Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪ್ರಭಾವಿಗಳಿಗೆ ಉರುಳಾಗಲಿದೆ Bitcoin ಹಗರಣ
    ಅಪರಾಧ

    ಪ್ರಭಾವಿಗಳಿಗೆ ಉರುಳಾಗಲಿದೆ Bitcoin ಹಗರಣ

    vartha chakraBy vartha chakraಜೂನ್ 16, 2023Updated:ಜೂನ್ 16, 2023ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Courtesy : Forbes
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜೂ.16 – ರಾಜ್ಯ  ರಾಜಕೀಯದಲ್ಲಿ ಸಂಚಲನ ಮೂಡಿಸಿದ್ದ ಕೋಟ್ಯಾಂತರ ಮೌಲ್ಯದ ಬಿಟ್ ಕಾಯಿನ್ ಹಗರಣದ ಉರುಳು ಇದೀಗ ಬಿಜೆಪಿ ನಾಯಕರು ಮತ್ತು ಗೃಹ ಇಲಾಖೆಯ ಹಿರಿಯ ಅಧಿಕಾರಿಗಳನ್ನು ಸುತ್ತಿಕೊಳ್ಳುವ ಸಾಧ್ಯತೆ ಇದೆ.
    ಇತ್ತೀಚಿನ ವರ್ಷಗಳಲ್ಲೇ ಅತ್ಯಾಧುನಿಕ ತಂತ್ರಜ್ಞಾನ ಮತ್ತು ಬುದ್ಧಿಮತ್ತೆಯನ್ನು ಬಳಸಿ ನಡೆಸಲಾದ ಬಹುಕೋಟಿ ಅಕ್ರಮ ಕರ್ನಾಟಕ ಅಷ್ಟೇ ಅಲ್ಲ ಹೊರ ದೇಶಗಳನ್ನು ಆವರಿಸಿಕೊಂಡಿದೆ. ಈ ಹಗರಣದ ಪ್ರಮುಖ ಆರೋಪಿಗಳಿಂದ ಈ ಹಿಂದೆ ಸರ್ಕಾರದಲ್ಲಿ ಪ್ರಭಾವಿಗಳಾಗಿದ್ದವರ ಖಾತೆಗೆ ಭಾರಿ ಮೊತ್ತದ ಹಣ ಸಂದಾಯವಾಗಿದೆ ಎಂಬ ಆರೋಪ ಕೇಳಿ ಬಂದಿತ್ತು.
    ಈ ಆಕ್ರಮದಲ್ಲಿ ಪ್ರಭಾವಿ ರಾಜಕಾರಣಿಗಳ ಕುಟುಂಬ ಸದಸ್ಯರು ಮತ್ತು ಹಿರಿಯ ಅಧಿಕಾರಿಗಳು ಶಾಮಿಯರಾಗಿದ್ದಾರೆ ಎಂಬ ದೂರುಗಳು ಕೇಳಿಬಂದಿದ್ದು ರಾಜ್ಯ ರಾಜಕಾರಣದಲ್ಲಿ ಕೋಲಾಹಲವನ್ನೇ ಸೃಷ್ಟಿಸಿತ್ತು ಇದೀಗ ನೂತನ ಸರ್ಕಾರ ಬಿಟ್ ಕಾಯಿನ್ ಹಗರಣದ ಬಗ್ಗೆ ಮರು ತನಿಖೆಗೆ ನಿರ್ಧರಿಸಿದೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಸದ್ಯ ಸ್ಥಗಿತಗೊಂಡಿರುವ ಬಿಟ್ ಕಾಯಿನ್ ಹಗರಣವನ್ನು ಮರು ತನಿಖೆ ಮಾಡಲು ನಿರ್ಧರಿಸಲಾಗಿದೆ ಈ ಹಗರಣದ ತನಿಖೆಯನ್ನು ಎಲ್ಲಾ ಅಯಾಮಗಳಲ್ಲಿ‌ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
    ಬಿಜೆಪಿಯವರು ಈಗಾಗಲೇ ಈ ವಿಚಾರವಾಗಿ ಕುಣಿದಾಡುತ್ತಿದ್ದಾರೆ. ನಮ್ಮ ಸರ್ಕಾರ ಬಂದು 20 ದಿನ ಆಗಿದೆ ಅಷ್ಟೇ. ಅವರು ಸ್ವಲ್ಪ ಸಮಾಧಾನದಿಂದ ಇರುವುದು ಒಳ್ಳೆಯದು. ಈ ಪ್ರಕರಣದ ಮರು ಪರಿಶೀಲನೆ ಮಾಡ್ತೇವೆ ಎಂದು ಹೇಳಿದರು.
