ಶಿವಮೊಗ್ಗ: ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ರಾಜ್ಯ ರೈತ ಸಂಘದಿಂದ ವಜಾಗೊಳಿಸಲಾಗಿದೆ. ಶಿವಮೊಗ್ಗದಲ್ಲಿ ನಡೆದ ರಾಜ್ಯ ರೈತ ಪದಾಧಿಕಾರಿಗಳ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಖಾಸಗಿ ವಾಹಿನಿಯೊಂದು ನಡೆಸಿದ ಸ್ಟಿಂಗ್ ಆಪರೇಷನ್ನಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ 35 ಕೋಟಿ ರೂಪಾಯಿ ಲಂಚ ಸ್ವೀಕರಿಸಿರುವ ಆರೋಪ ಕೇಳಿಬಂದಿದೆ. ಬಸವರಾಜಪ್ಪ ರೈತ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.