ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ರಾಹುಲ್ ಗಾಂಧಿಯವರಿಗೆ ಸಮನ್ಸ್ ನೀಡಿರುವುದನ್ನು ವಿರೋಧಿಸಿ ಸೋಮವಾರ ಕಾಂಗ್ರೆಸ್ ದೆಹಲಿಯಲ್ಲಿ ಬೃಹತ್ ಜಾಥಾ ಹಮ್ಮಿಕೊಂಡಿತ್ತು.
ಈ ವೇಳೆ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ಅವರನ್ನು ವಶಕ್ಕೆ ಪಡೆಯಲು ಪೊಲೀಸರು ಮುಂದಾದಾಗ ತಪ್ಪಿಸಿಕೊಂಡು ಓಡಿರುವ ವಿಡಿಯೋ ವೈರಲ್ ಆಗಿದೆ.
ಪೊಲೀಸರು ಕಾಂಗ್ರೆಸ್ ಜಾಥಾದಲ್ಲಿ ಪಾಲ್ಗೊಂಡಿದ್ದ ನಾಯಕರನ್ನು ಮಾರ್ಗ ಮಧ್ಯೆ ತಡೆದು ವಶಕ್ಕೆ ಪಡೆದಿದ್ದಾರೆ. ಶ್ರೀನಿವಾಸ್ ಅವರನ್ನು ವಶಕ್ಕೆ ಪಡೆಯಲು ಹೋದಾಗ ಪೊಲೀಸರಿಂದ ತಪ್ಪಿಸಿಕೊಂಡು ಎಸ್ಕೇಪ್ ಆಗಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಕಾರಿನಲ್ಲಿ ಕುಳಿತುಕೊಳ್ಳಲು ಮುಂದಾಗಿದ್ದ ಶ್ರೀನಿವಾಸ್ ಅವರನ್ನು ಪೊಲೀಸ್ ಅಧಿಕಾರಿಯೊಬ್ಬರು ವಶಕ್ಕೆ ಪಡೆಯಲು ಮುಂದಾದಾಗ ಅವರಿಂದ ತಪ್ಪಿಸಿಕೊಂಡ ಶ್ರೀನಿವಾಸ್ ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಶ್ರೀನಿವಾಸ್ ಅವರ ವರ್ತನೆ ಈಗ ಟೀಕೆಗೂ ಒಳಗಾಗಿದೆ.
ಪೊಲೀಸರಿಂದ ತಪ್ಪಿಸಿಕೊಂಡು ಓಡಿದ ಯುವ ಕಾಂಗ್ರೆಸ್ ಅಧ್ಯಕ್ಷ!
Previous Articleಕರಾವಳಿ ರಾಜಕಾರಣದ ಭೀಷ್ಮ ಎ.ಜಿ ಕೊಡ್ಗಿ ಇನ್ನಿಲ್ಲ
Next Article ಡಾಲರ್ ಎದುರು ಸಾರ್ವಕಾಲಿಕ ಕುಸಿತ ಕಂಡ ರೂಪಾಯಿ ಮೌಲ್ಯ