ಉಡುಪಿ: ಮೊಬೈಲ್ ಗೆ ಬಂದ ಕಡಿಮೆ ಬಡ್ಡಿದರದ ಸಾಲದ ಯೋಜನೆಯ ಸಂದೇಶ ನಂಬಿ ವ್ಯಕ್ತಿಯೊಬ್ಬರು ಲಕ್ಷಾಂತರ ರೂಪಾಯಿ ಕಳೆದುಕೊಂಡ ಘಟನೆ ಬಗ್ಗೆ ನಗರದ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಸೋಮವಾರ ದೂರು ದಾಖಲಾಗಿದೆ.
ಕಾಪು ತಾಲೂಕಿನ ಬೆಳಪು ಗ್ರಾಮದ ಪ್ರಸಾದ್ ನಗರದ ನಿವಾಸಿ 55 ವರ್ಷದ ವಿರೇಶ್ ಹಣ ಕಳೆದುಕೊಂಡ ವ್ಯಕ್ತಿ. ಇವರ ಮೊಬೈಲ್ ಗೆ ಜೂನ್ 8ರಂದು P.M. Business Loan Yojna ಅಡಿಯಲ್ಲಿ ಕಡಿಮೆ ಬಡ್ಡಿದರದಲ್ಲಿ ಸಾಲ ನೀಡುವ ಬಗ್ಗೆ ಸಂದೇಶ ಬಂದಿತ್ತು. ಇದನ್ನು ನಂಬಿದ ವಿರೇಶ್, ಸಂದೇಶದಲ್ಲಿದ್ದ ಮೊಬೈಲ್ ಸಂಖ್ಯೆಗೆ ಕರೆ ಮಾಡಿದ್ದಾರೆ. ಆಗ ಅಪರಿಚಿತ ವ್ಯಕ್ತಿಗಳು ತಾವು P.M. Business Loan Yojna ಸಂಸ್ಥೆಯವರು ಎಂದು ನಂಬಿಸಿ, ಕ್ಲಿಯರೆನ್ಸ್ ಹಾಗು ಇತರೇ ಕಾರಣಗಳಿಗಾಗಿ 2,62,700 ರೂಪಾಯಿಗಳನ್ನು ಬೇರೆ ಬೇರೆ ಬ್ಯಾಂಕ್ ಖಾತೆಗಳಿಗೆ ಆನ್ ಲೈನ್ ಮೂಲಕ ವರ್ಗಾವಣೆ ಮಾಡಿಸಿಕೊಂಡಿದ್ದಾರೆ. ಬಳಿಕ ಸಾಲವನ್ನೂ ನೀಡದೇ, ನೀಡಿದ ಹಣವನ್ನೂ ವಾಪಾಸು ನೀಡದೇ ಮೋಸ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಮೊಬೈಲ್ ಮೆಸೆಜ್ ನಂಬಿ ಲಕ್ಷಾಂತರ ರೂಪಾಯಿ ಕಳೆದುಕೊಂಡ ವ್ಯಕ್ತಿ
Previous Articleಆಗುಂಬೆ ಘಾಟಿಯಲ್ಲಿ ಲಘು ವಾಹನಗಳ ಸಂಚಾರಕ್ಕೆ ಇಂದಿನಿಂದ ಅವಕಾಶ
Next Article RSS ಕಚೇರಿ ಮೇಲೆ ಬಾಂಬ್ ದಾಳಿ