    ಮೈಸೂರಿನಲ್ಲಿ ಬಿಟ್ ಕಾಯಿನ್ ತನಿಖೆ ವಿಚಾರವಾಗಿ ಮಾತನಾಡಿದ್ದ ಸಂಸದ ಪ್ರತಾಪ್ ಸಿಂಹ, ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೇಳಿಬಂದಿದ್ದ ಬಿಟ್ ಕಾಯಿನ್ ಹಗರಣದ ವಿಷಯವನ್ನು ಕಾಂಗ್ರೆಸ್ ನಾಯಕರು ಚುನಾವಣೆಯಲ್ಲಿ ಬಳಸಿಕೊಂಡರು. ಆದರೆ ಇವತ್ತು ಯಾಕೆ ಆ ಪ್ರಕರಣದ ಬಗ್ಗೆ ತನಿಖೆ ಆಗುತ್ತಿಲ್ಲ ಎಂದು ಪ್ರಶ್ನಿಸಿದ್ದರು.
    ಇದರ ಬಗ್ಗೆ ಪ್ರತಿಕ್ರಿಯೆ ನೀಡಿದ ಸಚಿವರು ಬಿಟ್ ಕಾಯಿನ್ ಹಗರಣವನ್ನು ಮರು ತನಿಖೆ ಮಾಡಲು ನಿರ್ಧರಿಸಲಾಗಿದ್ದು ಇದರಲ್ಲಿ ಯಾರಿಗೂ ಯಾವುದೇ ರೀತಿಯ ಅನುಮಾನಗಳು ಬೇಡ ಎಂದು ಸ್ಪಷ್ಟಪಡಿಸಿದರು.
    ಕಳೆದ 2021ರಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಿಟ್ ಕಾಯಿನ್ ಹಗರಣ ಭಾರೀ ಸದ್ದು ಮಾಡಿತ್ತು.ಬಳಿಕ ಹಗರಣದ ಬಗ್ಗೆ ನಗರದ ವಿವಿಧ ಠಾಣೆಗಳು ಕೊನೆಗೂ ಸಿಸಿಬಿ ತನಿಖೆ ಸಹ ನಡೆದಿದ್ದು ಅದು ತಾರ್ಕಿಕ ಅಂತ್ಯ ಕಂಡಿರಲಿಲ್ಲ ಹೊಸ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಮತ್ತೆ ಬಿಟ್ ಕಾಯಿನ್ ಪ್ರಕರಣವನ್ನು ಮರುಪರಿಶೀಲನೆ ಮಾಡಲಾಗುವುದು ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ.
    ಬಿಟ್‌ಕಾಯಿನ್ ಎನ್ನುವುದು 2009 ರಲ್ಲಿ ರಚಿಸಲಾದ ಡಿಜಿಟಲ್ ಕರೆನ್ಸಿಯಾಗಿದೆ.  ಸಂತೋಷಿ ನಕಮೋಟೋ ಎಂಬ ಕಾವ್ಯನಾಮದ ಸಂಸ್ಥೆಯೊಂದು ಬಿಟ್ ಕಾಯಿನ್ ವ್ಯವಸ್ಥೆಯನ್ನು ಪರಿಚಯಿಸಿದ್ದು, ಬಿಟ್ ಕಾಯಿನ್ ಅಂದರೆ ಕಣ್ಣಿಗೆ ಕಾಣಲ್ಲ. ಅದೊಂದು ಡಿಜಿಟಲ್ ಕರೆನ್ಸಿ. ಇದು ಆನ್‌ಲೈನ್ ಮತ್ತು ಇಟ್ಟಿಗೆ ಮತ್ತು ಗಾರೆ ಖರೀದಿಗೆ ಬಳಸುವ ಸಂಸ್ಕರಿಸಿದ ಡೇಟಾ ಬ್ಲಾಕ್‌ಗಳಿಂದ ಮಾಡಲ್ಪಟ್ಟ ಡಿಜಿಟಲ್ ಕ್ರಿಪ್ಟೋ ಕರೆನ್ಸಿಯಾಗಿದೆ.
    ನಗರದ ಸಿಸಿಬಿ ಪೊಲೀಸರು 2020ರ ನವೆಂಬರ್ ನಲ್ಲಿ ಶ್ರೀಕೃಷ್ಣ(ಶ್ರೀಕಿ) ಮತ್ತು ಆತನ ಸಹಚರರನ್ನು ಡ್ರಗ್ ಕೇಸ್ ಒಂದರಲ್ಲಿ ಬಂಧಿಸಿದ್ದರು. ಈ ವೇಳೆ ಶ್ರೀಕಿ ಡಾರ್ಕ್‌ನೆಟ್‌ ಮೂಲಕ ಬಿಟ್‌ಕಾಯಿನ್‌ ಬಳಸಿಕೊಂಡು ಡ್ರಗ್ಸ್ ಸಂಗ್ರಹಿಸಿದ್ದ. ಜೊತೆಗೆ ಇದನ್ನು ತಮ್ಮ ಹೈ-ಪ್ರೊಫೈಲ್ ಗ್ರಾಹಕರಿಗೂ ಮಾರಾಟ ಮಾಡುತ್ತಿದ್ದ ಎನ್ನುವ ದೂರು ಈತನ ಮೇಲೆ ದಾಖಲಾಗಿತ್ತು.

