ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಸಮಗ್ರವಾಗಿ ತನಿಖೆ ನಡೆಸುತ್ತೇವೆ. ಸತ್ಯ ಆಚೆ ಬಂದೇ ಬರಲಿದೆ. ಇಲ್ಲಿ ಯಾರನ್ನೂ ಕೂಡ ರಕ್ಷಣೆ ಮಾಡುವ ಉದ್ದೇಶ ಸರ್ಕಾರಕ್ಕಿಲ್ಲ. ವರದಿ ಬಂದ ನಂತರ ಸಚಿವ ಈಶ್ವರಪ್ಪನವರ ರಾಜೀನಾಮೆ ಕುರಿತು ತೀರ್ಮಾನವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಾಥಮಿಕ ತನಿಖೆಯಾಗುವವರೆಗೂ ಯಾವುದೇ ರೀತಿಯ ಕ್ರಮ ತೆಗೆದುಕೊಳ್ಳಲು ಸಾಧ್ಯವಿಲ್ಲ. ಪ್ರತಿಪಕ್ಷದವರು ಆಧಾರರಹಿತ ಆರೋಪ ಮಾಡಿದರೆ ಅದಕ್ಕೆಲ್ಲ ಉತ್ತರಿಸಲು ಸಾಧ್ಯವಿಲ್ಲ. ಈವರೆಗೂ ಈಶ್ವರಪ್ಪನವರ ವಿಷಯದಲ್ಲಿ ಹೈಕಮಾಂಡ್ ಮಧ್ಯ ಪ್ರವೇಶ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು. ಈಗಾಗಲೇ ಮರಣೋತ್ತರ ಪರೀಕ್ಷೆ ನಡೆದು ವರದಿ ಬರುವುದು ಬಾಕಿ ಇದೆ. ಅದು ಬಂದ ನಂತರ ನಾವು ತನಿಖೆ ಬಗ್ಗೆ ತೀರ್ಮಾನಿಸುತ್ತೇವೆ.
ಮುಖ್ಯಮಂತ್ರಿ ಕಚೇರಿ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಕಮಿಷನ್ ಪಡೆಯಲಾಗುತ್ತಿದೆ ಎಂಬ ಆರೋಪ ಕುರಿತು ಯಾರ ಬಳಿಯಾದರೂ ದಾಖಲೆಗಳಿದ್ದರೆ ಕೊಡಿ. ಸರ್ಕಾರ ಖಂಡಿತವಾಗಿಯೂ ತನಿಖೆ ನಡೆಸಲಿದೆ ಎಂದು ಹೇಳಿದರು
ಪ್ರಕರಣದಲ್ಲಿ ಕಾಂಗ್ರೆಸ್ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಹೊರಟಿದೆ ಎಂದು ಆರೋಪಿಸಿದರು
ಕಾಂಗ್ರೆಸ್ ಅಧಿಕಾರಾವಯಲ್ಲಿ ಇಂತಹ ಅನೇಕ ಪ್ರಕರಣಗಳು ನಡೆದಿವೆ. ಕೊಲೆ ಪ್ರಕರಣಗಳನ್ನೇ ಹಿಂಪಡೆದಿರುವ ಅವರಿಗೆ ಈಗ ಪ್ರತಿಭಟನೆ ನಡೆಸುವ ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದರು.
Previous Articleಬಿಜೆಪಿ ವಿರುದ್ಧ ಕುಟುಂಬಸ್ಥರ ಆಕ್ರೋಶ
Next Article ಇನ್ಸ್ ಪೆಕ್ಟರ್ ಖಾತೆಗೆ ಕನ್ನ