ಬೆಂಗಳೂರು,ಫೆ.11- ಲೋಕಸಭಾ ಚುನಾವಣೆಯಲ್ಲಿ ಈ ಬಾರಿ ಕರ್ನಾಟಕದಿಂದ ಅತ್ಯಧಿಕ ಸಂಖ್ಯೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಆಯ್ಕೆಯಾಗುವಂತೆ ಕೆಲಸ ಮಾಡಬೇಕು ಎಂದು ರಾಜ್ಯ ನಾಯಕರಿಗೆ ಗುರಿ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ,ನಿಮ್ಮ
ಬಾಯಿ ಚಪಲಕ್ಕೆ ಮಾತನಾಡಿ ವಿವಾದ ಸೃಷ್ಟಿಸಬಾರದು ಎಂದು ಕಿವಿಮಾತು ಹೇಳಿದ್ದಾರೆ.
ಅಭ್ಯರ್ಥಿಗಳ ಆಯ್ಕೆ ಹಾಗೂ ಜೆಡಿಎಸ್‍ಗೆ ಎಷ್ಟು ಸ್ಥಾನಗಳನ್ನು ನೀಡಬೇಕು ಎಂಬುದನ್ನು ವರಿಷ್ಠರು ತೀರ್ಮಾನಿಸುತ್ತಾರೆ. ಈ ಬಗ್ಗೆ ಸ್ಥಳೀಯ ನಾಯಕರು ಅನಗತ್ಯವಾಗಿ ಗೊಂದಲ ಸೃಷ್ಟಿಸಬಾರದು ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ಕಟ್ಟುನಿಟ್ಟಿನ ಸೂಚನೆ ಕೊಟ್ಟಿದ್ದಾರೆ.
ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆಯಲ್ಲಿ ಮಾತನಾಡಿದ ಅವರು ಕರ್ನಾಟಕದ ಮತದಾರರು ಅತ್ಯಂತ ಸೂಕ್ಷ್ಮ ಹಾಗೂ ಪ್ರಜ್ಞಾವಂತರು. ಮಾತನಾಡುವ ಸಮಯದಲ್ಲಿ ಸಾಕಷ್ಟು ಎಚ್ಚರಿಕೆವಹಿಸಬೇಕುವಯಕ್ತಿಕ ಟೀಕೆ ಮಾಡಿ ಪಕ್ಷದ ಗೆಲುವು ಹಾಳು ಮಾಡಬೇಡಿ ಎಂದು ಸೂಚಿಸದರು.
ಅಭ್ಯರ್ಥಿಗಳ ಆಯ್ಕೆ ಹಾಗೂ ಜೆಡಿಎಸ್‍ಗೆ ಎಷ್ಟು ಸ್ಥಾನಗಳನ್ನು ನೀಡಬೇಕು ಎಂಬುದನ್ನು ವರಿಷ್ಠರು ತೀರ್ಮಾನಿಸುತ್ತಾರೆ. ಈ ಬಗ್ಗೆ ಸ್ಥಳೀಯ ನಾಯಕರು ಅನಗತ್ಯವಾಗಿ ಗೊಂದಲ ಸೃಷ್ಟಿಸಬಾರದು ಇದನ್ನು ಪಕ್ಷ ತೀರ್ಮಾನಿಸುತ್ತದೆ. ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟಗಳನ್ನು ನಡೆಸಿ ಪಕ್ಷವನ್ನು ಬಲಪಡಿಸುವುದು ಹಾಗೂ ಸಂಘಟನೆಗೆ ಹೆಚ್ಚು ಒತ್ತು ಕೊಡಿ ಎಂದು ರಾಜ್ಯ ಬಿಜೆಪಿ ನಾಯಕರಿಗೆ ಕಿವಿಮಾತು ಹೇಳಿದರನ್ನಲಾಗಿದೆ.
ಹಾಲಿ ಸಂಸದರು ಸೇರಿದಂತೆ ಆಕಾಂಕ್ಷಿಗಳು ಕೂಡ ನಾನೇ ಅಭ್ಯರ್ಥಿ ಎಂದು ಕ್ಷೇತ್ರದಲ್ಲಿ ಹೇಳಿಕೊಂಡು ಪ್ರಚಾರ ನಡೆಸುವ ಅಗತ್ಯವಿಲ್ಲ.
ಪ್ರತಿಯೊಂದು ಕ್ಷೇತ್ರಗಳ ಬಗ್ಗೆ ನಾವು ಆಂತರಿಕ ಸಮೀಕ್ಷೆ ನಡೆಸಿ ಕಾರ್ಯಕರ್ತರ ಅಭಿಪ್ರಾಯ ಪಡೆದು ನಂತರ ರಾಜ್ಯಘಟಕ ಶಿಫಾರಸ್ಸು ಮಾಡುವ ಅಭ್ಯರ್ಥಿಗಳ ಪಟ್ಟಿಯನ್ನು ಪರಿಶೀಲಿಸಿ ಅಂತಿಮಗೊಳಿಸುತ್ತೇವೆ. ಇದರ ಬಗ್ಗೆ ಯಾರೂ ಕೂಡ ತಲೆಕೆಡಿಸಿಕೊಳ್ಳಬಾರದೆಂದು ಹೇಳಿದರೆಂದು ಮೂಲಗಳು ತಿಳಿಸಿವೆ.
ನಮಗೆ ರಾಜ್ಯದ ಎಲ್ಲಾ ಕ್ಷೇತ್ರಗಳ ಬಗ್ಗೆಯೂ ನಮ್ಮದೇ ಆದ ಆಂತರಿಕ ಮಾಹಿತಿಯಿದೆ. ಯಾರಿಗೆ ಯಾವ ಕ್ಷೇತ್ರದಲ್ಲಿ ಟಿಕೆಟ್ ನೀಡಿದರೆ ಗೆಲ್ಲಬಹುದೆಂದು ಮಾಹಿತಿಯನ್ನು ಇಟ್ಟುಕೊಂಡಿದ್ದೇವೆ. ಅನಗತ್ಯವಾಗಿ ಗೊಂದಲ ಸೃಷ್ಟಿಸಬಾರದು. ನಮಗೆ ರಾಜ್ಯದ ಎಲ್ಲಾ ಕ್ಷೇತ್ರಗಳ ಬಗ್ಗೆಯೂ ನಮ್ಮದೇ ಆದ ಆಂತರಿಕ ಮಾಹಿತಿಯಿದೆ. ಯಾರಿಗೆ ಯಾವ ಕ್ಷೇತ್ರದಲ್ಲಿ ಟಿಕೆಟ್ ನೀಡಿದರೆ ಗೆಲ್ಲಬಹುದೆಂದು ಮಾಹಿತಿಯನ್ನು ಇಟ್ಟುಕೊಂಡಿದ್ದೇವೆ. ಅನಗತ್ಯವಾಗಿ ಗೊಂದಲ ಸೃಷ್ಟಿಸಬಾರದು ಕಿವಿಮಾತು ಹೇಳಿದರೆನ್ನಲಾಗಿದೆ.