Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » 2028ರಲ್ಲಿಯೂ ಕಾಂಗ್ರೆಸ್ ಅಧಿಕಾರಕ್ಕೆ – ಸಿದ್ದರಾಮಯ್ಯ
    ರಾಜಕೀಯ

    2028ರಲ್ಲಿಯೂ ಕಾಂಗ್ರೆಸ್ ಅಧಿಕಾರಕ್ಕೆ – ಸಿದ್ದರಾಮಯ್ಯ

    vartha chakraBy vartha chakraಡಿಸೆಂಬರ್ 16, 2025Updated:ಡಿಸೆಂಬರ್ 16, 2025ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಳಗಾವಿ: 2023ರ ಚುನಾವಣೆಯಲ್ಲಿ ಜಯಭೇರಿ ಬಾರಿಸಿದಂತೆ 2028 ರಲ್ಲಿಯೂ ಜನಾರ್ಶೀವಾದದೊಂದಿಗೆ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದ್ದು, ಬಿಜೆಪಿಯವರು ಸದಾ ವಿರೋಧಪಕ್ಷದ ಸ್ಥಾನದಲ್ಲಿಯೇ ಇರಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
    ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ವಿಧಾನಸಭಾ ಕಲಾಪದಲ್ಲಿ ಪ್ರತಿಪಕ್ಷ ಸದಸ್ಯರ ಪ್ರಶ್ನೆಗೆ ಉತ್ತರಿಸಿ ಅವರು ಮಾತನಾಡಿದರು.
    ಉರಿಯುವುದರ ಮೇಲೆ ಉಪ್ಪು ಹಾಕಬಾರದೆಂಬ ಎಂಬ ಗಾದೆ ಮಾತಿದೆ. ವಿರೋಧಪಕ್ಷದವರು ಇರುವುದೇ ಉರಿಯುವುದರ ಮೇಲೆ ಉಪ್ಪು ಸುರಿಯಲು ಎಂದು ಟೀಕಿಸಿದರು. ವಿರೋಧಪಕ್ಷದವರು ಏನೇ ಪ್ರಚೋದನೆ ಮಾಡಿದರೂ, ನಮ್ಮ ಶಾಸಕರಾರೂ ಪ್ರಚೋದಿತರಾಗುವುದಿಲ್ಲ. 140 ಶಾಸಕರು ನಮ್ಮೊಂದಿಗಿದ್ದಾರೆ. ವಿರೋಧಪಕ್ಷದವರು ಇದರಲ್ಲಿ ಹುಳಿ ಹಿಂಡುವ ಅಗತ್ಯವಿಲ್ಲ ಎಂದು ಹೇಳಿದರು.
    2023 ರಲ್ಲಿ ಜನರು ಆಶೀರ್ವಾದ ಮಾಡಿದಂತೆ 2028 ರಲ್ಲಿಯೂ ಕಾಂಗ್ರೆಸ್ ಸರ್ಕಾರವೇ ಆಡಳಿತಕ್ಕೆ ಬರಲಿದೆ. ಜನರ ನಾಡಿಮಿಡಿತ ಸರ್ಕಾರಕ್ಕೆ ತಿಳಿದಿದೆ. ಕರ್ನಾಟಕದ ಜನ ಬಿಜೆಪಿಯನ್ನು ಎಂದಿಗೂ ಅಧಿಕಾರಕ್ಕೆ ತರುವುದಿಲ್ಲ. ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಎರಡು ಬಾರಿ ಅಧಿಕಾರ ನಡೆಸಿದರೂ, ಒಂದು ಬಾರಿಯೂ ಜನರ ಆಶೀರ್ವಾದದಿಂದ ಅಧಿಕಾರಕ್ಕೆ ಬಂದಿಲ್ಲ. 2008 , 2018 ರಲ್ಲಿ ಆಪರೇಷನ್ ಕಮಲ ಮಾಡಿ, ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದಿದ್ದಾರೆ. ರಾಜ್ಯದ ಜನ ಬಿಜೆಪಿಗೆ ಆಶೀರ್ವಾದ ಮಾಡುವುದಿಲ್ಲ ಎಂಬುದು ಸ್ಪಷ್ಟವಾಗಿದೆ. 2019 ರಲ್ಲಿ ಬಿಜೆಪಿ ಅಧಿಕಾರಕ್ಕೆ ಬರಬಾರದೆಂಬ ಉದ್ದೇಶದಿಂದ ಜೆಡಿಎಸ್ ನೊಂದಿಗೆ ಸರ್ಕಾರ ರಚಿಸಲಾಯಿತು. ಆದರೆ ಬಿಜೆಪಿಯವರು , ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿರುವ ಉದ್ದೇಶದ ಬಗ್ಗೆ ಪ್ರಶ್ನಿಸಿದರು.
    ಕಾಂಗ್ರೆಸ್ ಪಕ್ಷದಲ್ಲಿ ಹೈಕಮಾಂಡ್ ಮಾತು ಅಂತಿಮವಾಗಿರುತ್ತದೆ. ಆದರೆ ಬಿಜೆಪಿಯ ಅಧ್ಯಕ್ಷಗಿರಿ ಆಯ್ಕೆಯಲ್ಲಿ ಒಮ್ಮತ ಸಾಧಿಸಿಲ್ಲ. ಬಿಜೆಪಿಯವರಿಗೆ ಅಸೂಯೆ ಕಾಡುತ್ತಿದೆ. ಐದು ವರ್ಷ ಸುಭದ್ರ ಸರ್ಕಾರ ನೀಡುತ್ತೇವೆ ಹಾಗೂ ಮತ್ತೆ ಚುನಾವಣೆ ಎದುರಿಸಿ 2028 ರಲ್ಲಿಯೂ ಕಾಂಗ್ರೆಸ್ ಸರ್ಕಾರವೇ ಅಧಿಕಾರಕ್ಕೆ ಬರಲಿದೆ. 2013ರಲ್ಲಿ ಮತ್ತು 2023 ರಲ್ಲಿಯೂ ಕಾಂಗ್ರೆಸ್ ಗೆ ಜನರು ಆಶೀರ್ವಾದ ಮಾಡಿದ್ದಾರೆ, ಆದರೆ ಬಿಜೆಪಿಯವರಿಗೆ ಒಮ್ಮೆಯೂ ಜನಾದೇಶ ದೊರೆತಿಲ್ಲ ಹಾಗೂ ಭವಿಷ್ಯದಲ್ಲಿಯೂ ದೊರೆಯುವುದಿಲ್ಲ ಎಂದರು.

