ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಮತ್ತೊಂದು ಆ್ಯಸಿಡ್ ದಾಳಿ ನಡೆದಿದೆ.
ಬೆಂಗಳೂರಿನ ಸಾರಕ್ಕಿ ಬಳಿ ಮಹಿಳೆ ಮೇಲೆ ಆ್ಯಸಿಡ್ ದಾಳಿ ನಡೆಸಲಾಗಿದೆ. ಬೆಂಗಳೂರಿನ ಸುಂಕದಕಟ್ಟೆ ಬಳಿ ಇತ್ತೀಚೆಗಷ್ಟೇ ಯುವತಿ ಮೇಲೆ ನಡೆದ ಆ್ಯಸಿಡ್ ದಾಳಿ ಮಾಸುವ ಮುನ್ನವೇ ನಗರದಲ್ಲಿ ಮತ್ತೊಂದು ಆ್ಯಸಿಡ್ ದಾಳಿ ನಡೆದಿರುವುದು ಸಾರ್ವಜನಿಕರ ಆತಂಕ ಹೆಚ್ಚಿಸಿದೆ.
ಪರಿಚಿತನಿಂದಲೇ ಮಹಿಳೆಯ ಮೇಲೆ ಆ್ಯಸಿಡ್ ದಾಳಿ ನಡೆದಿದ್ದು. ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಹಿಳೆ ಜೊತೆ ವೈಮನಸ್ಸು ಹೊಂದಿದ್ದ ಅಹ್ಮದ್ ಎಂಬಾತ ಆ್ಯಸಿಡ್ ಎರಚಿರುವ ಮಾಹಿತಿ ಇದೆ. ಸದ್ಯ ಮಹಿಳೆ ಆಸ್ಪತ್ರೆಯಲ್ಲಿ ಇದ್ದಾರೆ. ಪ್ರತ್ಯಕ್ಷದರ್ಶಿಗಳು ಹಾಗು ಮಹಿಳೆಯ ಹೇಳಿಕೆ ಪಡೆದು ಮುಂದಿನ ಕ್ರಮ ಜರುಗಿಸಲಾಗುವುದು’ ಎಂದು ಪೊಲೀಸರು ತಿಳಿಸಿದ್ದಾರೆ.