Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಆಲಮಟ್ಟಿ ತಗಾದೆಗೆ‌ ಸಿಕ್ಕಿದ ಉತ್ತರ.
    ಸುದ್ದಿ

    ಆಲಮಟ್ಟಿ ತಗಾದೆಗೆ‌ ಸಿಕ್ಕಿದ ಉತ್ತರ.

    vartha chakraBy vartha chakraಜೂನ್ 6, 2025ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜೂ.5:
    ಕೃಷ್ಣ ಜಲವಿವಾದ ಕುರಿತಂತೆ ನ್ಯಾಯ ಮಂಡಳಿ ನೀಡಿರುವ ಐತೀರ್ಪಿನ ಅನ್ವಯ ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮುಂದಾಗಿರುವ ರಾಜ್ಯ ಸರ್ಕಾರ ಇದಕ್ಕೆ ಮಹಾರಾಷ್ಟ್ರ ತೆಗೆದಿರುವ ತಕರಾರಿಗೆ ಅವರದೇ ಸರ್ಕಾರದ ವರದಿಯನ್ನು ಉತ್ತರವಾಗಿ ನೀಡಲು ತೀರ್ಮಾನಿಸಿದೆ.
    ಆಲಮಟ್ಟಿ ಅಣೆಕಟ್ಟು ಹೆಚ್ಚಳ ಎತ್ತರದಿಂದ ಮಹಾರಾಷ್ಟ್ರದ ಸಾಂಗ್ಲಿ ಮತ್ತು ಕೊಲ್ಲಾಪುರ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಬರೆದಿರುವ ಪತ್ರಕ್ಕೆ ನೀರಾವರಿ ತಜ್ಞರ ವರದಿಯ ಮೂಲಕ ಉತ್ತರ ನೀಡಲು ಮುಂದಾಗಿದೆ
    ಮಹಾರಾಷ್ಟ್ರದ ಕೊಲ್ಹಾಪುರ, ಸಾಂಗ್ಲಿ ಜಿಲ್ಲೆಯಲ್ಲಿನ ಪ್ರವಾಹಕ್ಕೆ ರಾಜ್ಯದ ಆಲಮಟ್ಟಿ ಮತ್ತು ಹಿಪ್ಪರಗಿ ಜಲಾಶಯದಲ್ಲಿನ ನೀರಿನ ಸಂಗ್ರಹ ಕಾರಣವಲ್ಲ’ ಎಂದು ಮಹಾರಾಷ್ಟ್ರ ಸರ್ಕಾರ ರಚಿಸಿದ್ದ ನೀರಾವರಿ ತಜ್ಞರ ಸಮಿತಿ ನೀಡಿರುವ ವರದಿಯಲ್ಲಿ ಉಲ್ಲೇಖವಾಗಿದೆ ಎಂಬ ಅಂಶವನ್ನು ಮನದಟ್ಟು ಮಾಡಲು ತೀರ್ಮಾನಿಸಲಾಗಿದೆ.
    ಮಹಾರಾಷ್ಟ್ರದ ಸಾಂಗ್ಲಿ ಮತ್ತು ಕೊಲ್ಲಾಪುರ ಜಿಲ್ಲೆಯಲ್ಲಿ ಉಂಟಾಗುವ ಪ್ರವಾಹ ಪರಿಸ್ಥಿತಿಯ ಅಧ್ಯಯನಕ್ಕಾಗಿ ಅಲ್ಲಿನ ಸರ್ಕಾರ ಪ್ರವಾಹ ಅಧ್ಯಯನಕ್ಕಾಗಿ ಮಹಾರಾಷ್ಟ್ರ ಸರ್ಕಾರದ ಜಲಸಂಪನ್ಮೂಲ ಇಲಾಖೆಯ ನಿವೃತ್ತ ಪ್ರಧಾನ ಕಾರ್ಯದರ್ಶಿ ನಂದಕುಮಾರ ವಡನೆರೆ ನೇತೃತ್ವದಲ್ಲಿ 2020ರಲ್ಲಿ ಸಮಿತಿ ರಚಿಸಿತ್ತು. ಈ ಸಮಿತಿಯಲ್ಲಿ ನೀರಾವರಿ ತಜ್ಞರಾದ ಸಂಜಯ ಘನೇಕರ, ಆರ್.ಆರ್. ಪವಾರ, ಪ್ರದೀಪ ಪುರಂದರೆ, ಅತುಲ್‌ ಕಪೋಲೆ, ಆರ್.ಡಿ. ಮೊಹತೆ, ಎಸ್‌.ಎಲ್‌.ದಾಯಫುಲೆ, ಎನ್‌.ಎಸ್. ಖರೆ, ಧೈರ್ಯಶೀಲ ಪವಾರ ಅವರಿದ್ದರು.
    ಈ ಸಮಿತಿಯು ಆಲಮಟ್ಟಿ ಮತ್ತು ಹಿಪ್ಪರಗಿ ಜಲಾಶಯ ಸೇರಿ ಕರ್ನಾಟಕ, ಮಹಾರಾಷ್ಟ್ರ ರಾಜ್ಯದ ಕೃಷ್ಣಾ ನದಿ ಪಾತ್ರದಲ್ಲಿ ಆರು ತಿಂಗಳು ಅಧ್ಯಯನ ನಡೆಸಿದರು.
