ಬೆಂಗಳೂರು,ಜ.27-
ಬೆಂಗಳೂರಿನ ಹಲವು ಎಟಿಎಂ ಯಂತ್ರಗಳಿಗೆ ತುಂಬಬೇಕಿದ್ದ 1.37 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಹಣವನ್ನು ಎಟಿಎಂ ಗಳಿಗೆ ಭರ್ತಿ ಮಾಡದೆ ಸಿಬ್ಬಂದಿಯೇ ದೋಚಿ ಪರಾರಿಯಾದ ಘಟನೆ ಕೋರಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಎಟಿಎಂ ಗಳಿಗೆ ಹಣ ತುಂಬುವ ಗುತ್ತಿಗೆ ಪಡೆದಿರುವ ಹಿಟಾಚಿ ಪೇಮೆಂಟ್ ಸರ್ವಿಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯ ಕೆಲ ಸಿಬ್ಬಂದಿ ಈ ಕೃತ್ಯ ಎಸಗಿರುವ ಆರೋಪ ಕೇಳಿಬಂದಿದೆ. ಕೋರಮಂಗಲದಲ್ಲಿರುವ ಆ್ಯಕ್ಸಿಸ್ ಬ್ಯಾಂಕ್‌ಗೆ ಸೇರಿದ ಒಂದು ಕೋಟಿಗೂ ಅಧಿಕ ಹಣವನ್ನು ವಿವಿಧ ಎಟಿಎಂಗಳಿಗೆ ಡೆಪಾಸಿಟ್ ಮಾಡುವಂತೆ ಕಂಪನಿ ಅಧಿಕಾರಿ ಮಿಥುನ್ ಅವರು ಜನವರಿ 19ರಂದು ತಮ್ಮ ಸಿಬ್ಬಂದಿಗೆ ಸೂಚನೆ ನೀಡಿದ್ದರು. ಅದರಂತೆ ಸಿಬ್ಬಂದಿಗಳಾದ ಪ್ರವೀಣ್, ಧನಶೇಖರ್, ರಾಮಕ್ಕ, ಹರೀಶ್ ಕುಮಾರ್, ಪ್ರವೀಣ್ ಕುಮಾರ್ ಹಾಗೂ ವರುಣ್ ಎಂಬ ಸಿಬ್ಬಂದಿಗಳಿಗೆ ಎಟಿಎಂಗಳಿಗೆ ಹಣ ಹಾಕುವ ಜವಾಬ್ದಾರಿ ನೀಡಲಾಗಿತ್ತು.ಆದರೆ, ಇವರು ಎಟಿಎಂ ಯಂತ್ರಗಳಿಗೆ ಹಣ ಹಾಕದೇ ದೋಚಿ ಪರಾರಿಯಾಗಿದ್ದಾರೆ. ಒಂದು ತಂಡವು ಸುಮಾರು 57 ಲಕ್ಷ ರೂ. ನಗದು ತೆಗೆದುಕೊಂಡು ಪರಾರಿಯಾಗಿದ್ದರೆ, ಮತ್ತೊಂದು ತಂಡವು ಸುಮಾರು 80 ಲಕ್ಷ ರೂ. ಹಣದೊಂದಿಗೆ ಪರಾರಿಯಾಗಿದೆ. ಎಟಿಎಂಗಳಲ್ಲಿ ಹಣ ಜಮಾ ಆಗದಿರುವುದು ಗೊತ್ತಾದ ಬಳಿಕ ಕಂಪನಿ ಅಧಿಕಾರಿಗಳು ಪರಿಶೀಲನೆ ನಡೆಸಿದಾಗ ವಂಚನೆ ಬೆಳಕಿಗೆ ಬಂದಿದೆ. ಈ ಸಂಬಂಧ ಹಿಟಾಚಿ ಪೇಮೆಂಟ್ ಸರ್ವಿಸ್ ಕಂಪನಿ ಅಧಿಕಾರಿ ಮಿಥುನ್ ಅವರು ನೀಡಿದ ದೂರು ಆಧರಿಸಿ ಪ್ರಕರಣ ದಾಖಲಿಸಿರುವ ಕೋರಮಂಗಲ ಠಾಣಾ ಪೊಲೀಸರು ಆರೋಪಿಗಳಿಗಾಗಿ ಶೋಧ ಕಾರ್ಯ ಆರಂಭಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿ ಹಾಗೂ ಮೊಬೈಲ್ ಕರೆ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದ್ದು, ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸುವ ವಿಶ್ವಾಸವನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಈ ಪ್ರಕರಣವು ಖಾಸಗಿ ನಗದು ನಿರ್ವಹಣಾ ಕಂಪನಿಗಳ ಭದ್ರತೆ ಹಾಗೂ ನಿಗಾವ್ಯವಸ್ಥೆ ಕುರಿತು ಮತ್ತೊಮ್ಮೆ ಪ್ರಶ್ನೆಗಳನ್ನು ಎತ್ತಿದೆ. Create proper image for post this text
Previous Articleಕನ್ನಡ ಮನೆಗಳಲ್ಲಿ ಇಂಗ್ಲಿಷ್ ಮಕ್ಕಳು..!
Next Article ಬೀದಿನಾಯಿಯಿಂದ ‘ಶಾಂತಿದೂತ’ನಾದ ಅಲೋಕಾನ ಅಚ್ಚರಿಯ ಕಥೆ!

