Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜಗತ್ತಿನ ಅತಿ ದೊಡ್ಡ ರಾಷ್ಟ್ರಧ್ವಜ ಅನಾವರಣ
    ಮಾಹಿತಿ

    ಜಗತ್ತಿನ ಅತಿ ದೊಡ್ಡ ರಾಷ್ಟ್ರಧ್ವಜ ಅನಾವರಣ

    vartha chakraBy vartha chakraಡಿಸೆಂಬರ್ 9, 2025ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಳಗಾವಿ, ಡಿ. 9:
    ಭಾರತದ ತ್ರಿವರ್ಣ ಧ್ವಜ ಕೇವಲ ಖಾದಿ ವಸ್ತ್ರವಾಗಿರದೇ, ಭಾರತದ ಹೆಮ್ಮೆ ಮತ್ತು ಸ್ವಾಭಿಮಾನದ ಸಂಕೇತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಣ್ಣಿಸಿದ್ದಾರೆ.
    ಬೆಳಗಾವಿಯ ಸುವರ್ಣ ಸೌಧದ ಪಶ್ಚಿಮ ದಿಕ್ಕಿನ ಮೆಟ್ಟಿಲುಗಳ ಮೇಲೆ ಜಗತ್ತಿನ ಎರಡನೇ ಅತೀ ದೊಡ್ಡ ಖಾದಿ ತ್ರಿವರ್ಣ ಧ್ವಜವನ್ನು ಅನಾವರಣ‌ ಮಾಡಿ ಮಾತನಾಡಿದ ಅವರು ಭಾರತದ ತ್ರಿವರ್ಣ ಧ್ವಜ ಕೇವಲ ರಾಷ್ಟ್ರಧ್ವಜ ಮಾತ್ರವಲ್ಲ ಅದು ನಮ್ಮ ಸ್ವಾಭಿಮಾನದ ಸಂಕೇತ ಎಂದು ಹೇಳಿದರು.
    ಸ್ವಾತಂತ್ರ್ಯ ಚಳವಳಿಯ ಸಂದರ್ಭದಲ್ಲಿ ತ್ರಿವರ್ಣ ಧ್ವಜವನ್ನು ಜಾರಿಗೆ ತಂದರು. ತ್ರಿವರ್ಣ ಧ್ವಜ ಕೇವಲ ಖಾದಿ ವಸ್ತ್ರವಲ್ಲ, ಇದು ಭಾರತದ ಹೆಮ್ಮೆ ಮತ್ತು ಸ್ವಾಭಿಮಾನದ ಸಂಕೇತ. ಈ ಧ್ವಜದಲ್ಲಿ ಮೂರು ವರ್ಣ ಮತ್ತು ಅಶೋಕ ಚಕ್ರವನ್ನು ಒಳಗೊಂಡಿದೆ. ಕೇಸರಿ, ಬಿಳಿ ಮತ್ತು ಹಸಿರು ಬಣ್ಣಗಳಿದ್ದು, ದೇಶದ ಸ್ವಾಭಿಮಾನ, ಆರ್ಥಿಕತೆ ಮತ್ತು ತ್ಯಾಗಬಲಿದಾನ ಹಾಗೂ ಶಾಂತಿಯ ಸಂದೇಶವನ್ನು ಸಾರುವ ಹಾಗೂ ಭಾರತೀಯರಿಗೆ ರಾಷ್ಟ್ರಭಕ್ತಿಯನ್ನು ಸಾರುವ ಸಂದೇಶವನ್ನು ನೀಡುತ್ತದೆ ಎಂದರು.
    ಬಿಳಿಬಣ್ಣ ಶಾಂತಿ ಮತ್ತು ಸತ್ಯವನ್ನು ಪ್ರತಿನಿಧಿಸಿದರೆ, ಹಸಿರು ಸಮೃದ್ಧಿಯನ್ನು ಬಿಂಬಿಸುತ್ತದೆ. ಅಶೋಕ ಚಕ್ರ ನಿರಂತರವಾಗಿ ದೇಶದ ಆರ್ಥಿಕತೆಯನ್ನು, ಹಾಗೂ ಎಲ್ಲರಿಗೂ ಸಮಾನ ಅವಕಾಶಗಳನ್ನು ಕಲ್ಪಿಸುವುದರ ಸಂಕೇತವಾಗಿದೆ ಎಂದು ವಿವರಿಸಿದರು.
