ಬೆಂಗಳೂರು,
ಅಧಿಕಾರ ಹಸ್ತಾಂತರ ಮತ್ತು ಸಂಪುಟ ಪುನಾರಚನೆ ಕುರಿತಾಗಿ ರಾಜ್ಯ ಕಾಂಗ್ರೆಸ್ಸಿನಲ್ಲಿ ಉಂಟಾಗಿರುವ ಗೊಂದಲಗಳಿಗೆ ಸದ್ಯಕ್ಕೆ ತೆರೆ ಬೀಳುವ ಲಕ್ಷಣಗಳು ಕಾಣುತ್ತಿಲ್ಲ.
ಈ ಗೊಂದಲಕ್ಕೆ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ತೆರೆ ಎಳೆಯಲಿದ್ದಾರೆ ಎಂಬ ನಿರೀಕ್ಷೆಯೊಂದಿಗೆ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಭೇಟಿ ಮಾಡಿದರಾದರೂ ಈ ವೇಳೆ ಯಾವುದೇ ರಾಜಕೀಯ ಚರ್ಚೆ ನಡೆಯಲಿಲ್ಲ.
ಬದಲಿಗೆ ಫೆಬ್ರವರಿ 13ರಂದು ರಾಜ್ಯ ಸರ್ಕಾರಕ್ಕೆ ಸಾವಿರ ದಿನಗಳು ಪೂರ್ಣಗೊಳಿಸುವ ಹಿನ್ನೆಲೆಯಲ್ಲಿ ಹಾವೇರಿಯಲ್ಲಿ ಆಯೋಜಿಸಲಾಗುತ್ತಿರುವ ಸಾಧನ ಸಮಾವೇಶದಲ್ಲಿ ಪಾಲ್ಗೊಳ್ಳಲು ಬರುವುದಾಗಿ ತಿಳಿಸಿದ್ದಾರೆ ಎಂದು ಮುಖ್ಯಮಂತ್ರಿಗಳ ಆಪ್ತ ಮೂಲಗಳು ತಿಳಿಸಿವೆ.
ತಮಿಳುನಾಡಿನಲ್ಲಿನ ಖಾಸಗಿ ಕಾರ್ಯಕ್ರಮ ಒಂದರಲ್ಲಿ ಪಾಲ್ಗೊಳ್ಳುವ ನಿಮಿತ್ತ ವಿಶೇಷ ವಿಮಾನದಲ್ಲಿ ಮೈಸೂರಿಗೆ ಆಗಮಿಸಿದ ರಾಹುಲ್ ಗಾಂಧಿ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಜೊತೆ ಕೆಲ ಹೊತ್ತು ಮಾತುಕತೆ ನಡೆಸಿದರು ಬಳಿಕ ರಸ್ತೆ ಮಾರ್ಗದಲ್ಲಿ ಅವರು ತಮಿಳುನಾಡಿಗೆ ತೆರಳಿದರು.
ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾವೇರಿಯಲ್ಲಿ ತಾವು ಏರ್ಪಡಿಸಲು ಉದ್ದೇಶಿಸಿರುವ ಸಾಧನಾ ಸಮಾವೇಶದ ಕುರಿತಾಗಿ ಮಾಹಿತಿ ನೀಡಿದರೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮನರೇಗಾ ರದ್ದುಪಡಿಸಿರುವ ಕೇಂದ್ರ ಸರ್ಕಾರದ ವಿರುದ್ಧ ಪಕ್ಷ ಆಯೋಜಿಸಿರುವ ಪ್ರತಿಭಟನೆ ಮತ್ತು ಜನಾಂದೋಲನ ಕಾರ್ಯಕ್ರಮಕ್ಕೆ ಮಾಹಿತಿ ನೀಡಿದ್ದಾರೆ.
