ಬೆಂಗಳೂರು: ಸೋಮವಾರ ಚಿನ್ನದ ಬೆಲೆ ಭಾರೀ ಏರಿಕೆಯಾಗಿದೆ. 24 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 1,30,480 ರೂಪಾಯಿಗೆ ತಲುಪಿದೆ. 22 ಕ್ಯಾರೆಟ್ ಚಿನ್ನದ ಬೆಲೆಯೂ 10 ಗ್ರಾಂಗೆ 1,19,600 ರೂಪಾಯಿಗೆ ಹೆಚ್ಚಳವಾಗಿದೆ.
ಬೇಡಿಕೆ ಹೆಚ್ಚುತ್ತಿರುವ ನಡುವೆಯೂ ಚಿನ್ನದ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿದೆ. ಗರಿಷ್ಠ ಮಟ್ಟ 13,048 ರೂಪಾಯಿಗೆ ಏರಿಕೆ ಕಂಡಿದೆ. ಈ ನಡುವೆ ಬೆಳ್ಳಿಯ ಬೆಲೆಯಲ್ಲೂ ಹೆಚ್ಚಳವಾಗಿದ್ದು 1 ಕೆಜಿ ಬೆಳ್ಳಿಗೆ 1,88,000 ರೂಪಾಯಿಗೆ ಹೆಚ್ಚಳವಾಗಿದೆ. ಬೆಳ್ಳಿಯ ಬೆಲೆಯಲ್ಲೂ ನಿರಂತರ ಏರಿಕೆ ಕಂಡುಬಂದಿದೆ.
ಡಿಸೆಂಬರ್ ತಿಂಗಳ ಮೊದಲ ದಿನವೇ ಮಾರುಕಟ್ಟೆಗಳಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ ಒಂದು ಗ್ರಾಂಗೆ 13,048 ರೂಪಾಯಿ ಇದ್ದು, ಸೋಮವಾರವಾರ 66 ರೂಪಾಯಿ ಹೆಚ್ಚಳ ಆಗಿದೆ. 10 ಗ್ರಾಂ ಶುದ್ಧ ಚಿನ್ನಕ್ಕೆ 1,30,480 ರೂಪಾಯಿ ಇದೆ. 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ 660 ರೂ ಏರಿಕೆಯಾಗಿದೆ..
22 ಕ್ಯಾರೆಟ್ 1 ಗ್ರಾಂ ಚಿನ್ನದ ಬೆಲೆ 11,960 ರೂಪಾಯಿ ಇತ್ತು. ಅದು ಸೋಮವಾರ 60 ರೂ ಹೆಚ್ಚಳ ಆಗಿದೆ. 10 ಗ್ರಾಂ ಚಿನ್ನದ ಬೆಲೆ 1,19,600 ರೂಪಾಯಿ ಆಗಿದೆ.ಇದೆ.