    ನಮ್ಮ ರಾಷ್ಟ್ರದ ತ್ರಿವರ್ಣ ಧ್ವಜವನ್ನು ಗೌರವಿಸಿ ಹೆಮ್ಮೆಯಿಂದ ಕಾಣಬೇಕು. ಪ್ರತಿಯೊಬ್ಬರೂ ರಾಷ್ಟ್ರಪ್ರೇಮವನ್ನು ಬೆಳೆಸಿಕೊಳ್ಳಬೇಕು. ಈ ಸಂದರ್ಭದಲ್ಲಿ ರಾಷ್ಟ್ರಕ್ಕಾಗಿ ತ್ಯಾಗಬಲಿದಾನ, ಹೋರಾಟ ಮಾಡಿದವರನ್ನು ಸ್ಮರಿಸುವುದು ಅಗತ್ಯ. ಮಹಾತ್ಮ ಗಾಂಧೀಜಿಯವರ ನೇತೃತ್ವದಲ್ಲಿ ಸ್ವಾತಂತ್ರ ಹೋರಾಟ ನಡೆಯಿತು. ಬೆಳಗಾವಿಯಲ್ಲಿ ಕಾಂಗ್ರೆಸ್ ಅಧಿವೇಶನದ ಅಧ್ಯಕ್ಷತೆಯನ್ನು ಗಾಂಧೀಜಿ ವಹಿಸಿದ್ದರು. ಇದು ನಡೆದು ನೂರು ವರ್ಷಗಳಾದ ಹಿನ್ನೆಲೆಯಲ್ಲಿ ಕೆಳದ ವರ್ಷ ಬೆಳಗಾವಿಯಲ್ಲಿ ಮಹಾತ್ಮಾ ಗಾಂಧಿಯವರ ಪ್ರತಿಮೆಯನ್ನು ಸುವರ್ಣ ಸೌಧದ ಪಕ್ಕದಲ್ಲಿ ಸ್ಥಾಪಿಸಲಾಗಿದೆ ಎಂದರು.
    ನಾವೆಲ್ಲರೂ ದೇಶಪ್ರೇಮಿಗಳಾಗಬೇಕು. ದೇಶದಲ್ಲಿ ಅನೇಕ ಜಾತಿ, ಧರ್ಮಗಳಿದ್ದು, ನಾವೆಲ್ಲರೂ ಜಾತ್ಯತೀತರಾಗಬೇಕಾಗಿರುವುದು ಅವಶ್ಯಕ. ಮನುಷ್ಯ ಮನುಷ್ಯನನ್ನು ಪ್ರೀತಿಸಬೇಕೆ ಹೊರತು ದ್ವೇಷಿಸಬಾರದು. ಆಗ ಮಾತ್ರ ಸಮ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ. ಇಲ್ಲದಿದ್ದರೆ ಜಾತ್ಯತೀತ ರಾಷ್ಟ್ರ ನಿರ್ಮಾಣ ಕಷ್ಟವಾಗುತ್ತದೆ ಎಂದು ಅಭಿಪ್ರಾಯ ಪಟ್ಟರು.
    ಸ್ವಾತಂತ್ರ್ಯ ಬಂದು 79 ವರ್ಷಗಳಾಗಿವೆ. ನಾವೆಷ್ಟರಮಟ್ಟಿಗೆ ಭ್ರಾತೃತ್ವ, ದೇಶಪ್ರೇಮ, ಮನುಷ್ಯ ಸಮಾಜವನ್ನು ಈ ದೇಶದಲ್ಲಿ ಸಾಧಿಸಿದ್ದೇವೆ ಎಂದು ಆತ್ಮಾವಲೋಕನ ಮಾಡಿಕೊಳ್ಳಬೇಕು. ಇದಿಲ್ಲದೇ ಹೋದರೆ ಮನುಷ್ಯರಾಗಿ ಬಾಳುವುದು ಸಾಧ್ಯವಿಲ್ಲ. ಎಲ್ಲ ವಿದ್ಯಾರ್ಥಿಗಳಲ್ಲಿ, ಯುವಕರಲ್ಲಿ ಈ ಮನೋಭಾವ ಬೆಳೆಯಬೇಕು ಎಂದರು.
    ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನದ ಪೀಠಿಕೆಯನ್ನು ಶಾಲಾ ಕಾಲೇಜುಗಳಲ್ಲಿ ಓದಿಸುವ ಕೆಲಸವನ್ನು ಮಾಡುತ್ತಿದ್ದೇವೆ. ಅದಕ್ಕಾಗಿಯೇ ಇಂಥ ಐತಿಹಾಸಿಕ ಕಾರ್ಯಕ್ರಮವನ್ನು ಮಾಡುತ್ತಿದ್ದೇವೆ. ವಿನೋದ್ ಕುಮಾರ್ ರೇವಪ್ಪ ಬಮ್ಮಣ್ಣ ಅವರು ಕೊಟ್ಟಿರುವ ರಾಷ್ಟ್ರಧ್ವಜಕ್ಕಾಗಿ ಮುಖ್ಯಮಂತ್ರಿಗಳು ಧನ್ಯವಾದಗಳನ್ನು ಸಲ್ಲಿಸಿದರು.

