Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಯಾರನ್ನೂ ಹೈಜಾಕ್ ಮಾಡಿಲ್ಲ, ಅದರ ಅವಶ್ಯಕತೆಯೂ ನಮಗಿಲ್ಲ: ಡಿ.ಕೆ. ಶಿವಕುಮಾರ್
    ಸುದ್ದಿ

    ಯಾರನ್ನೂ ಹೈಜಾಕ್ ಮಾಡಿಲ್ಲ, ಅದರ ಅವಶ್ಯಕತೆಯೂ ನಮಗಿಲ್ಲ: ಡಿ.ಕೆ. ಶಿವಕುಮಾರ್

    vartha chakraBy vartha chakraಜೂನ್ 10, 2022Updated:ಜೂನ್ 10, 2022ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ನಾವು ಯಾರನ್ನೂ ಹೈಜಾಕ್ ಮಾಡಿಲ್ಲ, ಅದರ ಅವಶ್ಯಕತೆಯು ನಮಗಿಲ್ಲ. ಕಾಂಗ್ರೆಸ್ ನ ಎಲ್ಲ 69 ಮಂದಿ ಪಕ್ಷಕ್ಕೇ ಮತ ನೀಡಿದ್ದಾರೆ. ಅದು ಸಮಾಧಾನದ ವಿಷಯ. ಬೇರೆ ಪಕ್ಷದ ವಿಚಾರ ನನಗೆ ಗೊತ್ತಿಲ್ಲ.

    ರಾಜ್ಯಸಭೆ ಚುನಾವಣೆ ಮತದಾನ ಮುಗಿದ ನಂತರ ವಿಧಾನಸೌಧದಲ್ಲಿ ಶುಕ್ರವಾರ ಮಾಧ್ಯಮಗಳ ಜತೆ ಅವರು ಮಾತನಾಡಿದರು.

    ತಮ್ಮ ಪಕ್ಷದ ಶಾಸಕರನ್ನು ಕಾಂಗ್ರೆಸ್ ನವರು ಹೈಜಾಕ್ ಮಾಡಿದ್ದಾರೆ ಎಂದು ಜೆಡಿಎಸ್ ನ ಕುಮಾರಸ್ವಾಮಿ ಅವರು ಆರೋಪಿಸಿದ್ದಾರಲ್ಲ ಎಂಬ ಪ್ರಶ್ನೆಗೆ ಅವರು ಹೀಗೆ ಪ್ರತಿಕ್ರಿಯಿಸಿದರು.

    ನಾವು ಹೈಜಾಕ್ ಮಾಡಬೇಕು ಅಂತಿದ್ದರೆ ಅರ್ಧಡಜನ್ ಶಾಸಕರು ಇದ್ದರು. ಆದರೆ ನಮಗೆ ಅದರ ಅವಶ್ಯಕತೆ ಇಲ್ಲ. ಬೇರೆಯವರಿಗೆ ಮುಜುಗರ ಮಾಡುವುದು ನಮಗೆ ಬೇಕಿಲ್ಲ. ಅವರಿಗೆ ನಾವೇನು ಅಡ್ವೈಸ್ ಮಾಡಿದ್ದೇವೆ ಅಂತ ಬೇಕಿದ್ದರೆ ಅವರನ್ನೇ ಕೇಳಿ. ನಮ್ಮ ಪಕ್ಷದ 69 ಮಂದಿಗೆ ವಿಪ್ ನೀಡಿದ್ದೆವು. ಅವರೆಲ್ಲರೂ ನಮಗೇ ಹಾಕಿದ್ದಾರೆ. ಅದನ್ನು ನಾನು ಕಣ್ಣಲ್ಲಿ ನೋಡಿದ್ದೇನೆ. ನನಗೆ ಅಷ್ಟು ಸಾಕು. ಬೇರೆಯವರ ವಿಚಾರ ನಾನು ಮಾತಾಡುವುದಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

