ಭಕ್ತರ ಅನುಕೂಲಕ್ಕಾಗಿ ಮೆಟ್ಟಿಲು, ಮಂಟಪಗಳ ಶುಚಿಕಾರ್ಯ
ಆಷಾಢ ಮಾಸ ಆಗಮನ ಹಿನ್ನೆಲೆ ಮೈಸೂರಿನ ಚಾಮುಂಡಿಬೆಟ್ಟದ ಪಾದದ ಶುಚಿಕಾರ್ಯ ನಡೆಯುತ್ತಿದೆ. ಚಾಮುಂಡಿತಾಯಿಯ ದರ್ಶನ ಪಡೆಯಲು ಆಗಮಿಸುವ ಭಕ್ತರು ಮೆಟ್ಟಿಲುಗಳ ಮೂಲಕ ಹತ್ತಿ ಬರುವವರ ಅನುಕೂಲಕ್ಕಾಗಿ ಶುಚಿತ್ವಕ್ಕೆ ಹೆಚ್ಚಿನ ಒತ್ತು ನೀಡಿ ಸ್ವಯಂ ಕಾರ್ಯಕರ್ತರು ಶುಚಿತ್ವಕ್ಕೆ ಮುಂದಾಗಿದ್ದಾರೆ.
ಮೈಸೂರು ನಗರದ ಪ್ರತಿಷ್ಠಿತ ಕಾರ್ಮಿಕ ಸಂಘಟನೆಗಳಲ್ಲೊಂದಾದ ಸರ್ ಎಂ. ವಿಶ್ವೇಶ್ವರಯ್ಯ ನಲ್ಲಿ ಮತ್ತು ಒಳಚರಂಡಿ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘವು ಚಾಮುಂಡಿ ಬೆಟ್ಟದ ಪಾದದ ಬಳಿ ಬೆಟ್ಟದ ಸಾವಿರ ಮೆಟ್ಟಿಲುಗಳ ಸ್ವಚ್ಛತೆ ಕಾರ್ಯಕ್ರಮ ನಡೆಸಿತು.
ಈ ವೇಳೆ ಸಾಹಿತಿ ಬನ್ನೂರು ಕೆ.ರಾಜು ಅವರು ನಾಲ್ವಡಿ ಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಉದ್ಘಾಟಿಸಿದರು. ನಾವು ಜೀವಿಸುವ ಪರಿಸರ, ಸೇವಿಸುವ ಆಹಾರ, ಕುಡಿಯುವ ನೀರು, ಹಾಗು ಉಸಿರಾಡುವ ಗಾಳಿ ಇದೆಲ್ಲವೂ ಶುದ್ಧವಾಗಿದ್ದು ನಾವೆಲ್ಲರೂ ಆರೋಗ್ಯವಾಗಿರಬೇಕೆಂದರೆ ಪ್ರತಿಯೊಬ್ಬರಲ್ಲೂ ಸ್ವಚ್ಛ ಪರಿಸರ ಪ್ರಜ್ಞೆ ಇರಬೇಕೆಂದರು.