ಬೆಳಗಾವಿ: ನ್ಯಾಷನಲ್ ಹೆರಾಲ್ಡ್ ಈ ದೇಶದ ಆಸ್ತಿ. ದ್ವೇಷ ರಾಜಕಾರಣ ಬಿಜೆಪಿ ಆಸ್ತಿ. ಸತ್ಯಕ್ಕೆ ಸಾವಿಲ್ಲ, ಸುಳ್ಳು ಕೇಸ್ ಗಳಿಗೆ ಆಯುಷ್ಯವಿಲ್ಲ ಎಂಬುದಕ್ಕೆ ಮಂಗಳವಾರ ಬಂದ ನ್ಯಾಯಾಲಯದ ಆದೇಶವೇ ಸಾಕ್ಷಿ. ಸತ್ಯ ಮೇವ ಜಯತೆ, ಬಿಜೆಪಿಗಿಲ್ಲ ಘನತೆ. ನಮ್ಮನ್ನು ಪಿತೂರಿಯಿಂದ ಸೋಲಿಸಲು ಸಾಧ್ಯವಿಲ್ಲ, ದ್ವೇಷದಿಂದ ಕುಗ್ಗಿಸಲು ಸಾಧ್ಯವಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ಬೆಳಗಾವಿ ಸುವರ್ಣ ವಿಧಾನಸೌಧದ ಆವರಣದಲ್ಲಿ ಬುಧವಾರ ನಡೆದ ಧರಣಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಎಷ್ಟೇ ಪಿತೂರಿ ಮಾಡಿದರೂ ನಮಗೆ ನ್ಯಾಯ ಸಿಕ್ಕಿದೆ. ಬಿಜೆಪಿ ಎಂದರೆ ಬುರುಡೆ ಜನತಾ ಪಕ್ಷವಾಗಿದೆ. ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರನ್ನು ಜೈಲಿಗೆ ಹಾಕಲು ಪಿತೂರಿ ಮಾಡಲಾಗಿದೆ. ಈ ದ್ವೇಷ ರಾಜಕಾರಣ ಇಲ್ಲಿಗೆ ಕೊನೆಯಾಗಬೇಕು. ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಈ ಪ್ರತಿಭಟನೆ ಮುಂದುವರಿಯಲಿದೆ. ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ಜೊತೆ ನಿಂತು ಅವರ ಕೈ ಬಲಪಡಿಸೋಣ ಎಂದು ಕರೆ ನೀಡಿದರು.
ನ್ಯಾಷನಲ್ ಹೆರಾಲ್ಡ್ ಸಂಸ್ಥೆ ಮಹಾತ್ಮಾ ಗಾಂಧಿ ಅಥವಾ ನೆಹರು ಅವರ ಆಸ್ತಿಯಲ್ಲ. ಇದು ಕಾಂಗ್ರೆಸ್ ಪಕ್ಷದ ಆಸ್ತಿ. ಕಾಂಗ್ರೆಸ್ ಪಕ್ಷದಲ್ಲಿ ಯಾರೇ ಅಧ್ಯಕ್ಷರಾದರೂ ಈ ಸಂಸ್ಥೆಯ ಷೇರುದಾರರಾಗುತ್ತಾರೆ. ಇದರ ಜವಾಬ್ದಾರಿ ಹೊರುತ್ತಾರೆ. ಆದರೆ ಬಿಜೆಪಿಯವರು ಯಂಗ್ ಇಂಡಿಯಾ ಸಂಸ್ಥೆ ಹಾಗೂ ನ್ಯಾಷನಲ್ ಹೆರಾಲ್ಡ್ ಸಂಸ್ಥೆಯ ಆಸ್ತಿಯನ್ನು ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರು ತಮ್ಮ ಆಸ್ತಿಯನ್ನಾಗಿ ಮಾಡಿಕೊಂಡಿದ್ದಾರೆ ಎಂದು ಆರೋಪ ಮಾಡಿ ನೀಡದ ದೂರಿನ ಮೇಲೆ ನಮ್ಮ ನಾಯಕ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಿಸಿ ಇ.ಡಿ ತನಿಖಾ ಸಂಸ್ಥೆ ಮೂಲಕ ತನಿಖೆ ಮಾಡಿಸುತ್ತಿದ್ದಾರೆ ಎಂದು ಹೇಳಿದರು.
