ಬೆಂಗಳೂರು,
ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ತಮ್ಮ ನೇತೃತ್ವದಲ್ಲಿ ವಿಧಾನಸಭೆ ಚುನಾವಣೆ ಎದುರಿಸವಂತಾಗಬೇಕು ಎಂದು ಪಣತೊಟ್ಟಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ತಮ್ಮನ್ನು ಪಕ್ಷದ ಅಧ್ಯಕ್ಷ ಎಂದು ಘೋಷಿಸುವಂತೆ ಹೈಕಮಾಂಡ್ ಗೆ ಮನವಿ ಮಾಡಿದ್ದಾರೆ.
ವಿಧಾನಸಭೆಯ ಅಧಿವೇಶನ ಮುಗಿಯುತಿದ್ದಂತೆ ದಿಡೀರ್ ದೆಹಲಿಗೆ ದೌಡಾಸಿರುವ ಅವರು ಕೇಂದ್ರ ಕೃಷಿ ಸಚಿವ ಹಾಗೂ ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಶಿವರಾಜಸಿಂಗ್ ಚೌಹಾಣ್ ರಾಜ್ಯ ಬಿಜೆಪಿ ಉಸ್ತುವಾರಿ ರಾಧಾ ಮೋಹನ್ ಅಗರವಾಲ್ ಸಂಘ ಪರಿವಾರದ ನಾಯಕ ರಾಮ್ ಮಾಧವ್ ಸೇರಿದಂತೆ ಹಲವರನ್ನು ಭೇಟಿ ಮಾಡಿ ತಮ್ಮನ್ನು ಪಕ್ಷದ ಅಧ್ಯಕ್ಷ ಎಂದು ಘೋಷಿಸಲು ಕ್ರಮ ಕೈಗೊಳ್ಳಬೇಕು ಎಂದು
ಆಗ್ರಹಿಸಿದ್ದಾರೆ
ರಾಜ್ಯದಲ್ಲಿನ ಪಕ್ಷದ ಆಂತರಿಕ ಬಂಡಾಯ, ನಾಯಕತ್ವ ಗದ್ದಲ ಹಾಗೂ ಸಂಘಟನಾತಕ ಬೆಳವಣಿಗೆಗಳ ಕುರಿತು ಚರ್ಚಿಸಲು ಹೈಕಮಾಂಡ್ನಿಂದ ಬುಲಾವ್ ಬಂದ ಬೆನ್ನಲ್ಲೇ ದೆಹಲಿಗೆ ತೆರಳಿದ ಅವರು ನೂತನ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬೀನ್ ಅವರನ್ನು ಭೇಟಿ ಮಾಡಿ ಶುಭಾಶಯ ಕೋರಿದರು.
ರಾಜ್ಯ ಬಿಜೆಪಿಯಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಕುರಿತಾಗಿ ಮಾಹಿತಿ ನೀಡಿದ ಅವರು ತಮ್ಮ ನಾಯಕತ್ವದಲ್ಲಿ ಮತ್ತೆ ಕರ್ನಾಟಕದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ತರುವುದು ನನ್ನ ಕನಸಾಗಿದೆ ಅದಕ್ಕಾಗಿ ತಾವು ನನಗೆ ಎಲ್ಲ ರೀತಿಯ ನೆರವು ನೀಡಬೇಕು ಎಂದು ಮನವಿ ಮಾಡಿದ್ದಾರೆ.
ಇದಕ್ಕೂ ಮೊದಲು ಅವರು ಕೇಂದ್ರ ಕೃಷಿ ಮಂತ್ರಿ ಶಿವರಾಜ್ ಸಿಂಗ್ ಚೌವ್ಹಾಣ್ ಅವರನ್ನು ಭೇಟಿ ಮಾಡಿದರು ಈ ವೇಳೆ ತಮ್ಮನ್ನು ಪಕ್ಷದ ಅಧ್ಯಕ್ಷ ಎಂದು ಘೋಷಣೆ ಮಾಡದಂತೆ ಹಲವು ನಾಯಕರು ಹೈಕಮಾಂಡ್ ಮೇಲೆ ಒತ್ತಡ ಏರುತ್ತಿರುವ ಬಗ್ಗೆ ಮಾತುಕತೆ ನಡೆಸಿದ್ದಾರೆ ಈ ವೇಳೆ ಶಿವರಾಜ್ ಸಿಂಗ್ ಚೌಹಾಣ್ ತಮ್ಮನ್ನು ಪಕ್ಷದ ಅಧ್ಯಕ್ಷ ಎಂದು ಘೋಷಿಸಲು ನನಗೆ ಯಾವುದೇ ತಕರಾರು ಇಲ್ಲ ಆದರೆ ಈ ಘೋಷಣೆ ಮಾಡುವಂತೆ ತಮಗೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮತ್ತು ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಅವರು ಸೂಚನೆ ಕೊಡಬೇಕು ಅವರಿಂದ ಸೂಚನೆ ಬಂದರೆ ತಾವು ಬೆಂಗಳೂರಿಗೆ ಬಂದು ನಿಮ್ಮ ಹೆಸರನ್ನು ಅಧಿಕೃತವಾಗಿ ಘೋಷಣೆ ಮಾಡುತ್ತೇನೆ ಎಂಬ ಭರವಸೆ ನೀಡಿದ್ದಾರೆ ಎಂದು ಗೊತ್ತಾಗಿದೆ.
ತಮ್ಮನ್ನು ಪಕ್ಷದ ಅಧ್ಯಕ್ಷ ಎಂದು ಘೋಷಿಸಲು ಶಿವರಾಜ ಚೌಹಾಣ್ ಯಾವುದೇ ತಕರಾರು ಇಲ್ಲ ಎಂದು ಹೇಳುತ್ತಿದ್ದಂತೆ ಉತ್ಸಾಹಗೊಂಡಿರುವ ವಿಜಯೇಂದ್ರ ಅವರು ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಅವರ ಭೇಟಿಗಾಗಿ ಕಾದು ಕುಳಿತಿದ್ದಾರೆ.
Previous Articleಬಜೆಟ್ ದಾಖಲೆಗೆ ಸಿಎಂ ಸಿದ್ದತೆ
Next Article ಅಬ್ಬಾ ಎಷ್ಟೊಂದು ಮ್ಯೂಲ್ ಅಕೌಂಟ್ಗಳು!

