ಬರೇಲಿ(ಉತ್ತರಪ್ರದೇಶ),ಜೂ.15-ಬರೇಲಿ- ಆಗ್ರಾ ರಸ್ತೆಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ವೇಗವಾಗಿ ಬಂದ ಟ್ಯಾಂಕರ್ ಡಿಕ್ಕಿ ಹೊಡೆದು ಟ್ರ್ಯಾಕ್ಟರ್ ಪಲ್ಟಿಯಾಗಿ ಕಂದಕಕ್ಕೆ ಬಿದ್ದು 6 ಮಂದಿ ಸಾವನ್ನಪ್ಪಿ 14 ಮಂದಿ ಗಾಯಗೊಂಡಿದ್ದಾರೆ.
ಮೃತರನ್ನು ಅನಿತಾ ದೇವಿ (40), ಸಂಗೀತಾ (19), ಸುಷ್ಮಾ (65), ವೀರಾ ದೇವಿ (75), ಪೂನಂ (28), ಸಹದೇವ್ (12) ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡವರನ್ನು ಬದೌನ್‌ನ ಸರ್ಕಾರಿ ಮೆಡಿಕಲ್ ಕಾಲೇಜಿಗೆ ದಾಖಲಿಸಲಾಗಿದ್ದು ಅವರಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದೆ.
ಅಪಘಾತದ ಬಳಿಕ ಟ್ಯಾಂಕರ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಆತನ ಬಂಧನಕ್ಕೆ ತೀವ್ರ ಶೋಧ ನಡೆಸಲಾಗಿದೆ.
ಬರೇಲಿಯ ಮೂಸಜಾಗ್ ಪ್ರದೇಶದ ಔರಮೈ ಗ್ರಾಮಕ್ಕೆ ಸೇರಿದ ಕುಟುಂಬಸ್ಥರು ಟ್ರ್ಯಾಕ್ಟರ್ ಟ್ರಾಲಿಯಲ್ಲಿ ಗಂಗಾ ನದಿಯಲ್ಲಿ ಸ್ನಾನ ಮಾಡಲು ತೆರಳಿದ್ದಾಗ ಈ ದುರಂತ ಸಂಭವಿಸಿದೆ.
ಗಂಗಾ ನದಿ ಸ್ನಾನದಿಂದ ಹಿಂತಿರುಗುತ್ತಿದ್ದಾಗ ಎದುರಿನಿಂದ ಬಂದ ಟ್ಯಾಂಕರ್ಗೆ ಟ್ರ್ಯಾಕ್ಟರ್ ಡಿಕ್ಕಿ ಹೊಡೆದಿದೆ. ಸಿವಿಲ್ ಲೈನ್ಸ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಟ್ಯಾಂಕರ್ ಅವರ ವಾಹನವನ್ನು ಓವರ್ ಟೇಕ್ ಮಾಡುವ ಪ್ರಯತ್ನದಲ್ಲಿ ಹಿಂದಿನಿಂದ ಬಂದು ಡಿಕ್ಕಿ ಹೊಡೆದಿದೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಒಪಿ ಸಿಂಗ್ ತಿಳಿಸಿದ್ದಾರೆ.
ಈ ವೇಳೆ ನಿಯಂತ್ರಣ ಕಳೆದುಕೊಂಡ ಟ್ರ್ಯಾಕ್ಟರ್ ಟ್ರಾಲಿ ಪಲ್ಟಿಯಾಗಿ ಕಂದಕಕ್ಕೆ ಬಿದ್ದಿದ್ದು, ಐವರು ಮಹಿಳೆಯರು ಮತ್ತು ಒಂದು ಮಗು ಸ್ಥಳದಲ್ಲೇ ಸಾವನ್ನಪ್ಪಿದೆ.
ಈ ಅಪಘಾತದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿ “ಉತ್ತರ ಪ್ರದೇಶದ ಬದೌನ್‌ನಲ್ಲಿ ಸಂಭವಿಸಿದ ರಸ್ತೆ ಅಪಘಾತವು ಅತ್ಯಂತ ದುಃಖಕರವಾಗಿದೆ. ಇದರಲ್ಲಿ, ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪವನ್ನು ವ್ಯಕ್ತಪಡಿಸುತ್ತೇನೆ ಎಂದಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ” ಎಂದು ಪ್ರಧಾನಿ ಕಾರ್ಯಾಲಯ ಟ್ವೀಟ್ ಮಾಡಿದೆ.
ಬದೌನ್ ಪ್ರದೇಶದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ 6 ಜನರ ಸಾವಿಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ ಸಂತಾಪ ಸೂಚಿಸಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆ ನೀಡುವಂತೆಯೂ ಉತ್ತರ ಪ್ರದೇಶದ ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ.
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022

