ಬೆಂಗಳೂರು,
ಕೆಪಿಎಸ್ ಸಿ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ದತೆ ನಡೆಸುವ ಹಿಂದುಳಿದ ವರ್ಗಗಳ ಪರೀಕ್ಷಾರ್ಥಿಗಳಿಗೆ ಉಚಿತ ವಿಶೇಷ ತರಬೇತಿ ಶಿಬಿರವನ್ನು ನಗರದಲ್ಲಿ ಆಯೋಜಿಸಲಾಗಿದೆ.
ಪ್ರತಿಷ್ಠಿತ ತ ಇನ್ ಸೈಟ್ ಐಎಎಸ್ ಸಂಸ್ಥೆಯು ಬೆಂಗಳೂರು ನಗರದ ವಿಶ್ವೇಶ್ವರಯ್ಯ ಬಡಾವಣೆಯ ‘ಕನಕ ಸಂಕೀರ್ಣ’ದಲ್ಲಿ ಕೆಎಎಸ್ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸಿರುವ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ವಿಶೇಷ ತರಬೇತಿ ಶಿಬಿರ ನಡೆಸಲಿದೆ.
ಸಮಾಜಮುಖಿ ಸೇವೆಯಲ್ಲಿ ತೊಡಗಿರುವ ‘ಕನಕಶ್ರೀ ಚ್ಯಾರಿಟೆಬಲ್ ಟ್ರಸ್ಟ್’, ದೇಶದ ಪ್ರತಿಷ್ಠಿತ ಇನ್ ಸೈಟ್ ಐಎಎಸ್ ಸಂಸ್ಥೆಯೊಂದಿಗೆ ಕೈಜೋಡಿಸಿ ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗಾಗಿ ವಿಶೇಷ ಉಚಿತ ತರಬೇತಿ ಶಿಬಿರವನ್ನು ಆಯೋಜಿಸಿದೆ.
ಇನ್ ಸೈಟ್ ಐಎಎಸ್ ಸಂಸ್ಥಾಪಕ ನಿರ್ದೇಶಕ ವಿನಯ್ ಕುಮಾರ್ ಜಿ.ಬಿ. ಅವರ ನೇತೃತ್ವದಲ್ಲಿ ನುರಿತ ಬೋಧಕರಿಂದ ತರಬೇತಿ ನೀಡಲಾಗುವುದು. ಅಭ್ಯರ್ಥಿಗಳಿಗೆ ಉಚಿತ ವಸತಿ ಮತ್ತು ಸುಸಜ್ಜಿತ ಅಧ್ಯಯನ ಕೇಂದ್ರದ ವ್ಯವಸ್ಥೆ ಕಲ್ಪಿಸಲಾಗಿದೆ. ಅಲ್ಲದೆ ಗುಣಮಟ್ಟದ ಊಟೋಪಹಾರದ ವ್ಯವಸ್ಥೆ ರಿಯಾಯಿತಿ ದರದಲ್ಲಿ ಲಭ್ಯವಾಗಲಿದ್ದು, ಕನಿಷ್ಠ ಖರ್ಚಿನಲ್ಲಿ ಗ್ರಾಮೀಣ ಹಾಗೂ ಹಿಂದುಳಿದ ವರ್ಗದ ಯುವಕ-ಯುವತಿಯರನ್ನು ಉನ್ನತ ಸರ್ಕಾರಿ ಅಧಿಕಾರಿಗಳನ್ನಾಗಿ ರೂಪಿಸುವುದು ಮೂಲ ಉದ್ದೇಶವಾಗಿದೆ.
ಆಸಕ್ತರು ಹೆಚ್ಚಿನ ಮಾಹಿತಿಗೆ ಇನ್ ಸೈಟ್ ಐಎಎಸ್ 3ನೇ ಮಹಡಿ, ನಂದ ಆಶೀರ್ವಾದ್ ಕಾಂಪ್ಲೆಕ್ಸ್, ವಿಲೇಜ್ ಹೈಪರ್ ಮಾರ್ಕೆಟ್ ಮೇಲೆ, ಚಂದ್ರಾ ಲೇಔಟ್,ದೂರವಾಣಿ: 69405205 ಇಲ್ಲಿ ಸಂಪರ್ಕಿಸಬಹುದು ಎಂದು ಇನ್ ಸೈಟ್ ಐಎಎಸ್ ಮುಖ್ಯಸ್ಥ ವಿನಯ್ ಕುಮಾರ್ ಹೇಳಿದ್ದಾರೆ.
ಹೊರ ಊರುಗಳಿಂದ ಬರುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ವಸತಿ ಸೌಲಭ್ಯ ಕೂಡ ಎಂದು ಹೇಳಿದರು.
Previous Articleಸಫಾರಿ ಪ್ರಿಯರಿಗೆ ಸಿಹಿ ಸುದ್ದಿ
Next Article ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

