ದ್ರಾಕ್ಷಿ, ಕಬ್ಬು, ದಾಳಿಂಬೆಯಂತಹ ತೋಟಗಾರಿಕೆ ಬೆಳೆಗಳು, ಸಹಕಾರಿ ರಾಜಕಾರಣದ ಮೂಲಕ ಗಮನ ಸೆಳೆಯುವ ಬಾಗಲಕೋಟೆ ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳನ್ನು ನೀಡಿದ ಮತ್ತು ನಾಲ್ವರು ಮುಖ್ಯಮಂತ್ರಿಗಳಿಗೆ ರಾಜಕೀಯ ನೆಲೆ ಕಲ್ಪಿಸಿದ ಹೆಗ್ಗಳಿಕೆ ಪಡೆದ ಕ್ಷೇತ್ರವಾಗಿದೆ.
ಘಟಾನುಘಟಿ ರಾಜಕಾರಣಿಗಳಿಗೆ ರಾಜಕೀಯ ನೆಲೆಯನ್ನೂ ಕಲ್ಪಿಸಿದ ರಾಜಕೀಯ ಕರ್ಮಭೂಮಿಯಾದ ಈ ಕ್ಷೇತ್ರ ಕಾಂಗ್ರೆಸ್‌ನ ಭದ್ರಕೋಟೆ ಎನಿಸಿತ್ತು.ಇದರ ನಡುವೆಯೂ ಜನತಾದಳ, ಬಿಜೆಪಿ ಅಭ್ಯರ್ಥಿಗಳು ಆಯ್ಕೆಯಾಗುವ ಮೂಲಕ ಗಮನ ಸೆಳೆದರು.ಆದರೆ,ಇಂತಹ ಕ್ಷೇತ್ರದಲ್ಲಿ ಪ್ರಬಲ ನಾಯಕತ್ವ ಹೊರಹೊಮ್ಮಲಿಲ್ಲ ಎನ್ನುವುದು ಕಹಿ ಸತ್ಯ.
1952ರಲ್ಲಿ ಮೊದಲ ಬಾರಿಗೆ ನಡೆದ ಚುನಾವಣೆಯಲ್ಲಿ ಈಗಿನ ಬಾಗಲಕೋಟೆ ಕ್ಷೇತ್ರವನ್ನು ವಿಜಯಪುರ ದಕ್ಷಿಣ ಕ್ಷೇತ್ರ ಎಂದು ಕರೆಯಲಾಗುತ್ತಿತ್ತು. ಈಗಿನ ವಿಜಯಪುರ ಕ್ಷೇತ್ರವನ್ನು ವಿಜಯಪುರ ಉತ್ತರ ಎಂದು ಕರೆಯಲಾಗುತ್ತಿತ್ತು. ವಿಜಯಪುರ ದಕ್ಷಿಣ ಕ್ಷೇತ್ರದಲ್ಲಿ ವ್ಯಾಪ್ತಿಯಲ್ಲಿ ಬಾಗಲಕೋಟೆ, ಬೀಳಗಿ, ಮುಧೋಳ, ಜಮಖಂಡಿ, ಬಾದಾಮಿ, ಹುನಗುಂದ, ಗುಳೇದಗುಡ್ಡ ಜೊತೆಗೆ ಅಂದಿನ ಧಾರವಾಡ ಜಿಲ್ಲೆಯ ರೋಣ ವಿಧಾನಸಭಾ ಕ್ಷೇತ್ರಗಳಿದ್ದವು.
ಹಲವು ಚುನಾವಣೆಗಳ ನಂತರ ಬಾಗಲಕೋಟೆ ಲೋಕಸಭಾ ಕ್ಷೇತ್ರ ರಚನೆಯಾಯಿತು. ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳ ಜೊತೆಗೆ ಗದಗ ಜಿಲ್ಲೆಯ ನರಗುಂದ ವಿಧಾನಸಭಾ ಕ್ಷೇತ್ರ ಸೇರಿಕೊಂಡಿದೆ.
