ಶಿವಮೊಗ್ಗ: ಕೇಂದ್ರ ಬಜೆಟ್‌ನಲ್ಲಿ ರಾಜ್ಯಕ್ಕೆ ಮಲತಾಯಿ ಧೋರಣೆ ಅನುಸರಿಸಲಾಗುತ್ತಿದ್ದು, ರಾಜ್ಯದ ಬಿಜೆಪಿ ಸಂಸದರು ಹಾಗೂ ಕೇಂದ್ರ ಸಚಿವರು ‘ಆಟಕ್ಕುಂಟು ಲೆಕ್ಕಕ್ಕಿಲ್ಲ’ ಎನ್ನುವಂತೆ ವರ್ತಿಸುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಟೀಕಿಸಿದ್ದಾರೆ.
ನಗರದಲ್ಲಿ ಶುಕ್ರವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಮತ್ತು ಬಿಜೆಪಿ ವಿರುದ್ಧ ಹರಿಹಾಯ್ದರು.
ಭದ್ರಾ ಮೇಲ್ದಂಡೆಗೆ ಚಿಪ್ಪು
ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಕೊಟ್ಟ ಮಾತನ್ನು ಉಳಿಸಿಕೊಂಡಿಲ್ಲ. ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ. ನೀಡುವುದಾಗಿ ಘೋಷಿಸಿ, ಇದುವರೆಗೂ ಬಿಡುಗಡೆ ಮಾಡಿಲ್ಲ.
ಬಿಜೆಪಿ ಹಗರಣಗಳ ತನಿಖೆ
ಸಚಿವ ತಿಮ್ಮಾಪುರ ಅವರ ರಾಜೀನಾಮೆಗೆ ಆಗ್ರಹಿಸುತ್ತಿರುವ ಬಿಜೆಪಿಗೆ ತಿರುಗೇಟು ನೀಡಿದ ಡಿಕೆಶಿ, ಕೋವಿಡ್ ಸೇರಿದಂತೆ ಹಿಂದಿನ ಬಿಜೆಪಿ ಸರ್ಕಾರದ ಅವಧಿಯ ಅನೇಕ ಹಗರಣಗಳನ್ನು ನಾವೂ ಬಯಲು ಮಾಡುತ್ತೇವೆ. ತನಿಖೆ ಮುಗಿಯಲಿ ಎಂದು ಎಚ್ಚರಿಸಿದರು.
ನರೇಗಾ ಬದಲಾವಣೆಗೆ ವಿರೋಧ
ನರೇಗಾ ಯೋಜನೆಯಲ್ಲಿ ಬದಲಾವಣೆ ತಂದರೆ ರೈತರಿಗೆ ಮತ್ತು ಕೂಲಿ ಕಾರ್ಮಿಕರಿಗೆ ತೊಂದರೆಯಾಗಲಿದೆ. ಹೊಸ ನಿಯಮಗಳಿಂದ ಪ್ರತಿ ಗ್ರಾಮ ಪಂಚಾಯಿತಿಗೆ 1 ರಿಂದ 1.5 ಕೋಟಿ ರೂ. ಅನುದಾನ ನಷ್ಟವಾಗಲಿದ್ದು, ಇದನ್ನು ನಾವು ವಿರೋಧಿಸುತ್ತೇವೆ ಎಂದರು.

