ಬೆಂಗಳೂರು,
ಚುನಾವಣೆಗಳಲ್ಲಿ ಚಲನಚಿತ್ರ ಪ್ರಮೋಷನ್ ಮಾಡುವುದು ಪ್ರಧಾನಿ ಕೆಲಸವೇ? ಜಗತ್ತು ಮೂರನೇ ಮಹಾ ಯುದ್ಧದ ಕಾರ್ಮೋಡದಲ್ಲಿದೆ. ದೇಶ ಬೆಲೆ ಏರಿಕೆ, ಗ್ಯಾಸ್ ಸಿಲಿಂಡರ್ ನಿಂದ ಜನರು ತತ್ತರಿಸುತ್ತಿದ್ದಾರೆ. ಆದರೆ ಪ್ರಧಾನಿ ಚುನಾವಣಾ ಮ್ಯಾನೇಜ್ಮೆಂಟ್ ಮಾಡುವುದರಲ್ಲಿ ಬಿಜಿಯಗಿದ್ದಾರೆ. ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗಾರರಿಗೆ ಮಾತನಾಡಿದ ಅವರು ವಿಧಾನಸೌಧ ಖಾಲಿಯಾಗಿದೆ ಎನ್ನುವವರು ಪ್ರಧಾನಿ ಏನು ಕೆಲಸ ಮಾಡುತ್ತಿದ್ದಾರೆ ಒಮ್ಮೆ ನೋಡಲಿ, ಎಲ್ಲಾ ಕೆಲಸ ಬಿಟ್ಟು ಚುನಾವಣೆಗಾಗಿ ಸಿನಿಮಾ ಪ್ರಮೋಟ್ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ಸಾರ್ವತ್ರಿಕ ಚುನಾವಣೆಯಲ್ಲಿ ರಾಜ್ಯದ ಜನರಿಗೆ ನೀಡಿದ ಭರವಸೆಯನ್ನು ಈಡೇರಿಸುತ್ತಿದ್ದೇವೆ. ಸರ್ವ ಜನಾಂಗದ ಶಾಂತಿಯ ತೋಟವನ್ನು ಶೇ.95% ರಕ್ಷಿಸುತ್ತಿದ್ದೇವೆ. ಐದು ಗ್ಯಾರೆಂಟಿಗಳನ್ನು ನೀಡುವ ಮೂಲಕ ರಾಜ್ಯದ ಜನರಿಗೆ ಕೊಟ್ಟ ವಚನವನ್ನು ಪಾಲಿಸಿದ್ದೇವೆ.ರಾಜ್ಯದ ಅಭಿವೃದ್ದಿಗಾಗಿ ಕಾಂಗ್ರೆಸ್ ಪಕ್ಷವನ್ನು ಉಪಚುನಾವಣೆಯಲ್ಲಿ ಗೆಲ್ಲಿಸಲು ಮತದಾರರಿಗೆ ಮನವಿ ಮಾಡುತ್ತೇನೆ ಎಂದು ಹೇಳಿದರು.
ವಿರೋಧ ಪಕ್ಷಗಳ ಅಪಪ್ರಚಾರ ಹಾಗೂ ಸುಳ್ಳುಗಳಿಗೆ ತಕ್ಕ ಉತ್ತರ ಕೊಡಬೇಕಾಗಿದೆ. ಚುನಾವಣೆಯಲ್ಲಿ ಚಲನಚಿತ್ರಗಳನ್ನು ಪ್ರಮೋಟ್ ಮಾಡುವ ಪ್ರಧಾನಿಯನ್ನು ನಾವು ನೋಡಿರಲಿಲ್ಲ. ಜನರ ಸಮಸ್ಯೆಗಳ ಬಗ್ಗೆ ಚರ್ಚಿಸದೆ ಕಾಶ್ಮೀರಿ ಪೈಲ್ಸ್, ಧುರಂಧರ್ , ಕೇರಳ ಫೈಲ್ಸ್ ಸಿನಿಮಾಗಳನ್ನು ಪ್ರಮೋಷನ್ ಮಾಡುತ್ತಿರುವುದು ದುರಂತ ಎಂದು ವಾಗ್ದಾಳಿ ನಡೆಸಿದರು.