ಇಲ್ಲಿಯವರೆಗೆ ನಡೆದ ಹದಿನೇಳು ಲೋಕಸಭಾ ಚುನಾವಣೆಗಳಲ್ಲಿ 11 ಬಾರಿ ಕಾಂಗ್ರೆಸ್ ಗೆಲುವು ಸಾಧಿಸಿದ್ದರೆ, ಒಂದು ಬಾರಿ ಜನತಾ ದಳ, ಒಂದು ಬಾರಿ ಲೋಕಶಕ್ತಿ, ನಾಲ್ಕು ಬಾರಿ ಬಿಜೆಪಿ ಜಯ ಸಾಧಿಸಿದೆ. ಮೊದಲ ಹತ್ತು ಚುನಾವಣೆಗಳಲ್ಲಿ ಕಾಂಗ್ರೆಸ್ ಸೋಲನ್ನೇ ಕಂಡಿರಲಿಲ್ಲ. 1996ರಲ್ಲಿ ಮೊದಲ ಬಾರಿಗೆ ಜನತಾ ದಳ, ಕಾಂಗ್ರೆಸ್ ಅನ್ನು ಸೋಲಿಸಿತ್ತು. 1998ರಲ್ಲಿ ಲೋಕಶಕ್ತಿ ಜಯಸಿತ್ತು. 1999ರಲ್ಲಿ ಕಾಂಗ್ರೆಸ್ ಕ್ಷೇತ್ರವನ್ನು ಮತ್ತೆ ತೆಕ್ಕೆಗೆ ತೆಗೆದುಕೊಂಡಿತು. ನಂತರದ ನಾಲ್ಕು ಚುನಾವಣೆಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ ಸ್ವತಂತ್ತವಾಗಿ ಕ್ಷೇತ್ರ ಅಸ್ತಿತ್ವಕ್ಕೆ ಬಂದ 1967ರಿಂದ 1996ವರೆಗಿನ ಎಲ್ಲ ಚುನಾವಣೆಗಳಲ್ಲಿ ಇದು ಕಾಂಗ್ರೆಸ್ ನ ಭದ್ರಕೋಟೆ ಎನ್ನಿಸಿತ್ತು.ಮಾಜಿ ಮುಖ್ಯಮಂತ್ರಿಗಳಾದ ವಿರೇಂದ್ರ ಪಾಟೀಲ್, ರಾಮಕೃಷ್ಣ ಹೆಗಡೆ,ಸೇರಿದಂತೆ ಹಲವರು ಸ್ಪರ್ಧೆ ಮಾಡಿದ್ದರು.
ರಾಜ್ಯದಲ್ಲಿ ಜನಪ್ರಿಯತೆಯ ಉತ್ತುಂಗದಲ್ಲಿದ್ದ ರಾಮಕೃಷ್ಣ ಹೆಗಡೆ ಅವರನ್ನು ಚಿಕ್ಕಪಡಸಲಗಿ ಬ್ಯಾರೇಜ್ ರೂವಾರಿ ಸಿದ್ದೂ ನ್ಯಾಮಗೌಡ ಸೋಲಿಸುವ ಮೂಲಕ ದೇಶದ ಗಮನ ಸೆಳೆಯುವಂತಾಯಿತು.
ಇಂತಹ ಬಾಗಲಕೋಟೆ ಕ್ಷೇತ್ರ ನಂತರದಲ್ಲಿ ರಾಮಕೃಷ್ಣ ಹೆಗಡೆ ಅವರ ಭದ್ರನೆಲೆಯಾಗಿ ಪರಿಣಮಿಸಿತು. ಜನತಾದಳದಿಂದ ಹೊರಬಿದ್ದ ಅವರು ಸ್ಥಾಪಿಸಿದ ಲೋಕಶಕ್ತಿ ಎಂಬ ಪ್ರಾದೇಶಿಕ ಪಕ್ಷದ ಅಭ್ಯರ್ಥಿಯನ್ನು ಸಂಸತ್ತಿಗೆ ಆಯ್ಕೆ ಮಾಡುವ ಮೂಲಕ ಗಮನ ಸೆಳೆಯಿತು. ಇದಾದ ನಂತರ ಮತ್ತೆ ಈ ಕ್ಷೇತ್ರ ಕಾಂಗ್ರೆಸ್ ಭದ್ರಕೋಟೆಯಾಯಿತು.
ಆದರೆ,ಕ್ಷೇತ್ರ ಪುನರ್ ವಿಂಗಡಣೆಯಾದ ಬಳಿಕ ಕ್ಷೇತ್ರ ಕಾಂಗ್ರೆಸ್ ಕೈಜಾರಿತು.ಕಳೆದ ನಾಲ್ಕು ಚುನಾವಣೆಯಿಂದ ಇದು ಬಿಜೆಪಿ ಭದ್ರಕೋಟೆಯಾಗಿ ಬದಲಾಗಿದೆ.
