ಬೆಂಗಳೂರು,ಆ.17:
ಪಕ್ಷದ ನಿರ್ಧಾರದ ವಿರುದ್ಧ ಮಾತನಾಡಿದ ಕಾರಣಕ್ಕೆ ಸಚಿವ ಕೆ ಎನ್ ರಾಜಣ್ಣ ಅವರನ್ನು ಸಂಪುಟ ದಿಂದ ವಜಾ ಗೊಳಿಸಿದ ಬೆನ್ನಲ್ಲೇ ಪಕ್ಷದ ಆದೇಶ ಉಲ್ಲಂಘಿಸಿದ ಆರೋಪದಲ್ಲಿ ಮತ್ತೊಬ್ಬ ಕಾಂಗ್ರೆಸ್ ಪಕ್ಷದ ಶಾಸಕನಿಗೆ ಕೆಪಿಸಿಸಿ ಶಿಸ್ತು ಸಮಿತಿ ಶೋಕಾಸ್ ನೋಟಿಸ್ ಜಾರಿಗೊಳಿಸಿದೆ.
ಅಧಿಕಾರ ಹಸ್ತಾಂತರ ಮುಖ್ಯಮಂತ್ರಿ ಬದಲಾವಣೆ ಸೇರಿದಂತೆ ಯಾವುದೇ ವಿಚಾರಗಳ ಬಗ್ಗೆ ಮಾತನಾಡಬಾರದು ಎಂದು ಪಕ್ಷದ ಎಲ್ಲಾ ಶಾಸಕರುಗಳಿಗೆ ಮಂತ್ರಿಗಳಿಗೆ ಮತ್ತು ಕಾರ್ಯಕರ್ತರಿಗೆ ಕಟ್ಟಾಜ್ಞೆ ವಿಧಿಸಿದೆ.
ಹೀಗಿದ್ದರೂ ದಾವಣಗೆರೆ ಜಿಲ್ಲೆಯ ಚೆನ್ನಗಿರಿ ಕ್ಷೇತ್ರದ ಶಾಸಕ ಶಿವಗಂಗಾ ಬಸವರಾಜ ಅವರು ಮುಖ್ಯಮಂತ್ರಿ ಬದಲಾವಣೆ ಕುರಿತಾಗಿ ಹೇಳಿಕೆ ನೀಡಿದ್ದಾರೆ ಡಿಸೆಂಬರ್ ನಲ್ಲಿ ನಾಯಕತ್ವ ಬದಲಾವಣೆಯಾಗುವುದು ನಿಶ್ಚಿತ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಹೇಳಿದ್ದರು.
ಇದನ್ನು ರಾಜ್ಯ ಕಾಂಗ್ರೆಸ್ ಶಿಸ್ತು ಸಮಿತಿ ಗಂಭೀರವಾಗಿ ಪರಿಗಣಿಸಿ ನೋಟೀಸ್ ಜಾರಿ ಮಾಡಿದೆ.
ನಿಮ್ಮ ಈ ಬಹಿರಂಗ ಹೇಳಿಕೆಗಳು ಪಕ್ಷಕ್ಕೆ ಮುಜುಗರ ಉಂಟುಮಾಡಿದ್ದಲ್ಲದೆ, ಪಕ್ಷದ ಶಿಸ್ತು ಉಲ್ಲಂಘನೆ ಆಗಿದೆ. ನಿಮ್ಮ ಅಶಿಸ್ತಿನ ಹೇಳಿಕೆಗಳನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಈ ಕುರಿತು ಸ್ಪಷ್ಟನೆ ನೀಡುವಂತೆ ನೋಟಿಸ್ ನೀಡಲಾಗಿದೆ. ಈ ನೋಟಿಸ್ ತಲುಪಿದ 7 ದಿನಗಳಲ್ಲಿ ನಿಮ್ಮ ಹೇಳಿಕೆಗಳ ಬಗ್ಗೆ ಸಮಜಾಯಿಷಿ ನೀಡಬೇಕು’ ಎಂದು ತಿಳಿಸಿದೆ.
Previous Articleಚುನಾವಣೆ ಆಯೋಗದ ವಿರುದ್ಧ ಸಂಸತ್ತಿಲ್ಲಿ ಬ್ರಹ್ಮಾಸ್ತ್ರ
Next Article ಉಪ ರಾಷ್ಟ್ರಪತಿ ಯಾರಾಗುತ್ತಾರೆ ಗೊತ್ತಾ ?