ಬೆಂಗಳೂರು,ಫೆ.4-
ಕೆಲ ದಿನಗಳ ಕಾಲ ಪಕ್ಷದ ಚಟುವಟಿಕೆಗಳಿಂದ ದೂರ ಉಳಿದಿದ್ದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಇದೀಗ ಮತ್ತೊಮ್ಮೆ ಚುರುಕಾಗಿದ್ದಾರೆ. ಪಕ್ಷದ ವಿಶೇಷ ಕಾರ್ಯಕಾರಿಯಲ್ಲಿ ಪಾಲ್ಗೊಂಡ ಅವರು ಸುದ್ದಿಗಾರರೊಂದಿಗೆ ಮಾತನಾಡಿ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ನಮ್ಮ ಪಕ್ಷ 130ರಿಂದ 140 ಸ್ಥಾನಗಳನ್ನು ಪಡೆಯಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ರಾಜ್ಯ ಮತ್ತು ದೇಶದಲ್ಲಿ ಪ್ರಧಾನಿ ಮೋದಿ ಮತ್ತು BJP ಪರವಾದ ಅಲೆ ಬೀಸುತ್ತಿದೆ. ಹೀಗಾಗಿ ನಮ್ಮ ಪಕ್ಷದ ಗೆಲುವು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಹೇಳಿದರು. ಅಧಿಕಾರಕ್ಕೆ ಬರುವ ನಂಬಿಕೆಯೇ ಇಲ್ಲದ ಕಾಂಗ್ರೆಸ್‌ನಲ್ಲಿ ‘ನಾನೇ ಸಿಎಂ’ ಎಂಬ ಸಂಘರ್ಷ ಶುರುವಾಗಿದೆ. CM ಹುದ್ದೆಗಾಗಿ ನಾಯಕರು ಬಡಿದಾಡುತ್ತಿದ್ದಾರೆ. ಇಂತಹ ಪಕ್ಷ Congress ನ ನಾಯಕ ಯಾರು? Rahul Gandhi ಒಬ್ಬ ನಾಯಕರೇ ಎಂದು ಪ್ರಶ್ನಿಸಿದರು.
ಮುಂಬರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ತನ್ನ ಉಸ್ತುವಾರಿಯನ್ನಾಗಿ ಧರ್ಮೇಂದ್ರ ಪ್ರಧಾನ್ ಹಾಗೂ ಸಹ ಉಸ್ತುವಾರಿಯನ್ನಾಗಿ ಕೆ.ಅಣ್ಣಾಮಲೈ ಅವರನ್ನು ಬಿಜೆಪಿ ಹೈಕಮಾಂಡ್ ನೇಮಕ ಮಾಡಿದೆ. ಇವರಿಬ್ಬರೂ ಸಮರ್ಥರಿದ್ದಾರೆ. ಚುನಾವಣೆ ಗೆಲ್ಲಲು ನಮ್ಮ ಪಕ್ಷಕ್ಕೆ ಸಹಕಾರಿಯಾಗಲಿದ್ದಾರೆ ಎಂದರು.