ಈ ಎರಡು ವಿಷಯಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದ ರಾಹುಲ್ ಗಾಂಧಿ ಅವರು ಇಬ್ಬರೂ ನಾಯಕರಿಗೂ ಅಭಿನಂದನೆ ಸಲ್ಲಿಸಿದ್ದಾರೆ ಅಲ್ಲದೆ ಹಾವೇರಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಬಗ್ಗೆ ಸದ್ಯದಲ್ಲೇ ಮಾಹಿತಿ ನೀಡುತ್ತೇನೆ ಎಂದು ಹೇಳಿರುವ ಅವರು ಮಾಸಾಂತ್ಯದಲ್ಲಿ ದೆಹಲಿಗೆ ಬರುವಂತೆ ಸಲಹೆ ಮಾಡಿರುವುದಾಗಿ ಗೊತ್ತಾಗಿದೆ ಈ ಭೇಟಿಯ ಸಮಯದಲ್ಲಿ ಉಭಯ ನಾಯಕರು ಅಧಿಕಾರ ಹಸ್ತಾಂತರ ಮತ್ತು ಸಂಪುಟ ಪುನಾರಚನೆ ಕುರಿತಂತೆ ಚರ್ಚೆ ಮಾಡಲು ಬಯಸಿದರಾದರೂ ರಾಹುಲ್ ಗಾಂಧಿ ಅದಕ್ಕೆ ಅವಕಾಶ ಕೊಡಲಿಲ್ಲ ಎಂದು ಗೊತ್ತಾಗಿದೆ. ಆದರೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಾವು ವಾಪಸ್ ತೆರಳುವ ವೇಳೆ ನಿಮ್ಮ ಜೊತೆ ಪ್ರತ್ಯೇಕವಾಗಿ ಮಾತನಾಡಲು ಅವಕಾಶ ನೀಡಬೇಕು ಎಂದು ಕೋರಿದರು ಅದಕ್ಕೆ ಅವರು ಆಗಲಿ ಎಂದು ಹೇಳಿದರೆಂದು ಗೊತ್ತಾಗಿದೆ.
ಹೈಕಮಾಂಡ್ ನಿರ್ಧಾರ:
ಈ ಬೇಟಿಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ ಸಂಪುಟ ಪುನಾಚನೆ ಸೇರಿದಂತೆ ಯಾವುದೇ ವಿಷಯದಲ್ಲೂ ನಮ್ಮಲ್ಲಿ ಯಾವುದೇ ಗೊಂದಲಗಳು ಇಲ್ಲ ಈ ಬಗ್ಗೆ ಹೈಕಮಾಂಡ್ ಹೇಳಿದಂತೆ ಇಬ್ಬರು ಕೇಳುತ್ತೇವೆ ಎಂದು ಸ್ಪಷ್ಟಪಡಿಸಿದರು.
ಈ ವಿಚಾರದ ಗೊಂದಲಗಳ ಕುರಿತಾಗಿ ನಾನು ಅಥವಾ ಉಪಮುಖ್ಯಮಂತ್ರಿಗಳು ಮಾತನಾಡಬೇಕು. ನಮ್ಮಿಬ್ಬರಲ್ಲೂ ಯಾವುದೇ ಗೊಂದಲ ಇಲ್ಲ ಕೆಲವು ಶಾಸಕರುಗಳಿಗೆ ಮಾಹಿತಿ ಇಲ್ಲದೆ ಏನೋ ಹೇಳುತ್ತಿದ್ದಾರೆ ಮಾಧ್ಯಮಗಳು ಅನಗತ್ಯವಾಗಿ ಗೊಂದಲ ಮೂಡಿಸುತ್ತಿವೆ ಎಂದು ಹೇಳಿದರು.
ಸಂಪುಟ ಪುನಾರಚನೆಯ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಅಲ್ಲದೆ ಈ ಬಗ್ಗೆ ಚರ್ಚಿಸಲು ಸದ್ಯಕ್ಕೆ ನಾನು ದೆಹಲಿಗೂ ಹೋಗುತ್ತಿಲ್ಲ ಶಾಸಕರು ಈ ವಿಚಾರವಾಗಿ ಏನೇ ಮಾತನಾಡಬಹುದು ಅಂತಿಮವಾಗಿ ನಾವಿಬ್ಬರು ಹೈಕಮಾಂಡ್ ಹೇಳಿದಂತೆ ಕೇಳುತ್ತೇವೆ ಎಂದು ತಿಳಿಸಿದರು.
ಸಿಎಂ ಮತ್ತು ಡಿಸಿಎಂಗೆ ರಾಹುಲ್ ಗಾಂಧಿ ಹೇಳಿದ್ದೇನು ಗೊತ್ತಾ..?
Previous Articleಬೆಂಗಳೂರು ಪುಟ್ ಪಾತ್ ಮೇಲೆ ಗಾಂಜಾ ಮಾರಾಟ
Next Article ಕೇಂದ್ರದ ವಿರುದ್ಧ ರಾಜ್ಯಪಾಲರು ಮಾತನಾಡುತ್ತಾರಾ..?


1 ಟಿಪ್ಪಣಿ
Bork dream робот пылесос-пылесос
выглядит дорого и стильно.