ವಾಷಿಂಗ್ಟನ್: ಪ್ರಾಥಮಿಕ ಶಾಲೆಯಲ್ಲಿ ಪ್ರೌಢಶಾಲಾ ವಿದ್ಯಾರ್ಥಿಯೊಬ್ಬ ಗುಂಡಿನ ದಾಳಿ ನಡೆಸಿದ್ದು, 18 ಮಕ್ಕಳು ಸೇರಿ 21 ಮಂದಿಯನ್ನು ಕೊಂದಿದ್ದಾನೆ.
ಘಟನೆ ಬಳಿಕ ಗುಂಡಿನ ದಾಳಿ ನಡೆಸಿದ ವಿದ್ಯಾರ್ಥಿಯನ್ನು ಪೊಲೀಸರು ಹತ್ಯೆಗೈದಿದ್ದಾರೆ.
ಟೆಕ್ಸಾಸ್‌ನ ಉವಾಲ್ಡೆಯ ಪ್ರಾಥಮಿಕ ಶಾಲೆಯಲ್ಲಿ ಈ ದುರ್ಘಟನೆ ನಡೆದಿದೆ. ಟೆಕ್ಸಾಸ್ ಗವರ್ನರ್ ಜಾರ್ಜ್ ಅಬಾಟ್ ಈ ಮಾಹಿತಿ ನೀಡಿದ್ದಾರೆ.
ಗುಂಡಿನ ದಾಳಿ ನಡೆಸಿದ 18 ವರ್ಷದ ವಿದ್ಯಾರ್ಥಿಯಾಗಿದ್ದು, ಆತನನ್ನು ಪೊಲೀಸರು ಹತ್ಯೆ ಮಾಡಿದ್ದಾರೆ ಎಂದು ಜಾರ್ಜ್ ಹೇಳಿದ್ದಾರೆ.
ಹಂತಕ ವಿದ್ಯಾರ್ಥಿ ಉವಾಲ್ಡೆಯಲ್ಲಿರುವ ಪ್ರಾಥಮಿಕ ಶಾಲೆಯ ಹತ್ತಿರದಲ್ಲಿರುವ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಕನೆಕ್ಟಿಕಟ್‌ನ ನ್ಯೂಟೌನ್‌ನಲ್ಲಿರುವ ಸ್ಯಾಂಡಿ ಹುಕ್ ಎಲಿಮೆಂಟರಿಯಲ್ಲಿ 2012ರಲ್ಲಿ ನಡೆದ ಗುಂಡಿನ ದಾಳಿ ಬಳಿಕ ನಡೆದ ಅತಿ ದೊಡ್ಡ ದುರಂತ ಇದಾಗಿದೆ ಎಂದು ಅಮೆರಿಕದ ಮಾಧ್ಯಮಗಳು ವರದಿ ಮಾಡಿವೆ. ವಿದೇಶ ಪ್ರವಾಸದಲ್ಲಿರುವ ಅಮೆರಿಕ ಅಧ್ಯಕ್ಷ ಜೋ ಬೈಡನ್ ಘಟನೆ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದು, ಅಮೆರಿಕದಲ್ಲಿ ಗನ್‌ಗಳಿಗೆ ಕಡಿವಾಣ ಹಾಕುವುದಾಗಿ ಹೇಳಿದ್ದಾರೆ.
ಶಾಲೆಯಲ್ಲಿ ಮಕ್ಕಳ ದಾರುಣ ಹತ್ಯೆ:ಅಮೆರಿಕದಲ್ಲಿ ಭಯಂಕರ ಘಟನೆ
Previous Articleಕನ್ನಡ ನಟಿಯರ ಬಗ್ಗೆ ಲಘುವಾಗಿ ಮಾತಾಡಿದ ತೆಲುಗು ನಿರ್ದೇಶಕ
Next Article ಮೇರಾ ನಾಮ್ ಪೂರಿ ಬಾಯ್..