Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕರಾವಳಿ – ಮಲೆನಾಡಿಗೆ Amit Shah Big task
    ಚುನಾವಣೆ 2024

    ಕರಾವಳಿ – ಮಲೆನಾಡಿಗೆ Amit Shah Big task

    vartha chakraBy vartha chakraಫೆಬ್ರವರಿ 11, 2023ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಮಂಗಳೂರು,

    BJP ಯ ಭದ್ರಕೋಟೆಯಾಗಿರುವ ರಾಜ್ಯದ ಕರಾವಳಿ ಜಿಲ್ಲೆಗಳಿಂದ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಪ್ರತಿಪಕ್ಷದ ಒಬ್ಬ ಸದಸ್ಯರೂ ಆಯ್ಕೆಯಾಗದಂತೆ ನೋಡಿಕೊಳ್ಳಬೇಕು ಎಂದು ಗುರಿ ನೀಡಿರುವ ಪಕ್ಷದ ಹಿರಿಯ ನಾಯಕ Amit Shah, ಪ್ರಧಾನಿ ಸಲಹೆಯಂತೆ ಅಲ್ಪಸಂಖ್ಯಾತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವಂತೆ ಸಲಹೆ ಮಾಡಿದ್ದಾರೆ.

    BJP ಯ ಹೆಬ್ಬಾಗಿಲು ಮಂಗಳೂರಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಆರು ಜಿಲ್ಲೆಗಳ ಕೋರ್‌ ಕಮಿಟಿ ಸಭೆ ನಡೆಸಿದರು. ಪ್ರಬಲ ಹಿಂದುತ್ವ ಪ್ರತಿಪಾದನೆಯ ಜೊತೆಗೆ ಅಲ್ಪಸಂಖ್ಯಾತ ಸಮುದಾಯಗಳಲ್ಲಿ ಅಭದ್ರತೆಯ ವಾತಾವರಣ ದೂರ ಮಾಡಬೇಕು. ದೇಶಭಕ್ತಿಯ ಹೆಸರಲ್ಲಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕರಾವಳಿ ಜಿಲ್ಲೆಗಳಿಂದ Congress ಮೂಲೋತ್ಪಾಟನೆ ಮಾಡುವಂತೆ ಸೂಚಿಸಿದರೆನ್ನಲಾಗಿದೆ.

    ಮುಖಂಡರು ಹಾಗೂ ವಿವಿಧ ಮೋರ್ಚಾಗಳ ಮುಖ್ಯಸ್ಥರ ಜೊತೆ ಸರಣಿ ಸಭೆ ನಡೆಸಿದ ಅವರು, ಕರಾವಳಿಯಲ್ಲಿ ಪಕ್ಷಕ್ಕೆ ಹಿನ್ನಡೆಯಾಗದಂತೆ ಭಿನ್ನಮತ ಮರೆತು ಒಗ್ಗಟ್ಟಿನಿಂದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಬೇಕೆಂದು ಕಟ್ಟುನಿಟ್ಟಿನ ಸೂಚನೆ ನೀಡಿದರು. ಮಂಗಳೂರು (Mangalore), ಉಡುಪಿ(Udupi), ಉತ್ತರಕನ್ನಡ(Uttara Kannada), ಶಿವಮೊಗ್ಗ(Shivamogga), ಚಿಕ್ಕಮಗಳೂರು(Chikkamagaluru) ಹಾಗೂ ಮಡಿಕೇರಿ(Madikeri) ಜಿಲ್ಲೆಗಳ ಸಂಘಟನೆಯ ಮುಖ್ಯಸ್ಥರು, ಪದಾಧಿಕಾರಿಗಳು, ವಿವಿಧ ಮೋರ್ಚಾಗಳ ಜೊತೆ ಸುದೀರ್ಘ ಸಭೆ ನಡೆಸಿದ ಅಮಿತ್ ಷಾ ಅವರು ಈ ಜಿಲ್ಲೆಗಳಲ್ಲಿ ಯಾವುದೇ ಕಾರಣಕ್ಕೂ ಪಕ್ಷಕ್ಕೆ ಹಿನ್ನಡೆಯಾಗಬಾರದೆಂದು ತಾಕೀತು ಮಾಡಿದರು.