    ಆಲಮಟ್ಟಿಗೆ ಮಹಾರಾಷ್ಟ್ರ ತಜ್ಞರ ಸಮಿತಿ ಭೇಟಿ ನೀಡಿದಾಗ, ಕೃಷ್ಣ ಭಾಗ್ಯ ಜಲ ನಿಗಮ ನಿಯಮಿತ (ಕೆಬಿಜೆಎನ್‌ಎಲ್) ಅಧಿಕಾರಿಗಳು ಮಹಾರಾಷ್ಟ್ರದ ಅಧಿಕಾರಿಗಳಿಗೆ ಆಲಮಟ್ಟಿ ಜಲಾಶಯದಲ್ಲಿ ಪ್ರತಿ ವರ್ಷ ನೀರು ಸಂಗ್ರಹಿಸುವ ವಿಧಾನ, ಕೈಗೊಳ್ಳುವ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ವಿವರಿಸಿದ್ದರು. ತಾಂತ್ರಿಕ ಅಂಶಗಳ ಆಧಾರದ ಮೇಲೆ ಪ್ರವಾಹದ ಆರೋಪವನ್ನು ಅಲ್ಲಗಳೆದಿದ್ದರು.
    ಸಾಂಗ್ಲಿ, ಮಿರಜ್‌ ಮತ್ತು ಕೊಲ್ಹಾಪುರ ಭಾಗದಲ್ಲಿ ನೀರು ನುಗ್ಗಿ ಹಾನಿ ಸಂಭವಿಸಲು ಆಲಮಟ್ಟಿ ಮತ್ತು ಹಿಪ್ಪರಗಿ ಜಲಾಶಯಗಳೇ ಕಾರಣವೆಂದು ಪ್ರತಿ ವರ್ಷ ಮಹಾರಾಷ್ಟ್ರ ಸರ್ಕಾರವು ಆರೋಪಿಸುವುದರಲ್ಲಿ ಹುರುಳಿಲ್ಲ’ ಎಂದು ಮನದಟ್ಟು ಮಾಡಿಕೊಟ್ಟರು.
    ಇದಾದ ನಂತರ ಸಮಿತಿಯು ಮಹಾರಾಷ್ಟ್ರದಲ್ಲಿಯೂ ಕೂಡ ಅಧ್ಯಯನ ನಡೆಸಿ ಎಲ್ಲರ ಅಭಿಪ್ರಾಯ ಆಲಿಸಿ ತಾಂತ್ರಿಕ ವರದಿ ತಯಾರಿಸಿ, ಅಂದಿನ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಅವರಿಗೆ ವರದಿ ಸಲ್ಲಿಸಿದೆ.ಇದರಲ್ಲಿ
    ಪ್ರವಾಹ ಉಂಟಾಗಲು ಕರ್ನಾಟಕದ ಜಲಾಶಯಗಳು ಕಾರಣವಲ್ಲ. ನದಿಪಾತ್ರದಲ್ಲಿನ ಅತಿಕ್ರಮಣ, ಕಾನೂನು ಬಾಹಿರ ಕಟ್ಟಡಗಳ ನಿರ್ಮಾಣಗಳೇ ಮುಖ್ಯ ಕಾರಣ. ಜತೆಗೆ ಮಳೆಗಾಲದಲ್ಲಿ ಅತಿ ಮಳೆಯಾದ ತಕ್ಷಣವೇ ಹಳ್ಳ, ಕೊಳ್ಳ, ನದಿಗಳು ಏಕಾಏಕಿ ಉಕ್ಕಿ ಹರಿಯುವುದರಿಂದ ಪ್ರವಾಹ ಉಂಟಾಗುತ್ತದೆ’ ಎಂದು ಸ್ಪಷ್ಟಪಡಿಸಿದೆ.
    ಈ ವರದಿಯನ್ನು ಆಧಾರವಾಗಿಟ್ಟುಕೊಂಡು ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಕರ್ನಾಟಕ ಸರ್ಕಾರ ಮುಂದಾಗಿದೆ.
    ಎಂ.ಬಿ.ಪಾಟೀಲ್ ಹೇಳಿಕೆ:
    ಈ ನಡುವೆ ವಿವಾದ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಬೃಹತ್ ಮತ್ತು ಮಾಧ್ಯಮ ಕೈಗಾರಿಕೆಯ ಮಂತ್ರಿ ಎಂಬಿ ಪಾಟೀಲ್ ಆಲಮಟ್ಟಿ ಅಣೆಕಟ್ಟು ಹೆಚ್ಚಳ ಎತ್ತರ ವಿಚಾರ ಇದೀಗ ಮುಗಿದ ಅಧ್ಯಾಯವಾಗಿದೆ ನ್ಯಾಯ ಮಂಡಳಿಯೇ ಐತೀರ್ಪಿನಲ್ಲಿ ಅಣೆಕಟ್ಟು ಹೆಚ್ಚಳ ಎತ್ತರಕ್ಕೆ ಅನುಮತಿ ನೀಡಿದೆ ಅದರಂತೆ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದರು.
    ಪ್ರವಾಹ ಕುರಿತಂತೆ ಮಹಾರಾಷ್ಟ್ರ ಸರ್ಕಾರ ಎತ್ತಿರುವ ತಕರಾರಿಗೆ ಅವರದೇ ಸರ್ಕಾರದ ನೀರಾವರಿತಜ್ಞರ ಸಮಿತಿ ಉತ್ತರ ನೀಡಿದೆ ಹೀಗಿದ್ದರೂ ಅಲ್ಲಿನ ಸರ್ಕಾರ ವಿನಾಕಾರಣ ವಿವಾದ ಮಾಡುತ್ತಿದೆ ಎಂದು ದೂರಿದ್ದಾರೆ

