Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಐಪಿಎಸ್ ರೂಪಾಗೆ ಹೈಕೋರ್ಟ್ ನಲ್ಲಿ ಗೆಲುವು..
    ಸುದ್ದಿ

    ಐಪಿಎಸ್ ರೂಪಾಗೆ ಹೈಕೋರ್ಟ್ ನಲ್ಲಿ ಗೆಲುವು..

    vartha chakraBy vartha chakraಜೂನ್ 15, 2022Updated:ಜೂನ್ 15, 2022ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಹಿರಿಯ ಐಪಿಎಸ್‌ ಅಧಿಕಾರಿ ಡಿ. ರೂಪಾ ಮೌದ್ಗೀಲ್  ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ ಇವರ ವಿರುದ್ಧ ಸಲ್ಲಿಕೆಯಾಗಿದ್ದ ಮಾನನಷ್ಟ ಮೊಕದ್ದಮೆ  ಹೈಕೋರ್ಟ್‌ ನಲ್ಲಿ ವಜಾಗೊಂಡಿದೆ. ಇವರ ವಿರುದ್ದ ನಿವೃತ್ತ ಡಿಜಿಪಿ ಎಚ್‌. ಎನ್‌. ಸತ್ಯನಾರಾಯಣ ರಾವ್‌ ದಾಖಲಿಸಿರುವ ಮಾನನಷ್ಟ ಮೊಕದ್ದಮೆ ವಿಚಾರಣೆ ರದ್ದು ಕೋರಿ ಡಿ. ರೂಪಾ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಮಾನ್ಯ ಮಾಡಿದೆ. ಅರ್ಜಿದಾರರ ಪರ ವಾದಿಸಿದ ವಕೀಲ ಮಧುಕರ್‌ ದೇಶಪಾಂಡೆ, ‘ಅಪರಾಧ ದಂಡ ಪ್ರಕ್ರಿಯಾ ಸಂಹಿತೆಯ ಸೆಕ್ಷನ್‌ 199 ಪ್ರಕಾರ, ಸರಕಾರಿ ಸಿಬ್ಬಂದಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಬೇಕಾದರೆ ವಿಶೇಷ ನಿಯಮ ಅನುಸರಿಸಬೇಕು. ಸರಕಾರಿ ಅಭಿಯೋಜಕರ ಮೂಲಕವೇ ಸೆಷನ್ಸ್‌ ನ್ಯಾಯಾಲಯಕ್ಕೆ ಮಾನನಷ್ಟ ಮೊಕದ್ದಮೆ ದಾಖಲಿಸಬೇಕು. ಮಾನಹಾನಿ ವರದಿ ಪ್ರಕಟಗೊಂಡ 6 ತಿಂಗಳೊಳಗೆ ಮೊಕದ್ದಮೆ ದಾಖಲಿಸಬೇಕು. ಆದರೆ, ಸತ್ಯ ನಾರಾಯಣ ಮಾನನಷ್ಟ ಮೊಕದ್ದಮೆ ದಾಖಲಿಸುವಾಗ ಈ ನಿಯಮ ಪಾಲಿಸಿಲ್ಲ’ ಸಾರ್ವಜನಿಕ ಸಿಬ್ಬಂದಿಯೊಬ್ಬರು ಮತ್ತೊಬ್ಬ ಸರಕಾರಿ ಸಿಬ್ಬಂದಿಯೊಬ್ಬರ ವಿರುದ್ಧ ಸರಕಾರಕ್ಕೆ ವರದಿ ಸಲ್ಲಿಸುವುದು ಮಾನನಷ್ಟ ಪ್ರಕರಣದ ವ್ಯಾಪ್ತಿಗೆ ಬರುವುದಿಲ್ಲ. ತಮ್ಮ ಅಧಿಕೃತ ಕರ್ತವ್ಯದ ನಿರ್ವಹಣೆ ಭಾಗವಾಗಿರುತ್ತದೆ. ಆದರೂ, ಸತ್ಯನಾರಾಯಣ ರಾವ್‌ ದಾಖಲಿಸಿದ ದೂರು ಪರಿಗಣಿಸಿ ಡಿ. ರೂಪಾ ವಿರುದ್ಧ ಮ್ಯಾಜಿಸ್ಪ್ರೇಟ್‌ ನ್ಯಾಯಾಲಯ ತನಿಖೆಗೆ ಆದೇಶಿಸಿರುವುದು ಸರಿಯಲ್ಲ.ಎಂದು ವಾದ ಮಂಡಿಸಿದರು. ಈ ವಾದ ಮಾನ್ಯ ಮಾಡಿದ ಹೈಕೋರ್ಟ್ ರೂಪಾ ಅವರ ಮನವಿ ಪುರಸ್ಕರಿಸಿ ಮಾನನಷ್ಟ ಮೊಕದ್ದಮೆ ವಜಾಗೊಳಿಸಿತು.ಕಳೆದ 2017ರ ಜುಲೈ 12ರಂದು ರಾಜ್ಯ ಕಾರಾಗೃಹಗಳ ಇಲಾಖೆ ಡಿಜಿಐ ಆಗಿದ್ದ ಡಿ. ರೂಪಾ ಸರಕಾರಕ್ಕೆ ವರದಿ ಸಲ್ಲಿಸಿ, ಕಾರಾಗೃಹ ಇಲಾಖೆ ಡಿಜಿಪಿಯಾಗಿದ್ದ ಎಚ್‌. ಎನ್‌. ಸತ್ಯನಾರಾಯಣ ರಾವ್‌ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ್ದರು. ಪರಪ್ಪನ ಅಗ್ರಹಾರ ಜೈಲಿನಲ್ಲಿ ಬಂಧಿತರಾಗಿರುವ ಎಐಎಡಿಎಂಕೆ ನಾಯಕಿ ಶಶಿಕಲಾಗೆ ವಿಶೇಷ ಸೌಲಭ್ಯ ಕಲ್ಪಿಸಲು ಸತ್ಯನಾರಾಯಣ ರಾವ್‌ ಎರಡು ಕೋಟಿ ರೂ. ಲಂಚ ಪಡೆದಿದ್ದಾರೆಂದು ವರದಿಯಲ್ಲಿ ಆರೋಪಿಸಲಾಗಿತ್ತು. ಈ ಕುರಿತ ಸುದ್ದಿ ಮಾಧ್ಯಮದಲ್ಲಿ ಪ್ರಕಟವಾಗಿದ್ದವು.2017ರ ಜುಲೈ 31ರಂದು ಸೇವೆಯಿಂದ ನಿವೃತ್ತರಾಗಿದ್ದ ಸತ್ಯನಾರಾಯಣ ರಾವ್‌, ‘ಡಿ. ರೂಪಾ ನನ್ನ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆ. ಇದರಿಂದ ತಮ್ಮ ಘನತೆಗೆ ಧಕ್ಕೆಯಾಗಿದೆ’ ಎಂದು ಆರೋಪಿಸಿ 2018ರ ಫೆಬ್ರುವರಿ 5 ರಂದು ಬೆಂಗಳೂರು ನಗರದ 9ನೇ ಎಸಿಎಂಎಂ ನ್ಯಾಯಾಲಯಕ್ಕೆ 20 ಕೋಟಿ ರೂ. ಮೊತ್ತಕ್ಕೆ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.