    ಕಾಂಗ್ರೆಸ್ ಕಾಲೇಜು ಧರ್ಮ ವಿದ್ಯಾ ವಿದ್ಯಾರ್ಥಿ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಡಿ.ಕೆ ಶಿವಕುಮಾರ್ ಸಿಎಂ ಆಗಲಿ ಎಂದು ಘೋಷಣೆ ಮೊಳಗಿಸಿದ ಬೆಂಬಲಿಗರು
    Next Article ಚನ್ನರಾಜ ಹಟ್ಟಿಹೊಳಿ ಹಾಕಿದ ಪೋಸ್ಟ್ ನಲ್ಲಿ ಏನಿದೆ ಗೊತ್ತಾ?
    vartha chakra
    • Website

    Related Posts

    ಎಚ್ಚೆತ್ತ ರಾಜ್ಯ ಸರ್ಕಾರ

    ಡಿಸೆಂಬರ್ 12, 2025

    ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?

    ಡಿಸೆಂಬರ್ 12, 2025

    ಚನ್ನರಾಜ ಹಟ್ಟಿಹೊಳಿ ಹಾಕಿದ ಪೋಸ್ಟ್ ನಲ್ಲಿ ಏನಿದೆ ಗೊತ್ತಾ?

    ಡಿಸೆಂಬರ್ 12, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಎಚ್ಚೆತ್ತ ರಾಜ್ಯ ಸರ್ಕಾರ

    ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?

    ಚನ್ನರಾಜ ಹಟ್ಟಿಹೊಳಿ ಹಾಕಿದ ಪೋಸ್ಟ್ ನಲ್ಲಿ ಏನಿದೆ ಗೊತ್ತಾ?

    ಜಗತ್ತಿನ ಅತಿ ದೊಡ್ಡ ರಾಷ್ಟ್ರಧ್ವಜ ಅನಾವರಣ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • aviator_ufEt ರಲ್ಲಿ Boeing – ದೋಷಯುಕ್ತ ವಿಮಾನಗಳಿಂದಾಗಿ ಕುಖ್ಯಾತಿ!
    • Bryanapamp ರಲ್ಲಿ ಸೋತ ಕಾಂಗ್ರೆಸ್ ನಾಯಕರಿಗೆ ಪಾಠ.
    • Darrylser ರಲ್ಲಿ ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    Latest Kannada News

    ಎಚ್ಚೆತ್ತ ರಾಜ್ಯ ಸರ್ಕಾರ

    ಡಿಸೆಂಬರ್ 12, 2025

    ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?

    ಡಿಸೆಂಬರ್ 12, 2025

    ಚನ್ನರಾಜ ಹಟ್ಟಿಹೊಳಿ ಹಾಕಿದ ಪೋಸ್ಟ್ ನಲ್ಲಿ ಏನಿದೆ ಗೊತ್ತಾ?

    ಡಿಸೆಂಬರ್ 12, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಿಎಂ ವಿಮಾನಯಾನ ಬಳಕೆಗೆ 47 ಕೋಟಿ ಖರ್ಚು #varthachakra #siddaramaiah #helicopter #airtravel #costs #news
    Subscribe