ಮುಂಬೈ; ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಬುಧವಾರ ರಾತ್ರಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರು ನಾಳೆ (ಜೂ.30) ರಾಜ್ಯ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆಗೆ ಸೂಚಿಸಿದ್ದರು. ಈ ಪ್ರಕ್ರಿಯೆಗೆ ತಡೆ ನೀಡುವಂತೆ ಕೋರಿ ಮಹಾರಾಷ್ಟ್ರ ಸರ್ಕಾರ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು. ಆದರೆ ಸುಪ್ರೀಂ ಕೋರ್ಟ್ ವಿಶ್ವಾಸಮತ ಯಾಚನೆಗೆ ತಡೆ ನೀಡಲು ನಿರಾಕರಿಸಿದ ಹಿನ್ನೆಲೆಯಲ್ಲಿ ಉದ್ಧವ್ ಠಾಕ್ರೆ ರಾಜೀನಾಮೆ ನಿರ್ಧಾರ ಪ್ರಕಟಿಸಿದ್ದಾರೆ.
ನಮ್ಮ ಸರ್ಕಾರಕ್ಕೆ ದುರದೃಷ್ಟದ ಕಾಲ ಎಂದು ಹೇಳಿಕೊಂಡಿದ್ದಾರೆ. ವಿಡಿಯೋ ಮೂಲಕ ಸಿಎಂ ಸ್ಥಾನಕ್ಕೆ ಉದ್ಧವ್ ಠಾಕ್ರೆ ರಾಜೀನಾಮೆ ನೀಡಿದ್ದಾರೆ.
Previous Articleಮುಂಗಾರು ಆರಂಭದ ಬಳಿಕ ಮೊದಲ ಅಬ್ಬರದ ಮಳೆ
Next Article ದೇಶದಲ್ಲಿ 18,819 ಜನರಿಗೆ ಕೊರೋನಾ ಸೋಂಕು