ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಈ ಘಟನೆಗೆ ಕಾರಣರಾಗಿರುವ ಸಚಿವ ಈಶ್ವರಪ್ಪ ಅವರನ್ನು ಬಂಧಿಸುವಂತೆ ಒತ್ತಾಯಿಸಿ ಕಾಂಗ್ರೆಸ್ ನಾಯಕರು ಸಿಎಂ ಮನೆಗೆ ಲಗ್ಗೆ ಹಾಕಲೆತ್ನಿಸಿದರು.
ಪ್ರದೇಶ ಕಾಂಗ್ರೆಸ್ ಕಚೇರಿಯಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮನೆಗೆ ಮುತ್ತಿಗೆ ಹಾಕಲು ಹೊರಟ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಪ್ರತಿ ಪಕ್ಷ ನಾಯಕ ಸಿದ್ದರಾಮಯ್ಯ, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್, ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ಮತ್ತಿತರ ಕಾಂಗ್ರೆಸ್ ಮುಖಂಡರನ್ನು ಪೊಲೀಸರು ರೇಸ್ ಕೋರ್ಸ್ ರಸ್ತೆಯಲ್ಲಿ ವಶಕ್ಕೆ ಪಡೆದರು. ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹ್ಮದ್, ಧ್ರುವನಾರಾಯಣ್, ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರನಾಥ್, ಗೋವಿಂದರಾಜ್ ಮತ್ತಿತರರು ಬಂಧನಕ್ಕೆ ಒಳಗಾದರು.
ಇದಕ್ಕೂ ಮುನ್ನ ಮಾತನಾಡಿದ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ರಾಜ್ಯದಲ್ಲಿ ಕಮೀಷನ್ ಸರ್ಕಾರ ತೊಲಗಬೇಕು ಇದರಲ್ಲಿ ಶಾಮೀಲಾಗಿರುವ ಈಶ್ವರಪ್ಪ ಸೇರಿದಂತೆ ಎಲ್ಲಾ ನಾಯಕರ ವಿರುದ್ದ ಕ್ರಮ ಕೈಗೊಳ್ಳುವವರಗೆ ತಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ಎಚ್ಚರಿಸಿದರು.
Previous Articleಈಶ್ವರಪ್ಪ ಪ್ರಕರಣ-ಸಿಐಡಿ ತನಿಖೆ
Next Article ಪಕ್ಷ ತೊರೆಯುತ್ತೇನೆ ಹುಷಾರ್-ಜಮೀರ್