ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣವು 2022ರ ಸ್ಕೈಟ್ರಾಕ್ಸ್ ವರ್ಲ್ಡ್ ಏರ್‌ಪೋರ್ಟ್ ಅವಾರ್ಡ್ ಪಟ್ಟಿಯಲ್ಲಿ ಭಾರತ ಮತ್ತು ದಕ್ಷಿಣ ಏಷ್ಯಾದ ಅತ್ಯುತ್ತಮ ಪ್ರಾದೇಶಿಕ ವಿಮಾನ ನಿಲ್ದಾಣ ಪ್ರಶಸ್ತಿಯನ್ನು ಪಡೆದುಕೊಂಡಿದೆ.
ಜಾಗತಿಕವಾಗಿ ನಡೆಸಿದ ಸಮೀಕ್ಷೆಯಲ್ಲಿ ಗ್ರಾಹಕರ ಪ್ರತಿಕ್ರಿಯೆಯನ್ನು ಆಧರಿಸಿ ಈ ಪ್ರಶಸ್ತಿ ನೀಡಲಾಗಿದೆ.
ಚೆಕ್-ಇನ್‌ನಿಂದ ಆಗಮನ, ಟ್ರಾನ್ಸ್ಫರ್, ಶಾಪಿಂಗ್, ಭದ್ರತೆ, ವಲಸೆ ಮತ್ತು ನಿರ್ಗಮನದ ಗೇಟ್‌ಗಳಲ್ಲಿನ ವ್ಯವಸ್ಥೆಗಳವರೆಗಿನ ಗ್ರಾಹಕರ ಅನುಭವವನ್ನು ಸಮೀಕ್ಷೆ ಯು ಮೂಲಕ ಮೌಲ್ಯಮಾಪನ ಮಾಡಲಾಗಿದೆ.
ಈ ವರ್ಷದ ಆರಂಭದಲ್ಲಿ ನಡೆದ ವಿಂಗ್ಸ್ ಇಂಡಿಯಾ ಅವಾರ್ಡ್ ಗಳಲ್ಲಿ ಬೆಂಗಳೂರು ವಿಮಾನ ನಿಲ್ದಾಣವು ಅತ್ಯುತ್ತಮ ವಿಮಾನ ನಿಲ್ದಾಣ ಮತ್ತು ಏವಿಯೇಷನ್ ಇನ್ನೋವೇಶನ್ ಪ್ರಶಸ್ತಿಯನ್ನು ಗೆದ್ದುಕೊಂಡಿತ್ತು.
ಬೆಂಗಳೂರು ವಿಮಾನ ನಿಲ್ದಾಣಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ!
Previous Articleಅಪ್ಪನ ಕನಸಿನ ಕೋಕು ಕಿಚನ್ ಪ್ರಾರಂಭಿಸಿದ ಸೃಜನ್
Next Article ಶಾಲೆ ಉಳಿವಿಗಾಗಿ ಶಾಲಾ ಮಕ್ಕಳ ಹೋರಾಟ