Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಭೋವಿ ನಿಗಮದ ಎಂ.ಡಿ.ಬಂಧನ..
    ಸುದ್ದಿ

    ಭೋವಿ ನಿಗಮದ ಎಂ.ಡಿ.ಬಂಧನ..

    vartha chakraBy vartha chakraಜೂನ್ 16, 2022Updated:ಜೂನ್ 16, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆಯ ಉದ್ಯಮಶೀಲತಾ ಯೋಜನೆಯ ₹ 150 ಕೋಟಿ ಅನುದಾನವನ್ನು ದುರ್ಬಳಕೆ ಮಾಡಿಕೊಂಡ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ತನಿಖೆಗೆ ಅಸಹಕಾರ ತೋರಿದ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಲೀಲಾವತಿ ಅವರನ್ನು ಭ್ರಷ್ಟಾಚಾರ ನಿಗ್ರಹ ದಳ ಬಂಧಿಸಿದೆ.
    2018–19, 2019–20 ಮತ್ತು 2020–21ನೇ ಸಾಲಿನಲ್ಲಿ ಉದ್ಯಮಶೀಲತಾ ಯೋಜನೆಯ ಫಲಾನುಭವಿಗಳ ಬ್ಯಾಂಕ್‌ ಖಾತೆಗೆ ಮಂಜೂರಾದ ಮೊತ್ತಕ್ಕಿಂತಲೂ ಹೆಚ್ಚು ಜಮೆ ಮಾಡಿರುವುದು ಹಾಗು ನಕಲಿ ಫಲಾನುಭವಿಗಳ ಪಟ್ಟಿಯನ್ನು ಸೃಷ್ಟಿಸಿ ₹ 150 ಕೋಟಿ ಅವ್ಯವಹಾರ ನಡೆಸಿರುವ ಆರೋಪದ ಮೇಲೆ ಲೀಲಾವತಿ ಹಾಗೂ ನಿಗಮದ ಪ್ರಧಾನ ವ್ಯವಸ್ಥಾಪಕರೂ ಆಗಿರುವ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯವಸ್ಥಾಪಕ ನಾಗರಾಜಪ್ಪ ವಿರುದ್ಧ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ನಿವಾಸಿಯೊಬ್ಬರು ಎಸಿಬಿಗೆ ದೂರು ನೀಡಿದ್ದರು.

    ‘ಇಬ್ಬರೂ ಅಧಿಕಾರಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸಿರುವ ಎಸಿಬಿ ಬೆಂಗಳೂರು ನಗರ ಘಟಕದ ಅಧಿಕಾರಿಗಳು, ತನಿಖೆ ನಡೆಸುತ್ತಿದ್ದಾರೆ. ಪ್ರಕರಣದ ತನಿಖೆಗೆ ಅಗತ್ಯವಿರುವ ಕಡತಗಳನ್ನು ಒದಗಿಸುವಂತೆ ಲೀಲಾವತಿ ಅವರಿಗೆ ಸೂಚಿಸಲಾಗಿತ್ತು. ಆದರೆ, ಕಡತಗಳನ್ನು ಒದಗಿಸದೇ ಅಸಹಕಾರ ತೋರುತ್ತಿದ್ದರು. ಈ ಕಾರಣದಿಂದ ಅವರನ್ನು ಬಂಧಿಸಿದ್ದು, ನ್ಯಾಯಾಲಯದ ಆದೇಶದಂತೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ’ ಎಂದು ಎಸಿಬಿ ತಿಳಿಸಿದೆ.

    ಭೋವಿ ಅಭಿವೃದ್ಧಿ ನಿಗಮದಲ್ಲಿ ಸರ್ಕಾರದ ಅನುದಾನ ದುರ್ಬಳಕೆ ಮಾಡಿರುವುದು ಮತ್ತು ಫಲಾನುಭವಿಗಳಿಗೆ ವಂಚಿಸಿರುವ ಆರೋಪಕ್ಕೆ ಸಂಬಂಧಿಸಿದಂತೆ ಕೆಲವು ತಿಂಗಳುಗಳಿಂದ ಈಚೆಗೆ ಎಸಿಬಿ ಹಲವು ಪ್ರಕರಣಗಳನ್ನು ದಾಖಲಿಸಿತ್ತು. ನಾಗರಾಜಪ್ಪ ಸೇರಿದಂತೆ ಕೆಲವು ಅಧಿಕಾರಿಗಳ ವಿರುದ್ಧ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದಡಿಯೂ ಮೊಕದ್ದಮೆ ದಾಖಲಿಸಲಾಗಿದೆ.

    Verbattle
    Verbattle
    Verbattle
    Government
    Share. Facebook Twitter Pinterest LinkedIn Tumblr Email WhatsApp
    Previous Articleಕೋವಿಡ್ ಹೆಚ್ಚಳ..!
    Next Article ಭರ್ಜರಿ ಸದ್ದು ಮಾಡುತ್ತಿರುವ ಹರಿಕಥೆಯಲ್ಲ ಗಿರಿಕಥೆ
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೇ ಉದ್ಯೋಗ
    • LarryCax ರಲ್ಲಿ ನಾಲ್ವರಿಗೆ ಒಲಿದ ಅದೃಷ್ಟ !
    • LeonardReawn ರಲ್ಲಿ Alcohol ಇಲ್ಲದೆ ಪಾರ್ಟಿ ನಡೆಯುತ್ತಾ?
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.