Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Ambulanceಗಳ ಸುಗಮ ಸಂಚಾರಕ್ಕೆ ಸೆನ್ಸಾರ್‌ ಟ್ರಾಫಿಕ್‌ ಸಿಗ್ನಲ್‌
    ರಾಜ್ಯ

    Ambulanceಗಳ ಸುಗಮ ಸಂಚಾರಕ್ಕೆ ಸೆನ್ಸಾರ್‌ ಟ್ರಾಫಿಕ್‌ ಸಿಗ್ನಲ್‌

    vartha chakraBy vartha chakraಜನವರಿ 17, 2023Updated:ಜನವರಿ 17, 20231 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜ.17-ಆ್ಯಂಬುಲೆನ್ಸ್‌ಗಳ ಸುಗಮ ಸಂಚಾರಕ್ಕಾಗಿ ನಗರದಲ್ಲಿ ಸೆನ್ಸಾರ್‌ ಮಾದರಿಯ ಟ್ರಾಫಿಕ್‌ ಸಿಗ್ನಲ್‌ ಅಳವಡಿಸಲು ತೀರ್ಮಾನಿಸಲಾಗಿದೆ ಎಂದು ಸಂಚಾರ ವಿಭಾಗದ ವಿಶೇಷ ಆಯುಕ್ತ ಡಾ ಎಂ.ಎ.ಸಲೀಂ ಅವರು ತಿಳಿಸಿದ್ದಾರೆ.
    ರಸ್ತೆ ಬಳಕೆದಾರರ ಸುಗಮ ಸಂಚಾರ ಹಾಗೂ ಸುರಕ್ಷತೆಗಾಗಿ ನಗರ ಸಂಚಾರ ಪೊಲೀಸ್‌ ಹಾಗೂ ಸಾರಿಗೆ ಇಲಾಖೆ ಸಹಯೋಗದಲ್ಲಿ ‘ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ 2023 ಅಂಗವಾಗಿ ಕಬ್ಬನ್ ಪಾರ್ಕ್ ನಲ್ಲಿ ನಡೆದ ರಸ್ತೆ ಸುರಕ್ಷತಾ ರ್ಯಾಲಿಯಲ್ಲಿ ಪಾಲ್ಗೊಂಡ ಬಳಿಕ ಅವರು ಸುದ್ದಿಗಾರರ ಜೊತೆ ಮಾತನಾಡಿದರು.
    ಮೊದಲ ಹಂತದಲ್ಲಿ 163 ಅಡಾಪ್ಟೀವ್‌ ಸಿಗ್ನಲ್‌ ಲೈಟ್ಸ್‌ ಖರೀದಿಸಲು ರಾಜ್ಯ ರಸ್ತೆ ಅಭಿವೃದ್ಧಿ ನಿಗಮ(ಕೆಆರ್‌ಡಿಸಿಎಲ್‌)ಕ್ಕೆ ಡಿಪಿಆರ್‌ ನೀಡಲಾಗಿದೆ. ಇನ್ನು 2-3 ತಿಂಗಳಲ್ಲಿ ಕೆಆರ್‌ಡಿಸಿಎಲ್‌ ಈ ಅಡಾಪ್ಟೀವ್‌ ಸಿಗ್ನಲ್‌ ಲೈಟ್ಸ್‌ ಖರೀದಿ ಪ್ರಕ್ರಿಯೆ ಮುಗಿಸಲಿದೆ ಎಂದರು.
    ಬಳಿಕ ನಿಗದಿತ ಜಂಕ್ಷನ್‌, ರಸ್ತೆಗಳಲ್ಲಿ ಈ ಸಿಗ್ನಲ್‌ ಲೈಟ್ಸ್‌ ಅಳಡಿಸಲಾಗುವುದು. ಈ ಸೆನ್ಸಾರ್‌ ಮಾದರಿಯ ಅಡಾಪ್ಟೀವ್‌ ಸಿಗ್ನಲ್‌ ಅಳವಡಿಕೆಯಿಂದ ಆ್ಯಂಬುಲೆನ್ಸ್‌ 200 ಮೀಟರ್‌ ದೂರದಲ್ಲಿ ಇರುವಾಗಲೇ ಅದನ್ನು ಗುರುತಿಸಿ ಸ್ವಯಂಚಾಲಿತವಾಗಿ ಸಿಗ್ನಲ್‌ಗಳು ಹತ್ತಿಕೊಂಡು ಆ್ಯಂಬುಲೆನ್ಸ್‌ ಸುಗಮವಾಗಿ ಸಂಚರಿಸಲು ಅನುವು ಮಾಡಿಕೊಡಲಿದೆ ಎಂದು ಹೇಳಿದರು.
    ಎನ್ಒಸಿ ಕಡ್ಡಾಯ:
    ಕಳೆದ ವರ್ಷ ನಗರದಲ್ಲಿ ಸಂಚಾರ ನಿಯಮ ಉಲ್ಲಂಘನೆಯ 1 ಕೋಟಿ ಪ್ರಕರಣಗಳನ್ನು ದಾಖಲಿಸಲಾಗಿದೆ. ಸಂಚಾರ ನಿಯಮ ಉಲ್ಲಂಘನೆಗೆ ಕೇಸ್‌ ಹಾಗೂ ದಂಡ ವಿಧಿಸುವುದೇ ಪರಿಹಾರವಿಲ್ಲ. ಜನರ ಮನಸಿನಲ್ಲಿ ಕಾನೂನು ಪಾಲನೆ ಮೂಡಬೇಕು.
    ಪಾಶ್ಚಿಮಾತ್ಯ ದೇಶಗಳಲ್ಲಿ ರಸ್ತೆಗಳಲ್ಲಿ ಸಂಚಾರ ಪೊಲೀಸರು ಇರುವುದಿಲ್ಲ. ಅಲ್ಲಿನ ಜನರೇ ಸ್ವಯಂಪ್ರೇರಿತರಾಗಿ ಸಂಚಾರ ನಿಯಮ ಪಾಲಿಸುತ್ತಾರೆ ಎಂದರು.
    ಸುರಕ್ಷತೆ ಕಾಳಜಿ ಅಗತ್ಯ:
    ಇದಕ್ಕೂ ‌ಮುನ್ನ ರ್ಯಾಲಿಯನ್ನು ಉದ್ಘಾಟಿಸಿ ಮಾತನಾಡಿದ ನಗರ ಪೊಲೀಸ್‌ ಆಯುಕ್ತ ಸಿ.ಎಚ್‌.ಪ್ರತಾಪ್‌ ರೆಡ್ಡಿ ಅವರು
    ರಸ್ತೆ ಸುರಕ್ಷತೆ ಎಂಬುದು ಒಂದು ವಾರಕ್ಕೆ ಮಾತ್ರ ಸೀಮಿತವಾಗಬಾರದು. ಇಡೀ ವರ್ಷ ರಸ್ತೆ ಸುರಕ್ಷತೆಯ ಬಗ್ಗೆ ಕಾಳಜಿ ವಹಿಸಬೇಕು. ಶಾಲಾ ಮಕ್ಕಳ ಮುಖಾಂತರ ಅವರ ಪೋಷಕರಿಗೆ ರಸ್ತೆ ಸುರಕ್ಷತೆ ಬಗ್ಗೆ ಅರಿವು ಮೂಡಿಸುವುದು ಈ ಸಪ್ತಾಹದ ಮುಖ್ಯ ಉದ್ದೇಶವಾಗಿದೆ ಎಂದರು.
    ರ್ಯಾಲಿಯಲ್ಲಿ ನಗರದ ವಿವಿಧ ಶಾಲೆಗಳ ಸುಮಾರು 1500 ವಿದ್ಯಾರ್ಥಿಗಳು, ಸಂಚಾರ ಪೊಲೀಸರು, ಟ್ರಾಫಿಕ್‌ ವಾರ್ಡನ್‌ಗಳು ಭಾಗವಹಿಸಿದ್ದರು.
    ಭಿತ್ತಿ ಫಲಕ ಪ್ರದರ್ಶನ:
    ಕಬ್ಬನ್‌ ಪಾರ್ಕ್ ನಿಂದ ಆರಂಭವಾದ ರ್ಯಾಲಿಯು ಕ್ವೀನ್ಸ್‌ ಸರ್ಕಲ್‌ ಮುಖಾಂತರ ಎಂ.ಜಿ. ರಸ್ತೆಯಲ್ಲಿ ಸಾಗಿ ಕಾವೇರಿ ಆರ್ಟ್ಸ್ ಆ್ಯಂಡ್‌ ಕ್ರಾಫ್ಟ್‌, ಓಪೆರಾ ಜಂಕ್ಷನ್‌, ರೆಸಿಡೆನ್ಸಿ ರಸ್ತೆ, ಸುಲೇವಾನ್‌ ಹಾಕಿ ಕ್ರೀಡಾಂಗಣದಲ್ಲಿ ಅಂತ್ಯವಾಯಿತು.
    ಈ ರ್ಯಾಲಿಯಲ್ಲಿ ವಿದ್ಯಾರ್ಥಿಗಳ ಜತೆಗೆ ಆಟೋರಿಕ್ಷಾ, ಕ್ಯಾಬ್‌, ಲಾರಿ, ಬಸ್ಸುಗಳ ಚಾಲಕರು ಹಾಗೂ ವಾಹನ ತರಬೇತಿ ಶಾಲೆಯ ಮುಖ್ಯಸ್ಥರು ಭಾಗವಹಿಸಿದ್ದರು. ವಾಹನ ಚಾಲನೆ ವೇಳೆ ಸಂಚಾರ ನಿಯಮ ಪಾಲಿಸುವಂತೆ ಭಿತ್ತಿ ಫಲಕ ಪ್ರದರ್ಶಿಸಿ ರಸ್ತೆ ಸುರಕ್ಷತೆ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು.
    ಸಾರಿಗೆ ಇಲಾಖೆ ಆಯುಕ್ತ ಸಿದ್ದರಾಮಪ್ಪ, ಸಂಚಾರ ವಿಭಾಗದ ಜಂಟಿ ಪೊಲೀಸ್‌ ಆಯುಕ್ತ ಎಂ.ಎನ್‌.ಅನುಚೇತ್‌ ಸೇರಿದಂತೆ ಹಲವು ಅಧಿಕಾರಿಗಳಿದ್ದರು.