    Bitcoin ಕಾಂಗ್ರೆಸ್ ಚುನಾವಣೆ ಡ್ರಗ್ಸ್ ತಂತ್ರಜ್ಞಾನ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleರಾಜ್ಯದಲ್ಲಿ ಈಗ rice politics!
    Next Article ಮೊದಲ ಹೆಜ್ಜೆಯಲ್ಲೇ ಎಡುವುತ್ತಿದ್ದಾರಾ ಪ್ರದೀಪ್ ಈಶ್ವರ್? | Pradeep Eshwar
    vartha chakra
    • Website

    Related Posts

    ಉಗ್ರರನ್ನು ಹೊಡೆದುರುಳಿಸಿದ್ದು ಬೆಂಗಳೂರಿನ ಡ್ರೋನ್

    ಮೇ 8, 2025

    ಬೆಚ್ಚಿ ಬಿದ್ದ ಮಂಗಳೂರು

    ಮೇ 2, 2025

    ಸಿದ್ದರಾಮಯ್ಯ ಕಾಂಗ್ರೆಸ್ಸಿನಿಂದ ಉಚ್ಚಾಟನೆ ಸಾಧ್ಯವೇ..!

    ಏಪ್ರಿಲ್ 30, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಉಗ್ರರನ್ನು ಹೊಡೆದುರುಳಿಸಿದ್ದು ಬೆಂಗಳೂರಿನ ಡ್ರೋನ್

    ಗೆಲುವಿಗಾಗಿ ವಿಶೇಷ ಪೂಜೆ.

    ಆಪರೇಷನ್ ಸಿಂಧೂರ

    ಮಹಿಳೆಯರೇ‌ ಹುಷಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Floydfox ರಲ್ಲಿ ಮುಖ್ಯ ಶಿಕ್ಷಕಿ ಮಾಡಿದ ಘನಂದಾರಿ ಕೆಲಸ | Viral News
    • Dwightpoest ರಲ್ಲಿ ಸೋತ ಕಾಂಗ್ರೆಸ್ ನಾಯಕರಿಗೆ ಪಾಠ.
    • сервисные центры москвы ರಲ್ಲಿ ಕೈಲಾಸವಾಸಿಯಾದ ‘ಕಲೈವಾಣಿ’
    Latest Kannada News

    ಉಗ್ರರನ್ನು ಹೊಡೆದುರುಳಿಸಿದ್ದು ಬೆಂಗಳೂರಿನ ಡ್ರೋನ್

    ಮೇ 8, 2025

    ಗೆಲುವಿಗಾಗಿ ವಿಶೇಷ ಪೂಜೆ.

    ಮೇ 8, 2025

    ಆಪರೇಷನ್ ಸಿಂಧೂರ

    ಮೇ 7, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಯುದ್ಧದ ಎಫೆಕ್ಟ್ ಐಪಿಎಲ್ ಪಂದ್ಯವೇ ರದ್ದು #india #pakistan #worldnews #attack #sharevideo #dailyupdate
    Subscribe