ಬಿಜೆಪಿ ಪಕ್ಷ ಎಲ್ಲಾ ತನಿಖಾ ಸಂಸ್ಥೆಗಳನ್ನು ದುರಪಯೋಗಪಡಿಸಿಕೊಂಡಿದೆ. ಚುನಾವಣಾ ಆಯೋಗ ಬಿಜೆಪಿ ಪಕ್ಷದ ಏಜೆಂಟ್ ರೀತಿ ಕೆಲಸ ಮಾಡುತ್ತಿದೆ. ಯಾವುದೇ ಅಡೆತಡೆಯಿಲ್ಲದೆ ನಿಷ್ಪಕ್ಷಪಾತವಾಗಿ ಚುನಾವಣೆ ನಡೆಯಬೇಕಿದೆ. ಮುಖ್ಯಮಂತ್ರಿಗಳು ಸೇರಿದಂತೆ ಎಲ್ಲಾ ನಾಯಕರುಗಳು ಅಧಿಕಾರ ಕೇಂದ್ರಿತ ಸಂಸ್ಥೆಗಳ ಮೇಲೆ ನಿಗಾ ವಹಿಸಿದ್ದಾರೆ. ಯಾವುದೇ ರೀತಿಯಲ್ಲಿ ಅಕ್ರಮ ನಡೆಯದಂತೆ ನೋಡಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದರು.
ದೇಶದ ಜನರನ್ನು ಸಂಕಷ್ಟಗಳ ಸರದಿ ಸಾಲಿನಲ್ಲಿ ನಿಲ್ಲುವಂತೆ ಪ್ರಧಾನಿ ನರೇಂದ್ರ ಮೋದಿ ಮಾಡಿದ್ದಾರೆ. ನೋಟ್ ಬ್ಯಾನ್ , ಕೋವಿಡ್ ಸಮಯದಲ್ಲಿ ಜನರು ಬೀದಿಯಲ್ಲಿ ನಿಲ್ಲುವಂತಾಗಿತ್ತು. ಈಗ ಗ್ಯಾಸ್ ಸಿಲೆಂಡರ್ ಸಮಸ್ಯೆಯಿಂದಾಗ ಬಡ ಜನರು ಕಿಲೋಮೀಟರ್ ವರೆಗೂ ನಿಲ್ಲುತ್ತಿದ್ದಾರೆ.ದೇಶದ ಸಾಲವನ್ನು ಹೆಚ್ಚು ಮಾಡಿದ್ದೇ ಪ್ರಧಾನಿಗಳ ಸಾಧನೆ ಎಂದು ಟೀಕಿಸಿದರು.
ಸ್ವತಂತ್ರ ಬಂದ ನಂತರ 60 ವರ್ಷಗಳ ವರೆಗೂ ದೇಶದ ಸಾಲ 53 ಲಕ್ಷ ಕೋಟಿ ಇತ್ತು. ಪ್ರಧಾನಿ ನರೇಂದ್ರ ಮೋದಿಯ ಕಾಲದಲ್ಲಿ 150 ಲಕ್ಷ ಕೋಟಿ ಹೆಚ್ಚಾಗಿದೆ. ಯುಪಿಎ ಕಾಂಗ್ರೆಸ್ ಸರ್ಕಾರ ಉದ್ಯೋಗ ಖಾತ್ರಿ, ಆರೋಗ್ಯ ಮಿಷನ್, ಆಹಾರ ಕಾಯ್ದೆ, ಆರ್ ಟಿ ಇ ಹಲವಾರು ಕಾಯ್ದೆಗಳನ್ನು ಜನರಿಗೆ ಹಕ್ಕನ್ನಾಗಿ ನೀಡಿತ್ತು. ಪ್ರಧಾನಿ ಮೋದಿ ಜನರ ಹಕ್ಕನ್ನು ಕಸಿದುಕೊಂಡಿದ್ದಾರೆ ಎಂದು ಆಪಾದಿಸಿದರು.
ಸಂಗ್ರಹಗಳು
- ಏಪ್ರಿಲ್ 2026
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022