    Verbattle
    Verbattle
    Verbattle
    ಕರ್ನಾಟಕ ಕಾಂಗ್ರೆಸ್ ಚುನಾವಣೆ ಜೆಡಿಎಸ್ ಬಿಜೆಪಿ ಮೈ ಸರ್ಕಾರ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Article482 ಎಕರೆ ಅರಣ್ಯಭೂಮಿ ಕಬಳಿಸಿದವ ಏನಾದ ಗೊತ್ತಾ?
    Next Article ಅಧಿವೇಶನ ಕರೆದಿರುವುದು ಉತ್ತರ ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚಿಸಲು – ಡಿ.ಕೆ. ಶಿವಕುಮಾರ್
    vartha chakra
    • Website

    Related Posts

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಫೆಬ್ರವರಿ 16, 2026

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Fmztdn ರಲ್ಲಿ Siddaramaiahಗಾಗಿ Rules change! | Siddaramaiah | INC
    • Fmztdn ರಲ್ಲಿ Siddaramaiahಗಾಗಿ Rules change! | Siddaramaiah | INC
    • LinwoodGah ರಲ್ಲಿ ಭಾರತಕ್ಕೆ ಇನ್ನೊಬ್ಬ ವೈರಿ ಹುಟ್ಟಿಕೊಂಡನೇ?
    Latest Kannada News

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಫೆಬ್ರವರಿ 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಫೆಬ್ರವರಿ 16, 2026

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.