ಬೆಂಗಳೂರು , ಅ.13 – ರಾಜಧಾನಿ ಬೆಂಗಳೂರಿನ ಹಲವು ಉದ್ಯಮಿಗಳು, ಗುತ್ತಿಗೆದಾರರ ಮೇಲೆ ನಡೆದಿರುವ ಐ.ಟಿ.ದಾಳಿ (IT Raid) ರಾಜಕೀಯ ಪ್ರೇರಿತ ಎಂದು ಅಪಾದಿಸಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರಾಜಕೀಯ ಉದ್ದೇಶವಿಲ್ಲದೆ ದೇಶದಲ್ಲಿ ಐಟಿ ದಾಳಿ ನಡೆಯುವುದಿಲ್ಲ” ಎಂದು ವ್ಯಾಖ್ಯಾನಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜಕೀಯ ಇಲ್ಲದೆ ಯಾವ ಐಟಿ ದಾಳಿ ನಡೆಯುವುದಿಲ್ಲ. ಕೇವಲ ನಮ್ಮಲ್ಲಿ ಮಾತ್ರ ಅಲ್ಲ ಬೇರೆ ರಾಜ್ಯಗಳಲ್ಲೂ ರಾಜಕೀಯ ಪ್ರೇರಿತ ಐಟಿ ದಾಳಿ ಆಗುತ್ತಿವೆ” ಎಂದು ತಿಳಿಸಿದರು.
ಕೆಂಪಣ್ಣ ಆಂತಕ ಪಡಬೇಕಿಲ್ಲ ಗುತ್ತಿಗೆದಾರರ ಕಾಮಗಾರಿ ಬಿಲ್ ಪಾವತಿ ವಿಚಾರದಲ್ಲಿ ಕೆಂಪಣ್ಣ ಅವರು ಆತಂಕ ಪಡುವ ಅಗತ್ಯವಿಲ್ಲ. ಏನಾದರೂ ಇದ್ದರೆ ಬಂದು ನಮ್ಮ ಬಳಿ ಮಾತನಾಡಲಿ. ನಾವು ನ್ಯಾಯ ಒದಗಿಸುತ್ತೇವೆ. ಕೆಂಪಣ್ಣ ಅವರ ಮನವಿ ಮೇರೆಗೆ ನಾವು ತನಿಖೆ ಪಕ್ಕಕ್ಕಿಟ್ಟು, ಆದ್ಯತೆ ಮೇರೆಗೆ ಕಾಮಗಾರಿಗಳ 60-70% ಹಣ ಬಿಡುಗಡೆ ಮಾಡಿದ್ದೇವೆ ಎಂದು ತಿಳಿಸಿದರು.
ಬಿಲ್ ಪಾವತಿ ಸಮಯದಲ್ಲಿ ಜಿಎಸ್ ಟಿ ಕೂಡ ಪಾವತಿ ಮಾಡಬೇಕು ಹೀಗಾಗಿ ತನಿಖೆ ವರದಿ ಬರುವ ಮುನ್ನವೇ ನಾವು ಸುಮಾರು ಮುಕ್ಕಾಲು ಭಾಗ ಹಣ ಬಿಡುಗಡೆ ಮಾಡಿದ್ದೇವೆ” ಎಂದು ಹೇಳಿದರು ಕೆಂಪಣ್ಣ ಸಚಿವರ ವಿರುದ್ಧ ಆರೋಪ ಮಾಡುತ್ತಿಲ್ಲ ಕೇವಲ ಅಧಿಕಾರಿಗಳ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು ಕೇಳಿದಾಗ, “ಈ ಬಗ್ಗೆ ನಮಗೆ ಮಾಹಿತಿ ಇಲ್ಲ. ಸರಿಯಾದ ತನಿಖೆ ನಡೆಯುವವರೆಗೂ ಪ್ರತಿಕ್ರಿಯೆ ನೀಡುವುದಿಲ್ಲ” ಎಂದು ತಿಳಿಸಿದರು.