ಮೊದಲ ಬಾರಿಗೆ ಲೋಕಸಭಾ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ನಿರಾಕರಿಸಿ ಅಂತಿಮವಾಗಿ ಒತ್ತಡಕ್ಕೆ ಮಣಿದು ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದ ಪಿ ಸಿ ಗದ್ದಿಗೌಡರ್ ಅವರು ಸತತ ನಾಲ್ಕು ಅವಧಿಗೆ ಬಿಜೆಪಿಯಿಂದ ಸಂಸದರಾಗಿ ಆಯ್ಕೆಯಾಗಿದ್ದಾರೆ.
ಗದ್ದಿಗೌಡರ್ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರ ಆಪ್ತ. ಹೆಗಡೆ ನೇತೃತ್ವದ ಲೋಕಶಕ್ತಿ ಅಸ್ತಿತ್ವ ಕಳೆದುಕೊಂಡಾಗ ಆ ಪಕ್ಷ ತೊರೆದು ಬಿಜೆಪಿ ಸೇರಿದ್ದರು.
ಜನತಾ ಪರಿವಾರದಿಂದ ಬಿಜೆಪಿ ಸೇರ್ಪಡೆಯಾಗಿದ್ದ ಪಿ.ಸಿ.ಗದ್ದಿಗೌಡರ 2004ರಲ್ಲಿ ಮೊದಲ ಬಾರಿಗೆ ಲೋಕಸಭಾ ಚುನಾವಣೆ ಕಣಕ್ಕಿಳಿದರು. ಅವರ ವಿರುದ್ಧ ಕಾಂಗ್ರೆಸ್‌ನಿಂದ ಸಂಸದರಾಗಿದ್ದ ಆರ್.ಎಸ್. ಪಾಟೀಲ ಸ್ಪರ್ಧಿಸಿದ್ದರು. ಅವರನ್ನು ಸೋಲಿಸುವ ಮೂಲಕ ಮೊದಲ ಬಾರಿಗೆ ಕಮಲ ಅರಳಿಸಿದ್ದರು. ಹೆಗಡೆ ಅವರ ಆಪ್ತ ಎಂದೇ ಮೊದಲ ಚುನಾವಣೆ ಗೆದ್ದ ಇವರು ನಂತರ ಜಾತಿ ಲೆಕ್ಕಾಚಾರ ಹಾಗೂ ಬಿಜೆಪಿ ನಾಮಬಲದೊಂದಿಗೆ ಸತತವಾಗಿ ಆಯ್ಕೆಯಾಗುತ್ತಿದ್ದಾರೆ.
ಕಳೆದ ಎರಡು ದಶಕಗಳ ಅವಧಿಯಲ್ಲಿ ಜಾತಿ ರಾಜಕಾರಣ ಕೂಡ ಸಾಕಷ್ಟು ಮುನ್ನೆಲೆಗೆ ಬಂದಿದೆ. ಹಿಂದೆಲ್ಲ ಒಂದೇ ಸಮುದಾಯದವರಿಗೆ ಸೀಮಿತವಾಗಿರುತ್ತಿದ್ದ ಬಾಗಲಕೋಟೆ ಲೋಕಸಭಾ ಕ್ಷೇತ್ರದಲ್ಲಿ ಪಕ್ಷ ರಾಜಕಾರಣಕ್ಕಿಂತ ಜಾತಿ ರಾಜಕಾರಣವೇ ಅನೇಕ ಸಲ ಮೇಲುಗೈ ಸಾಧಿಸುತ್ತಲೇ ಬಂದಿದೆ. ಪಕ್ಷ ನಿಷ್ಠೆಗಿಂತ ಜಾತಿ ನಿಷ್ಠೆಗೆ ಇಲ್ಲಿನ ಮತದಾರರು ಮಣೆ ಹಾಕುತ್ತಿದ್ದಾರೆ.
ಸತತ ನಾಲ್ಕು ಚುನಾವಣೆಯಲ್ಲಿ ಬಾಗಲಕೋಟೆ ಲೋಕಸಭಾ ಕ್ಷೇತ್ರದಲ್ಲಿ ಸೋಲನುಭವಿಸಿರುವ ಕಾಂಗ್ರೆಸ್ ಪಕ್ಷ ಶತಾಯು–ಗತಾಯು ಮತ್ತೆ ತನ್ನ ವಶಕ್ಕೆ ಪಡೆಯಲು ಯತ್ನಿಸುತ್ತಿದೆ. ಈ ನಿಟ್ಟಿನಲ್ಲಿಯೇ ಪ್ರತಿ ಬಾರಿಯೂ ಬೇರೆಯವರಿಗೆ ಟಿಕೆಟ್ ನೀಡಿದೆ. ಈ ಬಾರಿಯೂ ಮತ್ತೆ ಅಭ್ಯರ್ಥಿ ಬದಲಿಸಿದೆ.
