೀಂ ಅವರನ್ನು ಪ್ರಭಾರಿಯನ್ನಾಗಿ ನೇಮಿಸಿದೆ.
ಸೇವೆ ಶ್ಲಾಘನೆ:
ಈ ನಡುವೆ ಕರ್ನಾಟಕ ಪೋಲಿಸರು ದೇಶದಲ್ಲೇ ಅತ್ಯುತ್ತಮ ದಕ್ಷತೆ ಮತ್ತು ಪ್ರಾಮಾಣಿಕತೆಗೆ ಇವರು ಹೆಸರುವಾಸಿಯಾಗಿದ್ದಾರೆ ಎಂದು ನಿರ್ಗಮಿತ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್
ಬಣ್ಣಿಸಿದರು.
ಕೋರಮಂಗಲದ ಕೆಎಸ್‌ಆರ್‌ಪಿ ಪರೇಡ್ ಮೈದಾನದಲ್ಲಿ ಇಂದು ಏರ್ಪಡಿಸಿದ್ದ ಬೀಳ್ಕೊಡುಗೆ ಕವಾಯತಿನಲ್ಲಿ ವಂದನೆ ಸ್ವೀಕರಿಸಿ ಅವರು ಮಾತನಾಡಿದರು.
ನಾನು ಬೆಂಗಳೂರು ನಗರ ಸೇರಿದಂತೆ ಕರ್ನಾಟಕ ರಾಜ್ಯದ ವಿವಿಧ ಪೊಲೀಸ್ ಘಟಕಗಳಲ್ಲಿ ಕರ್ತವ್ಯ ನಿರ್ವಹಿಸಿದ್ದೇನೆ. ಪ್ರತಿಯೊಂದು ವಿಭಾದಲ್ಲೂ ಕೆಲಸ ಮಾಡುವಾಗ ಎಲ್ಲಾ ಹಿರಿಯ ಹಾಗೂ ಕಿರಿಯ ಅಧಿಕಾರಿಗಳು ನನಗೆ ಪ್ರೋತ್ಸಾಹ ನೀಡಿದ್ದಾರೆ, ಅವರೆಲ್ಲರಿಗೂ ನಾನು ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಅವರು ಹೇಳಿದರು.
ಪೊಲೀಸ್ ಇಲಾಖೆಯಲ್ಲಿ ನಾನು 38 ವರ್ಷಗಳ ಕಾಲ ಸುದೀರ್ಘ ಸೇವೆ ಸಲ್ಲಿಸಿದ್ದೇನೆ. ರಾಜ್ಯ ಅಲ್ಲದೆ ವಿದೇಶದಲ್ಲೂ ಕರ್ತವ್ಯ ನಿರ್ವಹಿಸಿದ್ದೇನೆ, ಸಂದರ್ಭದಲ್ಲಿ ಬೇರೆ ಬೇರೆ ದೇಶ ಹಾಗೂ ವಿವಿಧ ರಾಜ್ಯಗಳ ಪೊಲೀಸ್ ತಂಡಗಳ ಸೇವೆ ಗಮನಿಸಿದ್ದೇನೆ. ಅದರಲ್ಲೂ ನಮ ಕರ್ನಾಟಕ ಪೊಲೀಸ್ ಪಡೆ ಅತ್ಯುತ್ತಮ ಬೆಸ್ಟ್ ಎಂದು ಹೇಳಲು ಹೆಮ್ಮೆಯಾಗುತ್ತಿದೆ ಎಂದು ಅವರು ಮುಕ್ತ ಕಂಠದಿಂದ ಶ್ಲಾಸಿದರು.
ಇದೇ ಸಂದರ್ಭದಲ್ಲಿ ಉತ್ತಮ ಕಾರ್ಯಕ್ಷಮತೆ ತೋರಿದ 200 ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗೆ ಇದೇ ಪ್ರಥಮ ಬಾರಿಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಹೆಸರಿನಲ್ಲಿ ಪ್ರಶಂಸನಾ ಸೇವಾ ಪದಕ ಪ್ರದಾನ ಮಾಡಿದ್ದೇನೆ.
ಈ ಪದಕ ನೀಡಲು ಸರ್ಕಾರದಿಂದ 200 ಮಂದಿಗೆ ಮಾತ್ರ ಅವಕಾಶವಿದೆ. ಎಲ್ಲರಿಗೂ ಕೊಡಲು ಸಾಧ್ಯವಿಲ್ಲ. ಇಲಾಖೆಯ ಎಲ್ಲಾ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿ ಉತ್ತಮ ಕರ್ತವ್ಯ ನಿರ್ವಹಿಸುತ್ತಿದ್ದಾರೆಂದು ಅವರು ಹೇಳಿದರು.
ಬೀಳ್ಕೊಡುಗೆ ಕವಾಯತಿನ ನೇತೃತ್ವವನ್ನು ಬೆಂಗಳೂರು ನಗರ ಪಶ್ಚಿಮ ವಿಭಾಗದ ಡಿಸಿಪಿ ಗಿರೀಶ್ ಅವರು ವಹಿಸಿದ್ದರು.
Previous Articleಪರಮೇಶ್ವರ್ ವಿರುದ್ಧ ED ಕೆಂಗಣ್ಣು
Next Article ರಾಜಾ ಕಾಲುವೆ ಒತ್ತುವರಿ ಮುಲಾಜಿಲ್ಲದೆ ತೆರವು
