ಬೆಂಗಳೂರು,
ಉತ್ತರ ಕರ್ನಾಟಕದಲ್ಲಿ ಕೈಗಾರಿಕೆಗಳ ಬೆಳವಣಿಗೆ, ನೀರಾವರಿ ಸೌಲಭ್ಯ ಮತ್ತು ಉತ್ಕೃಷ್ಟ ಸಂಸ್ಥೆಗಳ ಸ್ಥಾಪನೆ ವಿಚಾರದಲ್ಲಿ ಕೇಂದ್ರದ ಬಿಜೆಪಿ ಸರ್ಕಾರವು ತಾರತಮ್ಯ ಮಾಡುತ್ತಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಆಪಾದಿಸಿದ್ದಾರೆ
ರಾಜ್ಯಕ್ಕೆ ಬರುತ್ತಿರುವ ಸೆಮಿಕಂಡಕ್ಟರ್ ಯೋಜನಾ ಪ್ರಸ್ತಾವನೆಗಳಿಗೆ ಕೇಂದ್ರ ಸರ್ಕಾರ ಆದ್ಯತೆಯ ಮೇರೆಗೆ ಒಪ್ಪಿಗೆ ಕೊಡುತ್ತಿಲ್ಲ. ಉತ್ತರ ಕರ್ನಾಟಕದ ಅಭಿವೃದ್ಧಿ ಬಗ್ಗೆ ಕಳಕಳಿ ವ್ಯಕ್ತಪಡಿಸಿರುವ ಬಿಜೆಪಿ ನಾಯಕ ಅರವಿಂದ ಬೆಲ್ಲದ ಅವರು ಈ ಸಂಬಂಧ ಗಮನ ಹರಿಸಿದರೆ ಅದಕ್ಕೆ ನಮ್ಮ ಸಹಕಾರವೂ ಇರಲಿದೆ ಎಂದು ಹೇಳಿದ್ದಾರೆ
ಈ ಸಂಬಂಧ ಅರವಿಂದ್ ಬೆಲ್ಲದ್ ಅವರು ಮಾಡಿರುವ ‘ಎಕ್ಸ್’ ಪೋಸ್ಟಿಗೆ ಉತ್ತರ ನೀಡಿರುವ ಎಂ ಬಿ ಪಾಟೀಲ್ ಬಿಜೆಪಿ ನಾಯಕ ಬೆಲ್ಲದ್ ತಮ್ಮ ಪೋಸ್ಟ್ನಲ್ಲಿ, ಉತ್ತರ ಕರ್ನಾಟಕದ ಅಭಿವೃದ್ಧಿ ವಿಚಾರದಲ್ಲಿ ನಾವು ಅದೇ ಹಳೆಯ ಕತೆಗಳನ್ನು ಕೇಳುತ್ತಿದ್ದೇವೆ ಎಂದು ವ್ಯಂಗ್ಯವಾಡಿದ್ದಾರೆ
ಆದರೆ,ರಾಜ್ಯದಲ್ಲಿ 59 ಅತೀ ಹಿಂದುಳಿದ ತಾಲ್ಲೂಕುಗಳಿದ್ದು, ಇಷ್ಟೂ ತಾಲ್ಲೂಕುಗಳು ಕಲ್ಯಾಣ ಮತ್ತು ಕಿತ್ತೂರು ಕರ್ನಾಟಕದಲ್ಲೇ ಇರುವುದು ವಾಸ್ತವವಾಗಿದೆ. ಇಲ್ಲೆಲ್ಲ ನೀರಾವರಿ ಸೌಲಭ್ಯ ಒದಗಿಸಲು ಎಲ್ಲ ಸರ್ಕಾರಗಳೂ ಪ್ರಯತ್ನಿಸಿವೆ. ಹಾಗೆಯೇ ಉತ್ತರ ಕರ್ನಾಟಕದಲ್ಲಿ ಕೂಡ ಅತ್ಯುತ್ತಮ ಶಿಕ್ಷಣ ಸಂಸ್ಥೆಗಳಿದ್ದು, ಇನ್ನೂ ಹೆಚ್ಚಿನ ಸಂಸ್ಥೆಗಳಿಗೆ ಅವಕಾಶವಿದೆ. ಸರಕಾರವು ಅತೀ ಹಿಂದುಳಿದ ತಾಲ್ಲೂಕುಗಳ ಅಭಿವೃದ್ಧಿಗೆ ಬದ್ಧವಾಗಿದೆ ಎಂದು ಪ್ರತಿಪಾದಿಸಿದ್ದಾರೆ.
ಕೈಗಾರಿಕೆಗಳ ವಿಚಾರದಲ್ಲಿ ರಾಜ್ಯ ಸರಕಾರವು ಮೂಲಸೌಕರ್ಯ, ಭೂಮಿ, ವಿಶೇಷ ಭತ್ಯೆಗಳು, ಕೌಶಲ್ಯ ಹೊಂದಿರುವ ಮಾನವ ಸಂಪನ್ಮೂಲಗಳನ್ನೆಲ್ಲ ಒದಗಿಸಲು ಸಿದ್ಧವಿದೆ. ಆದರೆ ಸೆಮಿಕಂಡಕ್ಟರ್ ಉತ್ಪಾದನಾ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ಕೇಂದ್ರ ಸರ್ಕಾರವು ರಾಜ್ಯದಲ್ಲೂ ಒಂದಷ್ಟು ಕಂಪನಿಗಳನ್ನು ಕಾರ್ಯಾರಂಭ ಮಾಡಿಸಲು ಆಸಕ್ತಿ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.
ಕರ್ನಾಟಕ ಬಿಟ್ಟು ಬೇರೆಬೇರೆ ರಾಜ್ಯಗಳ ಪ್ರಸ್ತಾವನೆಗಳಿಗೆ ಒಪ್ಪಿಗೆ ನೀಡುತ್ತಿರುವ ಕೇಂದ್ರ ಸರ್ಕಾರವು ಕರ್ನಾಟಕದ ಕಡೆಗೂ ಗಮನ ನೀಡಬೇಕು. ಇಡೀ ದೇಶದಲ್ಲೇ ಅತ್ಯುತ್ತಮ ತಂತ್ರಜ್ಞಾನ ಹೊಂದಿರುವ ನಮ್ಮ ರಾಜ್ಯಕ್ಕೆ ಇದರಿಂದ ತೀವ್ರ ಅನ್ಯಾಯವಾಗುತ್ತಿದೆ. ಬೆಲ್ಲದ ಅವರು ಇದರ ಬಗ್ಗೆಯೂ ದನಿ ಎತ್ತಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಈ ಸಂಬಂಧವಾಗಿ ಬೆಲ್ಲದ ಅವರು ತಮ್ಮ ಪಕ್ಷದ ಸಂಸದರ ಮತ್ತು ಹಿರಿಯ ನಾಯಕರ ನಿಯೋಗವನ್ನು ದೆಹಲಿಗೆ ಕೊಂಡೊಯ್ದು, ಉತ್ತರ ಕರ್ನಾಟಕದ ಯಾವುದೇ ಭಾಗದಲ್ಲಾದರೂ ಸೆಮಿಕಂಡಕ್ಟರ್ ಉದ್ಯಮ ಬರಲು ಸಹಕರಿಸಬೇಕು. ಇದಕ್ಕೆ ನಾವು ಸಂಪೂರ್ಣ ಸಹಕಾರ ನೀಡಲು ಸಿದ್ಧ ಎಂದು ಪಾಟೀಲ ವಿವರಿಸಿದ್ದಾರೆ.
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022