    ಜೆಡಿಎಸ್ ಮುಖಂಡ ರೇವಣ್ಣ ನಿಮಗೆ ಮತಪತ್ರ ತೋರಿಸಿದರಂತಲ್ಲ ಎಂಬ ಪ್ರಶ್ನೆಗೆ, ನಾನು ಒಂದು ಪಕ್ಷದ ಮತಗಟ್ಟೆ ಏಜೆಂಟ್ ಆಗಿ ಗೌಪ್ಯ ಮತದಾನ ಪ್ರಕ್ರಿಯೆ ಬಗ್ಗೆ ಮಾತಾಡಲು ಹಕ್ಕಿಲ್ಲ. ಅದು ಸರಿಯೂ ಅಲ್ಲ. ನಾನು ಕಣ್ಣಲ್ಲಿ ಕಂಡಿದ್ದು ಮಾತ್ರ ಹೇಳಬಹುದು. ಬೇರೆ ಪಕ್ಷದ ಯಾರೂ ನನಗೆ ಮತಪತ್ರ ತೋರಿಸಿಲ್ಲ. ರೇವಣ್ಣನವರ ವಿಚಾರಕ್ಕೆ ಎರಡೂ ಪಕ್ಷದವರೂ ಆಕ್ಷೇಪ ವ್ಯಕ್ತಪಡಿಸಿದರು. ಆದರೆ ಗೌಪ್ಯ ಮತದಾನದ ಬಗ್ಗೆ ನಾನು ಮಾತಾಡುವುದಿಲ್ಲ, ಅದಕ್ಕೆ ನನಗೆ ಹಕ್ಕೂ ಇಲ್ಲ ಎಂದರು.

    ಜೆಡಿಎಸ್ ನ ಕೆಲವರು ನಿಮ್ಮ ಅಭ್ಯರ್ಥಿಗೇ ಮತ ಹಾಕಿದ್ದಾರಂತಲ್ಲ, ಹಾಗೆಂದು ಶ್ರೀನಿವಾಸಗೌಡರೇ ಹೇಳಿದ್ದಾರೆ ಎಂಬ ಪ್ರಸ್ತಾಪಕ್ಕೆ, ಬೇರೆಯವರ ವಿಚಾರ ನನಗೆ ಗೊತ್ತಿಲ್ಲ. ನನಗೆ ಬೇರೆ ಯಾರೂ ಮತಪತ್ರ ತೋರಿಸಿಲ್ಲ. ಹೀಗಾಗಿ ನಾನು ಅದರ ಬಗ್ಗೆ ಮಾತಾಡುವುದಿಲ್ಲ. ಶ್ರೀನಿವಾಸಗೌಡರು ನಮ್ಮ ಉತ್ತಮ ಸ್ನೇಹಿತರು. ಬಹಳ ಬೇಕಾದವರು. ಅದರಲ್ಲಿ ಎರಡು ಮಾತಿಲ್ಲ. ಅಸೆಂಬ್ಲಿಯಲ್ಲಿ ನಾವು ಧರಣಿ ಮಾಡಿದಾಗ ನಮ್ಮ ಜತೆ ಕೂತಿದ್ದರು, ಹೋರಾಟ ಮಾಡಿದ್ದರು. ಲೋಕಲ್ ಬಾಡಿ ಚುನಾವಣೆಯಲ್ಲಿ ನಮಗೇ ಬಹಳ ಸಹಾಯ ಮಾಡಿದ್ದಾರೆ. ನಿನ್ನೆ ನನ್ನ ಮನೆಗೂ ಬಂದು ಭೇಟಿ ಮಾಡಿದ್ದರು. ಹಿಂದೆ ಆಫೀಸಿಗೂ ಬಂದಿದ್ದರು. ಆದರೆ ಮತದಾನದ ವಿಚಾರದಲ್ಲಿ ಆವರೇನು ಮಾಡಿದ್ದಾರೋ ಗೊತ್ತಿಲ್ಲ. ಆತ್ಮಸಾಕ್ಷಿ ಮತ ನೀಡಿ ಎಂದು ಕೇಳಿದ್ದೆವು. ಅವರೇನು ಮಾಡಿದ್ದಾರೋ, ಬೇರೆಯವರು ಏನೂ ಹೇಳಿದ್ದಾರೋ ನನಗೆ ಗೊತ್ತಿಲ್ಲ. ಗೊತ್ತಿಲ್ಲದ ವಿಚಾರ ಹೇಗೆ ಮಾತಾಡಲಿ ಎಂದರು.

    Verbattle
    Verbattle
    Verbattle
    News Politics ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಸಿದ್ದರಾಮಯ್ಯ ಬೇಕಾದ್ರೆ ಮೊಮ್ಮಕ್ಕಳನ್ನು ಆಡಿಸಿಕೊಂಡು ಕೂರಲಿ!!
    Next Article CM ಕೆಸಿಆರ್ ಅವಹೇಳನ: ತೆಲಂಗಾಣ ಬಿಜೆಪಿ ಅಧ್ಯಕ್ಷ ಬಂಡಿ‌ ಬಂಧನ
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix ರಲ್ಲಿ Drugs peddler ಗಳ ಜೊತೆ ಇದ್ದ ಪೊಲೀಸರು.
    • что такое кракен маркет ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • LinwoodGah ರಲ್ಲಿ ಪ್ರಹ್ಲಾದ್ ಜೋಷಿ ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಸವಾಲು
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.