ನಟಿ ಶ್ವೇತಾ ಶ್ರೀವಾಸ್ತವ್ ಅಭಿನಯದ ಹೋಪ್ ಜುಲೈ 8ರಂದು ರಾಜ್ಯಾದ್ಯಂತ ರಿಲೀಸ್ ಆಗ್ತಿದೆ ನಿನ್ನೆ ಸಚಿವ ಡಾ.ಸಿ.ಎನ್. ಅಶ್ವತ್ಥ್ ನಾರಾಯಣ ಟ್ರೈಲರ್ ಬಿಡುಗಡೆ ಮಾಡಿದ್ದಾರೆ.
ಸಚಿವರು ಮಾತನಾಡಿ ಒಳ್ಳೆಯ ವಿಷಯ ಆಯ್ಕೆ ಮಾಡಿಕೊಂಡು ಸಿನಿಮಾ ಮಾಡಿದ್ದಾರೆ. ವರ್ಗಾವಣೆ ಸರ್ಕಾರದ ಮುಖ್ಯ ಸಮಸ್ಯೆ ಅದೊಂದು ಚಾಲೆಂಜ್. ಹೀಗಾಗಿ ಇದರ ಮೇಲೆ ಬೆಳಕು ಚೆಲ್ಲುವ ಕೆಲಸ ಮಾಡಿರುವುದು ಶ್ಲಾಘನೀಯ ಎಂದರು
ನಿರ್ಮಾಪಕಿ ವರ್ಷಾ ಸಂಜೀವ್ ಈ ಚಿತ್ರಕ್ಕೆ ಬಂಡವಾಳ ಹೂಡಿಕೆ ಮಾಡಿದ್ದಾರೆ ಶ್ವೇತಾ ಶ್ರೀವಾಸ್ತವ್ ಜತೆಗೆ ಸುಮಲತಾ ಅಂಬರೀಷ್, ಪ್ರಮೋದ್ ಶೆಟ್ಟಿ, ಗೋಪಾಲ ಪಾಂಡೆ, ಪ್ರಕಾಶ್ ಬೆಳವಾಡಿ, ಸಿರಿ ಮೊದಲಾದವರು ತೆರೆ ಹಂಚಿಕೊಂಡಿದ್ದಾರೆ ಜಲ್ವಂತ ಸಿನಿಮಾ ನಿರ್ದೇಶಿಸಿದ್ದ ಅಂಬರೀಶ್ ಈ ಚಿತ್ರವನ್ನು ನಿರ್ದೇಶಿಸಿದ್ದು, ಎಸ್.ಹಲ್ಲೇಶ್ ಕ್ಯಾಮರಾ ಕೆಲಸವಿದೆ. ರಿತ್ವಿಕ್ ಮುರಳೀಧರ್ ಸಂಗೀತ ಪ್ರೇಕ್ಷಕರಿಗೆ ಇಷ್ಟವಾಗಲಿದೆ.
Previous Articleಅಂತಾರಾಷ್ಟ್ರೀಯ ಮಾದಕದ್ರವ್ಯ ವಿರೋಧಿ ದಿನಾಚರಣೆ
Next Article ಬ್ರಿಡ್ಜ್ ನಿಂದ ಕೆಳಗೆ ಬಿದ್ದು ಬೈಕ್ ರೈಡರ್ ಇನ್ನಿಲ್ಲ