    ಇತ್ತೀಚಿನ ಕೆಲವು ಕಹಿ ಘಟನೆಗಳಿಂದಾಗಿ ಕರಾವಳಿಯಲ್ಲಿ ಬಿಜೆಪಿಗೆ ಕಳೆದ ಬಾರಿಯ ಫಲಿತಾಂಶಕ್ಕಿಂತ ತುಸು ಹಿನ್ನಡೆಯಾಗಲಿದೆ ಎಂದು ಆಂತರಿಕ ಸಮೀಕ್ಷೆಗಳು ಹೇಳಿದ್ದವು. ಹೀಗಾಗಿ ಎಚ್ಚೆತ್ತುಕೊಂಡಿರುವ ಪಕ್ಷದ ವರಿಷ್ಠರು ಚುನಾವಣೆಗೆ ಅಗತ್ಯವಿರುವ ಸಿದ್ಧತೆಗಳನ್ನು ಕೈಗೊಂಡಿದ್ದಾರೆ.

    #kannada #politicians #politics #Udupi Amit Shah BJP Chikkamagaluru Congress Elections 2023 Karnataka m madikeri mangalore mi shiva shivamogga state governement UPI uttara kannada ಉಡುಪಿ ಚುನಾವಣೆ
    Share. Facebook Twitter Pinterest LinkedIn Tumblr Email WhatsApp
    Previous Articleವಿಧಾನಸಭೆ ಚುನಾವಣೆ ಸಿದ್ಧತೆಗೆ‌ ಆಯೋಗದ ಮೆಚ್ಚುಗೆ – ಅಕ್ರಮ ತಡೆಗೆ ಸೂಚನೆ
    Next Article Radhantha pressed the emergency button
    vartha chakra
    • Website

    Related Posts

    ಎಚ್ಚೆತ್ತ ರಾಜ್ಯ ಸರ್ಕಾರ

    ಡಿಸೆಂಬರ್ 12, 2025

    ಜಗತ್ತಿನ ಅತಿ ದೊಡ್ಡ ರಾಷ್ಟ್ರಧ್ವಜ ಅನಾವರಣ

    ಡಿಸೆಂಬರ್ 9, 2025

    KSCA ಗೆ ವೆಂಕಟೇಶ್ ಪ್ರಸಾದ್ ಸಾರಥಿ

    ಡಿಸೆಂಬರ್ 8, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಎಚ್ಚೆತ್ತ ರಾಜ್ಯ ಸರ್ಕಾರ

    ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?

    ಚನ್ನರಾಜ ಹಟ್ಟಿಹೊಳಿ ಹಾಕಿದ ಪೋಸ್ಟ್ ನಲ್ಲಿ ಏನಿದೆ ಗೊತ್ತಾ?

    ಜಗತ್ತಿನ ಅತಿ ದೊಡ್ಡ ರಾಷ್ಟ್ರಧ್ವಜ ಅನಾವರಣ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • fen daison_cjOt ರಲ್ಲಿ ಬೆಂಗಳೂರಿಗೆ ಎರಡು ಸಾವಿರ ಹೆಚ್ಚುವರಿ ಪೊಲೀಸ್
    • RalphNax ರಲ್ಲಿ ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    • Williamgeate ರಲ್ಲಿ ಅಗಲಿದ “ಕಲಾ ತಪಸ್ವಿ”
    Latest Kannada News

    ಎಚ್ಚೆತ್ತ ರಾಜ್ಯ ಸರ್ಕಾರ

    ಡಿಸೆಂಬರ್ 12, 2025

    ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?

    ಡಿಸೆಂಬರ್ 12, 2025

    ಚನ್ನರಾಜ ಹಟ್ಟಿಹೊಳಿ ಹಾಕಿದ ಪೋಸ್ಟ್ ನಲ್ಲಿ ಏನಿದೆ ಗೊತ್ತಾ?

    ಡಿಸೆಂಬರ್ 12, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಿಎಂ ವಿಮಾನಯಾನ ಬಳಕೆಗೆ 47 ಕೋಟಿ ಖರ್ಚು #varthachakra #siddaramaiah #helicopter #airtravel #costs #news
    Subscribe