ಬೆಂಗಳೂರು, ಜ.03 – ಪ್ರತಿಷ್ಠಿತ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ (Bangalore Film Festival) ಫೆಬ್ರವರಿ 29 ರಿಂದ ಮಾರ್ಚ್ 7 ರವರೆಗೆ ನಡೆಯಲಿದ್ದು,ಮಾನವೀಯತೆಯ ಸಂದೇಶಗಳು ಈ ಬಾರಿ ಚಿತ್ರೋತ್ಸವದ ಪ್ರಮುಖ ಆಶಯವಾಗಿರಲಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಸಂಘಟನಾ ಸಮಿತಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ 15 ನೇ ಆವೃತ್ತಿಯನ್ನು ಫೆಬ್ರವರಿ 29 ರ ಸಂಜೆ ಉದ್ಘಾಟನೆಯನ್ನು ವಿಧಾನಸೌಧದ ಮುಂಭಾಗದಲ್ಲಿ ನೆರವೇರಿಸಲಾಗುವುದು. ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ದೇಶವಿದೇಶಗಳಲ್ಲಿ ಮನ್ನಣೆ ಪಡೆದಿರುವ ಚಿತ್ರೋತ್ಸವವಾಗಿದ್ದು, ವಿದೇಶಿ ಚಿತ್ರಗಳನ್ನು ಪ್ರದರ್ಶೀಸಲಾಗುವುದಲ್ಲದೆ, ಕನ್ನಡ ಸೇರಿದಂತೆ ದೇಶದ ವಿವಿಧ ಭಾಷಾ ಚಿತ್ರಗಳನ್ನು ಪ್ರದರ್ಶಿಸಲಾಗುವುದು. ಮಾರ್ಚ್ 7 ರಂದು ಸಮಾರೋಪ ಸಮಾರಂಭ ನಡೆಯಲಿದ್ದು ಅಂದು ರಾಜ್ಯಪಾಲರು ಪ್ರಶಸ್ತಿಗಳನ್ನು ವಿತರಿಸಲಿದ್ದಾರೆ. ಸಂಘಟನಾ ಸಮಿತಿ ಸಭೆಯ ಜೊತೆಗೆ ಕೋರ್ ಸಮಿತಿಯೂ ರಚನೆಯಾಗಿದ್ದು, ಸಮಾರಂಭ ಯಾವ ರೀತಿ ಏರ್ಪಡಿಸಬೇಕೆಂದು ತೀರ್ಮಾನವಾಗುತ್ತದೆ. ಕೋಮುವಾದದ, ಶಾಂತಿ, ಸಮಾನತೆ, ಲಿಂಗ ಸಮಾನತೆ, ಸೌಹಾರ್ದತೆ, ಮಾನವೀಯತೆಯ ಸಂದೇಶಗಳು ಸಮಾಜಕ್ಕೆ ತಲುಪಬೇಕು. ಬಹುತ್ವಕ್ಕೆ ಹೆಚ್ಚು ಒತ್ತು ಕೊಡುವ ರೀತಿಯಲ್ಲಿ ಚಲನಚಿತ್ರೋತ್ಸವ ನಡೆಯಲಿದೆ.
ಚಿತ್ರೋತ್ಸವವನ್ನು ಹೆಚ್ಚು ಜನಪ್ರಿಯಗೊಳಿಸುವ ನಿಟ್ಟಿನಲ್ಲಿ ಅಗತ್ಯವಿರುವ ಆರ್ಥಿಕ ನೆರವನ್ನು ಸರ್ಕಾರ ಒದಗಿಸಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಹಿಂದೆ ವಿಧಾನಸೌಧದ ಮುಂಭಾಗದಲ್ಲಿಯೇ ಅಂತರರಾಷ್ಟ್ರಿಯ ಚಲನಚಿತ್ರೋತ್ಸವದ ಉದ್ಘಾಟನೆಯಾಗುತ್ತಿತ್ತು. ದೇಶವಿದೇಶದ ಸಿನಿರಂಗದ ಪ್ರಖ್ಯಾತ ಕಲಾವಿದರನ್ನು ಕರೆಸಲಾಗುತ್ತಿದೆ. ಈ ಬಗ್ಗೆ ಇಂದಿನ ಸಭೆಯಲ್ಲಿ ಚರ್ಚಿಸಲಾಗಿದ್ದು, ಅಂತರರಾಷ್ಟ್ರಿಯ ಚಲನಚಿತ್ರೋತ್ಸವವನ್ನು ಯಶಸ್ವಿಯಾಗಲಿದೆ ಎಂಬ ವಿಶ್ವಾಸವಿದೆ ಎಂದರು.


6 ಪ್ರತಿಕ್ರಿಯೆಗಳು
Harness the power of luck with state-of-the-art casino software. In crowncoinscasino, video poker and keno await your skills. Start now and claim your fortune!
Sweet Bonanza is pure sugar-fueled excitement from Pragmatic Play. Pay-anywhere sweet bonanza pragmatic play wins and free spins with multipliers await. Jump in now!
Feel the fury of fortune on fast reels. buffalo slot features sunset scatters, wild wins, and massive minis/majors. Charge ahead!
chumba online casino welcomes you with free Sweeps Coins and premium slot action. Daily bonuses keep the wins coming — redeem for cash prizes anytime. Play today!
No boring verification loops for most players. Deposit stake promo code > play > win > withdraw. That simple.
Ready to win big from home? Sign up at DraftKings online gambling Casino now and get 500 bonus spins after a $5 wager, plus 100% of your net losses back up to $1,000 on day one. Join the action with massive jackpots and premium live dealer experiences!