2014ರಲ್ಲಿ ಚುನಾವಣೆ ನಡೆದಾಗ ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಸ್ತಿತ್ವದಲ್ಲಿತ್ತು. ಜಿಲ್ಲೆಯಲ್ಲಿ ಐವರು ಕಾಂಗ್ರೆಸ್ ಶಾಸಕರಿದ್ದರು. ಗೆದ್ದೇ ಗೆಲ್ಲುತ್ತೇವೆ ಎಂಬ ಹುಮ್ಮಸ್ಸಿನಲ್ಲಿ 1998ರ ಚುನಾವಣೆಯಲ್ಲಿ ಲೋಕಶಕ್ತಿಯಿಂದ ಸಂಸದರಾಗಿ ಆಯ್ಕೆಯಾಗಿದ್ದ ಅಜಯಕುಮಾರ ಸರನಾಯಕ ಅವರನ್ನು ಕಾಂಗ್ರೆಸ್‌ಗೆ ಕರೆ ತಂದು ಕಣಿಕ್ಕಿಳಿಸಿದರೂ ಗೆಲುವು ದಕ್ಕಲಿಲ್ಲ.
2019ರ ಚುನಾವಣೆಯಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ವೀಣಾ ಕಾಶಪ್ಪನವರ ಅವರನ್ನು ಕಣಕ್ಕಿಳಿಸಿದರೂ ಅದು ನಿರೀಕ್ಷಿತ ಫಲಿತಾಂಶ ನೀಡಲಿಲ್ಲ. ಅಂದು ಪ್ರಧಾನಿ ನರೇಂದ್ರ ಮೋದಿ ಅವರ ಅಲೆಯಲ್ಲಿ ತೇಲಿ ಹೋದ ಬಿಜೆಪಿ ಅಭ್ಯರ್ಥಿ ಗದ್ದಿಗೌಡರ ಸತತ ನಾಲ್ಕನೇ ಬಾರಿಗೆ ಗೆಲುವು ಸಾಧಿಸಿದ್ದರು.
ಈ ಚುನಾವಣೆಯಲ್ಲಿ ಹಲವು ಸುತ್ತಿನ ಮಾತುಕತೆ ಸಮೀಕ್ಷೆಗಳ ವರದಿ ಆಧರಿಸಿ ಹೊಸ ಮುಖ ಸಂಯುಕ್ತಾ ಪಾಟೀಲ ಅವರನ್ನು ಕಣಕ್ಕಿಳಿಸುವ ಮೂಲಕ ತನ್ನ ಅಭ್ಯರ್ಥಿಯನ್ನು ಮತ್ತೆ ಬದಲಾವಣೆ ಮಾಡಿದೆ. ಐದನೇ ಬಾರಿಗೆ ಕಣಕ್ಕಿಳಿದಿರುವ ಪಿ.ಸಿ.ಗದ್ದಿಗೌಡರ ಅವರನ್ನು ಸೋಲಿಸಲು ಕಾಂಗ್ರೆಸ್ ಹೊಸಬರ ಮೊರೆ ಹೋಗುವುದನ್ನು ಮುಂದುವರೆಸಿದೆ.
ಲೋಕಸಭಾ ಕ್ಷೇತ್ರದಲ್ಲಿ ಒಟ್ಟು ಮತದಾರರು 18,02,462. ಇದರಲ್ಲಿ ಪುರುಷರು 8,93,698. ಮಹಿಳೆಯರು 9,08,664. ತೃತೀಯ ಲಿಂಗದ 100 ಮತದಾರರಿದ್ದಾರೆ.
ಮುಧೋಳ, ತೇರದಾಳ, ಜಮಖಂಡಿ, ಬೀಳಗಿ, ಬಾದಾಮಿ, ಬಾಗಲಕೋಟೆ, ಹುನಗುಂದ ಹಾಗೂ ಗದಗ ಜಿಲ್ಲೆಯ ನರಗುಂದ ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿದೆ.ತೇರದಾಳ ಮತ್ತು ಜಮಖಂಡಿ ಕ್ಷೇತ್ರದಲ್ಲಿ ಬಿಜೆಪಿ ಶಾಸಕರು ಇದ್ದರೆ ಉಳಿದ ಆರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಶಾಸಕರು ಇದ್ದಾರೆ.