    ReplyForward

    Verbattle
    Verbattle
    Verbattle
    News
    Share. Facebook Twitter Pinterest LinkedIn Tumblr Email WhatsApp
    Previous Articleರೊಮ್ಯಾಂಟಿಕ್ ದೃಶ್ಯಗಳಲ್ಲಿ ಅಭಿನಯಿಸದಿರಲು ನಯನತಾರಾ ನಿರ್ಧಾರ?
    Next Article ಪಲ್ಟಿಯಾದ ಟ್ರಾಕ್ಟರ್; ದುರ್ಮರಣ
    vartha chakra
    • Website

    Related Posts

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಫೆಬ್ರವರಿ 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಫೆಬ್ರವರಿ 17, 2026

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    ಫೆಬ್ರವರಿ 17, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LarryCax ರಲ್ಲಿ ಎ.ಐ ಹುಡುಗಿ ನೋಡಿ ಹಳ್ಳಕ್ಕೆ ಬಿದ್ದ!
    • LeonardReawn ರಲ್ಲಿ ಜ.29ರಿಂದ ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ
    • Xhtnra ರಲ್ಲಿ ಗಣೇಶ ಮೂರ್ತಿ ಉಚಿತ.
    Latest Kannada News

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ಫೆಬ್ರವರಿ 17, 2026

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಫೆಬ್ರವರಿ 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಫೆಬ್ರವರಿ 17, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.