ಬೆಂಗಳೂರು,
ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿರುವ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಸ್ಥಾನದ ಆಯ್ಕೆಗಾಗಿ ನಿಗದಿಯಾಗಿದ್ದ ಚುನಾವಣೆ ದಿಢೀರ್ ಮುಂದೂಡಲಾಗಿದೆ.
ರಾಜ್ಯ ಸಹಕಾರ ಬ್ಯಾಂಕುಗಳ ಪ್ರಮುಖ ಸಂಸ್ಥೆಯಾದ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಸ್ಥಾನ ಪ್ರತಿಷ್ಠಿತ ಹುದ್ದೆಯಾಗಿದೆ ಇದನ್ನು ಪಡೆಯಲು ಕಾಂಗ್ರೆಸ್ ನಲ್ಲಿ ಭಾರಿ ಪ್ರಮಾಣದ ಪೈಪೋಟಿ ನಿರ್ಮಾಣವಾಗಿದೆ.
ಸದ್ಯ ವಿವಿಧ ಜಿಲ್ಲಾ ಸಹಕಾರ ಬ್ಯಾಂಕುಗಳಿಗೆ ನಡೆದ ಚುನಾವಣೆಯಲ್ಲಿ 15 ಬ್ಯಾಂಕುಗಳ ನಿರ್ದೇಶಕರು ಕಾಂಗ್ರೆಸ್ ಸಹ ಸದಸ್ಯರಾಗಿದ್ದಾರೆ ಹೀಗಾಗಿ ಅಧ್ಯಕ್ಷ ಸ್ಥಾನ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯ ಪಾಲಾಗಲಿದೆ ಎಂದು ಹೇಳಲಾಗಿದೆ.
ಸತತವಾಗಿ ಎರಡು ಬಾರಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದ ಮಾಜಿ ಮಂತ್ರಿ ಕೆ ಎನ್ ರಾಜಣ್ಣ ಮೂರನೇ ಅವಧಿಗೆ ಈ ಹುದ್ದೆಯ ಮೇಲೆ ಕಣ್ಣಿಟ್ಟಿದ್ದಾರೆ. ಮಂತ್ರಿ ಸ್ಥಾನ ತೊಳೆದಿರುವ ಅವರು ಕ್ಯಾಬಿನೆಟ್ ಮಂತ್ರಿ ಸ್ಥಾನ ಮಾನ ಹೊಂದಿರುವ ಈ ಹುದ್ದೆ ಪಡೆಯಲು ತಂತ್ರ ರೂಪಿಸಿದ್ದಾರೆ.
ಮತ್ತೊಂದಡೆಯಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಈ ಹುದ್ದೆಯನ್ನು ತಮ್ಮ ಆಪ್ತ ವಲಯಕ್ಕೆ ಸೇರಿದವರಿಗೆ ಕೊಡಿಸಲು ಪ್ರಯತ್ನ ನಡೆಸಿದ್ದಾರೆ ಹೀಗಾಗಿ ಯಾರನ್ನು ಅಧ್ಯಕ್ಷರಾಗಿ ಮಾಡಬೇಕು ಎಂಬ ವಿಚಾರ ಇದೀಗ ಕಾಂಗ್ರೆಸ್ಸಿನಲ್ಲಿ ಬಿಕ್ಕಟ್ಟಿಗೆ ಕಾರಣವಾಗಿದೆ ಹೀಗಾಗಿ ಒಮ್ಮತ ಮೂಡಿಸಲು ವಿಫಲವಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದೂಡಲು ಸಹಕಾರ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ಗೊತ್ತಾಗಿದೆ ಇದರ ಬೆನ್ನಲ್ಲೇ ತಾಂತ್ರಿಕ ಕಾರಣದ ನೆಪವೊಡ್ಡಿ ಚುನಾವಣೆ ಮುಂದೂಡಲಾಗಿದೆ.
ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಚಿವ ಕೆ.ಎನ್ ರಾಜಣ್ಣ ನಾಮಪತ್ರ ಸಲ್ಲಿಸಿದ್ದಾರೆ. ಜೊತೆಗೆ ಬೆನ್ನಲ್ಲೇ ಡಿಸಿಎಂ ಶಿವಕುಮಾರ್ ಅವರ ಸೋದರ ಸಂಬಂಧಿ ವಿಧಾನಪರಿಷತ್ ಸದಸ್ಯ ರವಿ ಅವರೂ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಜೊತೆಗೆ ಡಿ.ಕೆ. ಶಿವಕುಮಾರ್ ಆಪ್ತ ಶಿವಮೊಗ್ಗದ ಮಂಜುನಾಥ್ ಗೌಡ ಸಹ ನಾಮಪತ್ರ ಸಲ್ಲಿಸಿದ್ದಾರೆ.
ಇವರ ಜೊತೆಗೆ ವಿಧಾನ ಪರಿಷತ್ ಸದಸ್ಯ ಶರಣಗೌಡ ಬಯ್ಯಾಪುರ ಕೂಡ ನಾಮಪತ್ರ ಸಲ್ಲಿಸಿದ್ದಾರೆ.