ಮೇಲ್ನೋಟಕ್ಕೆ ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರವಾದ ವಾತಾವರಣ ಕಂಡುಬರುತ್ತಿದೆಯಾದರೂ ಕೂಡ, ಕಳೆದ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ವೀಣಾ ಕಾಶಪ್ಪನವರ್ ಅವರ ಅಸಮಾಧಾನ ದೊಡ್ಡ ಪರಿಣಾಮ ಬೀರುವ ಸಾಧ್ಯತೆ ಇದೆ ತಮ್ಮ ಪತ್ನಿಗೆ ಟಿಕೆಟ್ ಸಿಗದ ಕಾರಣ ಮುನಿಸಿಕೊಂಡಿರುವ ಹುನಗುಂದ ಕ್ಷೇತ್ರದ ಶಾಸಕ ವಿಜಯಾನಂದ ಕಾಶಪ್ಪನವರ್ ಮೇಲ್ನೋಟಕ್ಕೆ ಕಾಂಗ್ರೆಸ್ ಅಭ್ಯರ್ಥಿಯ ಪರ ಪ್ರಚಾರ ಮಾಡುವಂತೆ ಕಂಡು ಬರುತ್ತಿದ್ದರು ಅವರು ನೀಡುವ ಒಳೇಟು, ಆತಂಕ ಮೂಡಿಸಿದೆ.
ಇದರ ನಡುವೆಯೂ ಸಚಿವ ಶಿವಾನಂದ ಪಾಟೀಲ್ ಅವರು ತಮ್ಮ ಮಗಳ ಗೆಲುವಿಗಾಗಿ ಟೊಂಕ ಕಟ್ಟಿ ದುಡಿಯುತ್ತಿದ್ದಾರೆ. ಎಲ್ಲಾ ಶಾಸಕರನ್ನು ಮತ್ತು ಪಕ್ಷದ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುತ್ತಿರುವುದು ಸಂಯುಕ್ತ ಪಾಟೀಲ್ ಅವರಿಗೆ ವರದಾನವಾಗಿದೆ ಶ್ರೀತರ ಜೊತೆಯಲ್ಲಿ ಅತಿ ಹೆಚ್ಚಿನ ಪ್ರಮಾಣದಲ್ಲಿರುವ ಮಹಿಳಾ ಮತದಾರರು ಹಾಗೂ ಸರ್ಕಾರದ ಗ್ಯಾರಂಟಿಗಳು ಕೈ ಹಿಡಿಯಲಿವೆ ಎಂಬ ವಿಶ್ವಾಸದಲ್ಲಿದ್ದಾರೆ.
ಇನ್ನು ಬಿಜೆಪಿ ಅಭ್ಯರ್ಥಿ ಗದ್ದಿಗೌಡರ್ ಕೊಂಚಮಟ್ಟಿನ ಆಡಳಿತ ವಿರೋಧಿ ಅಲೆ ಎದುರಿಸುತ್ತಿದ್ದಾರೆ. ಆದರೆ ಕ್ಷೇತ್ರದಲ್ಲಿ ಕಂಡುಬರುವ ಪ್ರಧಾನಿ ನರೇಂದ್ರ ಮೋದಿ ಪರವಾದ ಅಲೆ ಹಾಗೂ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹೆಚ್ಚಿನ ಪ್ರಮಾಣದಲ್ಲಿ ಪ್ರಭಾವ ಒಂದಿದ್ದು ಇವರನ್ನು ಮತ್ತೊಂದು ಅವಧಿಗೆ ಗೆಲುವಿನ ದಡ ಸೇರಿಸುತ್ತಾರೆ ಎಂಬ ವಿಶ್ವಾಸದಲ್ಲಿದ್ದಾರೆ.
7 ಪ್ರತಿಕ್ರಿಯೆಗಳು
срочная наркологическая помощь срочная наркологическая помощь .
скорая наркологическая помощь скорая наркологическая помощь .
скорая наркологическая москва скорая наркологическая москва .
наркологическая скорая бесплатная наркологическая скорая бесплатная .
малый бизнес примеры малый бизнес примеры .
Снять алкогольную интоксикацию на дому https://fizioterapijakeskic.com .
instagram tagged posts http://www.anon-story-view.com/ .