    Verbattle
    Verbattle
    Verbattle
    ಕರ್ನಾಟಕ ಕಾನೂನು ನ್ಯಾಯ ಬೆಂಗಳೂರು ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous ArticleRCB ವಿರುದ್ಧ FIR ದಾಖಲು.
    Next Article ಕಾಲ್ತುಳಿತಕ್ಕೆ ಪ್ರತಾಪ್ ಸಿಂಹ ಕೊಟ್ಟ ಕಾರಣ ಕೇಳಿ.
    vartha chakra
    • Website

    Related Posts

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ಫೆಬ್ರವರಿ 21, 2026

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    ಫೆಬ್ರವರಿ 21, 2026

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ಫೆಬ್ರವರಿ 21, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ದ್ವೇಷ ಬಿತ್ತುವ ಸಿನಿಮಾ ನಮಗೆ ಬೇಡ: ‘ದಿ ಕೇರಳ ಸ್ಟೋರಿ-2’ ಬಹಿಷ್ಕರಿಸಲು ಕೇರಳ ಮುಖ್ಯಮಂತ್ರಿ ಖಡಕ್ ಸೂಚನೆ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Neiroset dlya ychebi_iesl ರಲ್ಲಿ ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    • http://vipautokiev.com/forum/viewthread.php?forum_id=13&thread_id=3474 ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • Neiroset dlya ychebi_jzsl ರಲ್ಲಿ ಶತ್ರು ಭೈರವಿಯಾಗ ಮಾಡಿ ಗೆದ್ದಿಲ್ಲ.
    Latest Kannada News

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ಫೆಬ್ರವರಿ 21, 2026

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    ಫೆಬ್ರವರಿ 21, 2026

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ಫೆಬ್ರವರಿ 21, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.