ಬೆಳಗಾವಿ: ಜಿಲ್ಲೆಯ ಮೂಡಲಗಿ ಪಟ್ಟಣದಲ್ಲಿ 7ಭ್ರೂಣಗಳ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ
ಭ್ರೂಣಗಳನ್ನು ಎಸೆದಿದ್ದ ಆಸ್ಪತ್ರೆ ಸೀಜ್ ಮಾಡಲಾಗಿದೆ. ಡಿಎಚ್‌ಒ ಹಾಗೂ ಪೊಲೀಸರು
ಮೂಡಲಗಿ ಪಟ್ಟಣದಲ್ಲಿರುವ ವೆಂಕಟೇಶ್ ಹೆರಿಗೆ ಆಸ್ಪತ್ರೆ ಮತ್ತು ಸ್ಕ್ಯಾನಿಂಗ್ ಸೆಂಟರನ್ನು ಸೀಜ್ ಮಾಡಿದ್ದಾರೆ.
ಬೆಳಗಾವಿ ಜಿಲ್ಲೆಯ ಮೂಡಲಗಿ ಪಟ್ಟಣದಲ್ಲಿರುವ ಆಸ್ಪತ್ರೆಮೂರು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದೆ.
ಪೊಲೀಸರ ದಾಳಿ ಭೀತಿಯಿಂದ ಆಸ್ಪತ್ರೆ ಸಿಬ್ಬಂದಿ ರಾತ್ರೋರಾತ್ರಿ ಏಳು ಭ್ರೂಣಗಳನ್ನ ಹಳ್ಳಕ್ಕೆ ಎಸೆದಿದ್ದಾರೆ ಎಂದು ತಿಳಿದುಬಂದಿದೆ.
ಜೂನ್.23 ರಾತ್ರಿ ಐದು ಬಾಟಲ್‌ಗಳಲ್ಲಿ ಏಳು ಭ್ರೂಣ ಹಳ್ಳಕ್ಕೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ
ಪ್ರಾಥಮಿಕ ತನಿಖೆಯಲ್ಲಿ ಆಸ್ಪತ್ರೆ ಸಿಬ್ಬಂದಿ ಎಡವಟ್ಟು ಬಯಲಾಗಿತ್ತು. ಈ ಕಾರಣದಿಂದ
ಆಸ್ಪತ್ರೆ ಸೀಜ್ ಮಾಡಿ ಪ್ರಕರಣ ದಾಖಲಿಸಿಕೊಂಡ ಮೂಡಲಗಿ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ತಮ್ಮದೇ ಆಸ್ಪತ್ರೆ ಭ್ರೂಣಗಳು ಅಂತಾ ವೆಂಕಟೇಶ ಆಸ್ಪತ್ರೆ ಆಡಳಿತ ಮಂಡಳಿ ತಪ್ಪೊಪ್ಪಿಕೊಂಡಿದೆ ಎಂದು ತಿಳಿದು ಬಂದಿದೆ.
ನಿಯಮ ಗಾಳಿಗೆ ತೂರಿ ಸ್ಕ್ಯಾನಿಂಗ್ ಸೆಂಟರ್ ನಲ್ಲಿ ಲಿಂಗ ಪತ್ತೆ ಹಚ್ಚುತ್ತಿದ್ರಾ ಆಸ್ಪತ್ರೆಯವರು? ಎಂಬ ಚರ್ಚೆ ಜಿಲ್ಲೆಯಾದ್ಯಂತ ವ್ಯಾಪಕವಾಗಿದೆ.
ಬೆಳಗಾವಿಯಲ್ಲಿ ಭ್ರೂಣ ಪತ್ತೆ ಪ್ರಕರಣ: ಖಾಸಗಿ ಆಸ್ಪತ್ರೆ ಸೀಜ್…!
Previous Articleರಾಜ್ಯದ ವಿವಿಧೆಡೆ ಲಘು ಭೂಕಂಪ: ಜನರಿಗೆ ಆತಂಕ
Next Article ಮಂತ್ರಿಗ್ರೂಪ್ ಎಂಡಿ ಸುಶೀಲ್ ವಶಕ್ಕೆ