ನ್ಯಾಷನಲ್ ಹೆರಾಲ್ಡ್ ಸಂಸ್ಥೆ 2 ಸಾವಿರ ಕೋಟಿ ಮೌಲ್ಯದ ಆಸ್ತಿ ಹೊಂದಿದ್ದು, ಅದನ್ನು ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ವಾರ ನನಗೆ ಹಾಗೂ ನನ್ನ ತಮ್ಮನಿಗೆ ದೆಹಲಿ ಪೊಲೀಸರಿಂದ ನೋಟೀಸ್ ಬಂದಿತ್ತು. ನಾವು ಅವರ ವಿಚಾರಣೆಗೆ ಹಾಜರಾಗಬೇಕಿತ್ತು. ಆದರೆ ನಮಗೆ ವಿಧಾನಮಂಡಲ ಅಧಿವೇಶನ ನಡೆಯುತ್ತಿದ್ದು, ತಕ್ಷಣಕ್ಕೆ ವಿಚಾರಣೆಗೆ ಹಾಜರಾಗಲು ಆಗುವುದಿಲ್ಲ, ನಮಗೆ ಸಮಯಾವಕಾಶ ಬೇಕು. ನೀವು ಎಫ್ಐಆರ್ ದಾಖಲಿಸಿದ್ದು, ಅದರ ಪ್ರತಿಯನ್ನು ನೀಡಿ ಎಂದು ಅವರಿಗೆ ಕೇಳಿದ್ದೆ. ನಾನು ಯಾವ ದಾಖಲೆ ಆಧಾರದ ಮೇಲೆ ಅವರಿಗೆ ಉತ್ತರ ನೀಡಲಿ? ಎಂದು ಪ್ರಶ್ನಿಸಿದರು.
ರಾಜಕೀಯ ಪ್ರೇರಿತ ಪ್ರಕರಣಗಳನ್ನು ನ್ಯಾಯಾಲಯ ಪರಿಗಣಿಸದೇ ಇರುವುದು ಬಿಜೆಪಿ ಮತ್ತು ಇ.ಡಿಗೆ ನೀಡಿರುವ ದೊಡ್ಡ ಸಂದೇಶ. ನ್ಯಾಯಾಲಯದ ತೀರ್ಪಿನಿಂದ ನನಗೆ ಸಂತೋಷವಾಗಿದೆ. ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಇ.ಡಿಯ ಚಾರ್ಜ್ಶೀಟ್ ಅನ್ನು ಪರಿಗಣನೆಗೆ ತೆಗೆದುಕೊಳ್ಳಲು ನ್ಯಾಯಾಲಯ ನಿರಾಕರಿಸಿದೆ. ಇದು ನನಗೆ ಸಂತೋಷ ಉಂಟುಮಾಡಿದೆ. ಇ.ಡಿ ತನ್ನ ಅಧಿಕಾರ ದುರ್ಬಳಕೆ ಮಾಡಿಕೊಂಡು ತನ್ನ ವರ್ಚಸ್ಸನ್ನು ಕಳೆದುಕೊಂಡಿದೆ. ಇ.ಡಿ ವಿವಿಧ ಪಕ್ಷಗಳ ನಾಯಕರ ಮೇಲೆ ಅನೇಕ ಪ್ರಕರಣಗಳನ್ನು ದಾಖಲಿಸಿದೆ. ಅವರು ಆಡಳಿತರೂಡ ಬಿಜೆಪಿ ವಿರುದ್ಧ ಏಕೆ ಪ್ರಕರಣ ದಾಖಲಿಸಿಲ್ಲ? ಅಂತಿಮವಾಗಿ ನ್ಯಾಯ ಗೆದ್ದಿದೆ. ಸತ್ಯವನ್ನು ಎತ್ತಿ ಹಿಡಿದಿದ್ದಕ್ಕೆ ನ್ಯಾಯಸ್ಥಾನದಲ್ಲಿ ಕುಳಿತಿರುವವರಿಗೆ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ಹೇಳಿದರು.
ನ್ಯಾಷನಲ್ ಹೆರಾಲ್ಡ್ ಪ್ರಕರಣ: ನಮಗೆ ನ್ಯಾಯ ಸಿಕ್ಕಿದೆ – ಡಿ.ಕೆ ಶಿವಕುಮಾರ್
Previous Articleಹೈಕಮಾಂಡ್ ಗೆ ಕೇಳುತ್ತಾ ವಿಜಯೇಂದ್ರ ಮೊರೆ!
Next Article ವಿಧಾನಸಭೆಯಲ್ಲಿ ಕೃಷ್ಣಭೈರೇಗೌಡ ಸವಾಲು


7 ಪ್ರತಿಕ್ರಿಯೆಗಳು
Sertraline USA: generic for zoloft – zoloft without rx
stromectol cost ivermectin cream canada cost ivermectin 2%
Iver Therapeutics: Iver Therapeutics – stromectol oral
Smart GenRx USA: canada pharmacy world – pharmacy store
Smart GenRx USA: mexican pharmacy online – pharmacy coupons
canadian 24 hour pharmacy: Smart GenRx USA – specialty pharmacy
zoloft without dr prescription: generic for zoloft – sertraline