ಚೆನ್ನೈ(ತಮಿಳುನಾಡು),ಜೂ.6-ಸ್ನಾನ ಮಾಡಲು ಹೋಗಿ ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಏಳು ಮಂದಿ ದಾರುಣವಾಗಿ ಸಾವನ್ನಪ್ಪಿರುವ ದುರ್ಘಟನೆ ಕಡಲೂರು ಜಿಲ್ಲೆಯಲ್ಲಿ ನಡೆದಿದೆ.
ಮೃತರನ್ನು ಪ್ರಿಯಾ (19), ಪ್ರಿಯದರ್ಶಿನಿ (13), ಕವಿಯಾ (11), ಸುಮತಾ (16), ಮೋನಿಕಾ (16), ಸಂಗವಿ (15) ಮತ್ತು ಮತ್ತೊಬ್ಬ ಮಹಿಳೆ ಎಂದು ಗುರುತಿಸಲಾಗಿದೆ. ಇವರೆಲ್ಲರೂ ನಿನ್ನೆ ಕಡಲೂರು ಜಿಲ್ಲೆಯ ಗೆದಿಲಂ ನದಿಯಲ್ಲಿ ಸ್ನಾನ ಮಾಡುತ್ತಿದ್ದಾಗ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ಪ್ರಧಾನಿ ಮೋದಿ ಸಂತಾಪ
ಘಟನೆ ಬಗ್ಗೆ ತಿಳಿದ ಪ್ರಧಾನಿ ಮೋದಿಯವರು ಟ್ವೀಟ್ ಮಾಡುವ ಮೂಲಕ ಸಂತಾಪ ಸೂಚಿಸಿದ್ದಾರೆ. ʻತಮಿಳುನಾಡಿನ ಕಡಲೂರಿನಲ್ಲಿ ಯುವಕರು ಮುಳುಗಿ ಸಾವನ್ನಪ್ಪಿದ ಘಟನೆ ತಿಳಿದು ನನಗೆ ಬೇಸರವಾಗಿದೆʼಎಂದು ಬರೆದುಕೊಂಡಿದ್ದಾರೆ.
ಇನ್ನೂ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಸಂತಾಪ ವ್ಯಕ್ತಪಡಿಸಿದ್ದು, ಮುಖ್ಯಮಂತ್ರಿಗಳ ಸಾರ್ವಜನಿಕ ಪರಿಹಾರ ನಿಧಿಯಿಂದ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.