ಬೆಳಗಾವಿ: ರಾಜ್ಯಾದ್ಯಂತ ಎಲ್ಲಾ ನಗರ, ಪಟ್ಟಣ ಪ್ರದೇಶಗಳಲ್ಲಿ ಒಂದು ತಿಂಗಳೊಳಗೆ ಕಡ್ಡಾಯವಾಗಿ ಕನ್ನಡ ಸಾಮಫಲಕಗಳನ್ನು ಅಳವಡಿಸಬೇಕು. ಇಲ್ಲದೇ ಹೋದರೆ ದಂಡ ವಿಧಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಎಚ್ಚರಿಕೆ ನೀಡಿದ್ದಾರೆ.
ಆಸ್ಪತ್ರೆಗಳು, ಮನರಂಜನಾ ಕೇಂದ್ರಗಳು, ಹೋಟೆಲ್ ಗಳು, ಕೈಗಾರಿಕೆಗಳು, ಎಲ್ಲಾ ವಾಣಿಜ್ಯ ಸಂಸ್ಥೆಗಳು ಮತ್ತು ಟ್ರಸ್ಟ್ ನಡೆಸುವ ಸಂಸ್ಥೆಗಳು ಕನ್ನಡ ನಾಮಫಲಕ ಅಳವಡಿಸುವುದು ಕಡ್ಡಾಯ ಎಂದು ಹೇಳಿದ್ದಾರೆ.
ಕನ್ನಡ ನಾಮಫಲಕ ಅಳವಡಿಸುವ ಬಗ್ಗೆ ನಿಗಾವಹಿಸಲು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಆದಷ್ಟು ಬೇಗ ರಾಜ್ಯದಲ್ಲಿ ನಿಯಮ ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ.
ಕನ್ನಡ ನಾಮಫಲಕವನ್ನ ಕಡ್ಡಾಯವಾಗಿ ಹಾಕದಿದ್ದರೆ ಮೊದಲ ಬಾರಿಗೆ 5 ಸಾವಿರ, ಎರಡನೇ ಬಾರಿಗೆ 10 ಸಾವಿರ ಹಾಗೂ ನಂತರದ ಪ್ರತಿ ಉಲ್ಲಂಘನೆಗೆ 20 ಸಾವಿರ ದಂಡ ವಿಧಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

