ತಿರುವನಂತಪುರಂ.
ಶಬರಿಮಲೈ ಸ್ವಾಮಿ ಅಯ್ಯಪ್ಪ ಭಕ್ತರ ಆರಾಧ್ಯ ದೈವ ಕೇಳಿದ್ದನ್ನು ಕರುಣಿಸುವ ಕರುಣಾಳು, ದುಷ್ಟ ಶಕ್ತಿಗಳ ನಿವಾರಕ ಎಂಬುದಾಗಿ ನಂಬಿರುವ ಈತನ ಆರಾಧನೆ ಎಲ್ಲರಿಗೂ ಅತ್ಯಂತ ಪ್ರಿಯ.
ಜಾತಿ, ಮತ ,ವಯಸ್ಸಿನ ಅಂತರವಿಲ್ಲದೆ ಎಲ್ಲರೂ ಆರಾಧಿಸುವ ಅಯ್ಯಪ್ಪನ ದರ್ಶನಕ್ಕಾಗಿ ಡಿಸೆಂಬರ್, ಜನವರಿಯಲ್ಲಿ ಲಕ್ಷಾಂತರ ಜನ ಗಿರಿಗೆ ಲಗ್ಗೆಯಿಡುತ್ತಾರೆ. ಮಕರ ಜ್ಯೋತಿಯ ದರ್ಶನ ಪಡೆದು ವಿನೀತರಾಗುತ್ತಾರೆ.
ಶಬರಿಮಲೆ ಮಂಡಲಂ-ಮಕರವಿಳಕ್ಕು ಸಮಯದಲ್ಲಿ ಲಕ್ಷಾಂತರ ಜನ ಗಿರಿಗೆ ಲಗ್ಗೆಯಿಡುವ ಪರಿಣಾಮ ಹಲವಾರು ರೀತಿಯ ಸಮಸ್ಯೆಗಳು ಉಂಟಾಗುತ್ತಿವೆ ಇದನ್ನು ಗಂಭೀರವಾಗಿ ಪರಿಗಣಿಸಿರುವ ಕೇರಳ ಸರ್ಕಾರ ಈ ವರ್ಷ ಹೊಸ ವ್ಯವಸ್ಥೆ ಮಾಡಲು ಮುಂದಾಗಿದೆ.
ಕಳೆದ ವರ್ಷ ಲಕ್ಷಾಂತರ ಭಕ್ತರು ದರ್ಶನಕ್ಕೆ ಆಗಮಿಸಿದ್ದರು. ಆದ್ದರಿಂದ ನಿರ್ವಹಿಸಲು ಸೂಕ್ತ ವ್ಯವಸ್ಥೆ ಮಾಡಿಕೊಳ್ಳದ ಕಾರಣ ಭಾರಿ ಅವ್ಯವಸ್ಥೆ ಉಂಟಾಗಿತ್ತು. ಭಕ್ತರು ದಿನಗಟ್ಟಲೆ ಕಾಯುವ ಪರಿಸ್ಥಿತಿ ನಿರ್ಮಾಣವಾಗಿತ್ತು, ಸರ್ಕಾರದ ವಿರುದ್ಧ ಆಕ್ರೋಶಗಳು ಭುಗಿಲೆದ್ದಿದ್ದವು.
ಈ ಹಿನ್ನೆಲೆಯಲ್ಲಿ ಸರ್ಕಾರ ದೇವಸಂ ಮಂಡಳಿ ಜೊತೆಗೆ ಸೇರಿಕೊಂಡು ದರ್ಶನಕ್ಕೆ ಆನ್ ಲೈನ್ ಮೂಲಕ ವ್ಯವಸ್ಥೆ ಮಾಡಲು ಮುಂದಾಗಿದೆ.
ಆನ್‌ಲೈನ್‌ನಲ್ಲಿ ಟಿಕೆಟ್ ಬುಕ್ ಮಾಡಿದವರಿಗೆ ಮಾತ್ರ ಅವಕಾಶ ಕಲ್ಪಿಸಲು ಸರ್ಕಾರ ನಿರ್ಧರಿಸಿದೆ.
ದಿನಕ್ಕೆ ಗರಿಷ್ಠ 80,000 ಭಕ್ತರಿಗೆ ಅವಕಾಶ ಕಲ್ಪಿಸುವ ಸೌಲಭ್ಯ ಕಲ್ಪಿಸಲು ತೀರ್ಮಾನಿಸಿದೆ. ಯಾತ್ರಿಕರಿಗೆ ಬುಕಿಂಗ್ ಸಮಯದಲ್ಲಿ ಪ್ರಯಾಣದ ಮಾರ್ಗವನ್ನು ಆಯ್ಕೆ ಮಾಡುವ ಅವಕಾಶವನ್ನು ಒದಗಿಸಲಾಗುತ್ತದೆ. ಹೀಗಾಗಿ, ಯಾತ್ರಿಕರು ಕಡಿಮೆ ದಟ್ಟಣೆ ಇರುವ ಮಾರ್ಗವನ್ನು ಆಯ್ಕೆ ಮಾಡಬಹುದು
ಸಾಂಪ್ರದಾಯಿಕ ಅರಣ್ಯ ಮಾರ್ಗದಲ್ಲಿ ಭಕ್ತರಿಗೆ ಅಗತ್ಯ ಸೌಲಭ್ಯ ಕಲ್ಪಿಸಲಾಗುವುದು. ಜನದಟ್ಟಣೆ ಇರುವ ಸಮಯದಲ್ಲಿ ವಾಹನಗಳನ್ನು ನಿಯಂತ್ರಿಸಬೇಕಾದರೆ ಕೇಂದ್ರಗಳನ್ನು ಗುರುತಿಸಿ ಅಗತ್ಯ ಮೂಲಸೌಕರ್ಯ ಕಲ್ಪಿಸಲಾಗುವುದು ಆನ್ ಲೈನ್ ಮೂಲಕ ನೊಂದಾಯಿಸಿಕೊಂಡರೆ ಈ ಎಲ್ಲಾ ವ್ಯವಸ್ಥೆಗಳನ್ನು ಸುಲಭವಾಗಿ ಮಾಡಬಹುದು ಎಂದು ಹೇಳಿದೆ.