ಬೆಂಗಳೂರು, ಫೆ.8: ಬಿಜೆಪಿ ಪ್ರಭಾವಿ ನಾಯಕ ಹಾಗೂ ವಿಧಾನಸಭೆಯ ಪ್ರತಿಪಕ್ಷದ ಮುಖ್ಯ ಸಚೇತಕ ಸುನಿಲ್ ಕುಮಾರ್ (Sunil Kumar) ಇದೀಗ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಬಿಜೆಪಿ ನೇತೃತ್ವದ ಸರ್ಕಾರದಲ್ಲಿ ಸುನಿಲ್ ಕುಮಾರ್ ಇಂಧನ ಸಚಿವರಾಗಿದ್ದ ವೇಳೆ ನಿರ್ಮಿಸಲಾಗಿದ್ದ
ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಎರ್ಲಪಾಡಿ ಗ್ರಾಮದ ಬೈಲೂರಿನ ಪರಶುರಾಮ ಥೀಮ್ ಪಾರ್ಕ್
ಹಾಗೂ ಪರಶುರಾಮ ಪುತ್ಥಳಿ ನಿರ್ಮಾಣ ವಿವಾದ ಇದೀಗ ಕುತೂಹಲಕರ ಘಟ್ಟ ತಲುಪಿದೆ
ಥೀಮ್ ಪಾರ್ಕ್ ಮತ್ತು ಪರಶುರಾಮ ಪ್ರತಿಮೆ ನಿರ್ಮಾಣ ಕಾಮಗಾರಿಯಲ್ಲಿ ಆಗಿರುವ ಕಳಪೆ ಹಾಗೂ ಅವ್ಯವಹಾರದ ಆರೋಪಗಳ ಬಗ್ಗೆ ಸಿಐಡಿ ತನಿಖೆಗೆ ಆದೇಶಿಸಿದ್ದಾರೆ.
ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಅವರಿಗೆ ಉಡುಪಿಯಲ್ಲಿ ಹಲವು ಸಂಘ ಸಂಸ್ಥೆಗಳು ಈ ಕುರಿತಂತೆ ದೂರು ಸಲ್ಲಿಸಿದ್ದವು.
ಕಂಚಿನ ಪರಶುರಾಮ ಪ್ರತಿಮೆ ಎಂದು ವರದಿಯಲ್ಲಿ ತಿಳಿಸಲಾಗಿತ್ತಾದರೂ,ವಾಸ್ತವವಾಗಿ ಕಂಚಿನ ಪ್ರತಿಮೆ ಹಾಕಿಲ್ಲ ಎಂದು ಹಲವರು ಮಂತ್ರಿಗಳ ಗಮನ ಸೆಳೆದಿದ್ದರು.
ಈ ಹಿನ್ನೆಲೆಯಲ್ಲಿ ತಜ್ಞರೊಂದಿಗೆ ಸ್ಥಳ ಪರಿಶೀಲನೆ ನಡೆಸಿದ ಮಂತ್ರಿಗಳಿಗೆ ಕಾಮಗಾರಿ ಹೆಸರಿನಲ್ಲಿ ಭಾರಿ ಪ್ರಮಾಣದ ಅಕ್ರಮ ನಡೆಸಿರುವುದು ಗೊತ್ತಾಗಿತ್ತು. ಈ ಹಿನ್ನೆಲೆಯಲ್ಲಿ ಅವರು, ಥೀಮ್ ಪಾರ್ಕ್ ನಿರ್ಮಾಣ ಕಾಮಗಾರಿಗೆ ಸಂಬಂಧಿಸಿದಂತೆ ತನಿಖೆ ನಡೆಸುವಂತೆ ಮುಖ್ಯಮಂತ್ರಿಯವರಿಗೆ ಪತ್ರ ಬರೆದು ಮನವಿ ಮಾಡಿದ್ದರು. ಅದರಂತೆ ಈಗ ಮುಖ್ಯಮಂತ್ರಿ ಸಿಐಡಿ ತನಿಖೆಗೆ ಆದೇಶ ಹೊರಡಿಸಿದ್ದಾರೆ.