    Verbattle
    Verbattle
    Verbattle
    m ಕಾನೂನು ವಿದ್ಯಾರ್ಥಿ ಶಾಲೆ
    Share. Facebook Twitter Pinterest LinkedIn Tumblr Email WhatsApp
    Previous Articleಅಂಥವನಿಂದ ದುಡ್ಡು ತಗೋಳ್ಳೊದಕ್ಕಿಂತ ಸಾಯೋದು‌ ವಾಸಿ!
    Next Article Che Guevara ಮಗಳು ಮೊಮ್ಮಗಳು ಬೆಂಗಳೂರಿಗೆ ಬರುತ್ತಿದ್ದಾರೆ
    vartha chakra
    • Website

    Related Posts

    ​ಬಿ ಖಾತಾ ಸೈಟ್ ಮಾಲೀಕರಿಗೆ ಬಂಪರ್ ಕೊಡುಗೆ!

    ಫೆಬ್ರವರಿ 9, 2026

    ಬೆಂಗಳೂರಿನಲ್ಲಿ ಸಖಿ ಆಟೋ

    ಫೆಬ್ರವರಿ 9, 2026

    ಜೈಲಿನಲ್ಲಿ ಮೃತಪಟ್ಟ ಶಂಕಿತ ಉಗ್ರ

    ಫೆಬ್ರವರಿ 8, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    ನಮ್ಮ ಮೆಟ್ರೋ ದರ ಏರಿಕೆ ತಡೆಹಿಡಿದಿದ್ದು ರಾಜ್ಯ ಸರ್ಕಾರ; ಕೇಂದ್ರದ ಪತ್ರಕ್ಕೆ ಬೆಲೆಯಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

    ರಷ್ಯಾ ಅಧ್ಯಕ್ಷ ಪುತಿನ್ ಸುತ್ತ ಲೈಂಗಿಕ ಬ್ಲ್ಯಾಕ್‌ಮೇಲ್ ತಂತ್ರದ ಹುತ್ತ: ಏನಿದು ಹನಿ ಟ್ರ್ಯಾಪ್?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Glennhof ರಲ್ಲಿ ಹಬ್ಬಕ್ಕೆ ಬೋನಸ್ ನೀಡದ ಮಾಲೀಕನ ಕೊಂದ ನೌಕರರು
    • LinwoodGah ರಲ್ಲಿ May 3, 2023 51st Year Free Mass Marriage at Sri Kshetra Dharmasthala
    • Meronmub ರಲ್ಲಿ ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    Latest Kannada News

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    ಫೆಬ್ರವರಿ 10, 2026

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    ಫೆಬ್ರವರಿ 10, 2026

    ನಮ್ಮ ಮೆಟ್ರೋ ದರ ಏರಿಕೆ ತಡೆಹಿಡಿದಿದ್ದು ರಾಜ್ಯ ಸರ್ಕಾರ; ಕೇಂದ್ರದ ಪತ್ರಕ್ಕೆ ಬೆಲೆಯಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 10, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.